ಗೋಕರ್ಣ: ‘ಬದುಕಿನ ಸಾರ್ಥಕತೆಗೆ ಶಿಕ್ಷಣ ಬಹು ಮುಖ್ಯ. ಸರಿಯಾದ ಕ್ರಮದಲ್ಲಿ ಶಿಕ್ಷಣ ಪಡೆಯಬೇಕು, ನಮ್ಮ ಆಲೋಚನೆಗಳು ಸಕಾರಾತ್ಮಕವಾಗಿರಬೇಕು. ಸ್ವಸ್ಥ ಸಮಾಜವನ್ನು ಕಟ್ಟಬಲ್ಲ ಜ್ಞಾನ ದೇಗುಲವೇ ಶಾಲೆ’ ಎಂದು ಕುಮಟಾ ಶಾಸಕ ದಿನಕರ ಕೆ. ಶೆಟ್ಟಿ ನುಡಿದರು.

ಗೋಕರ್ಣದ ದಂಡೆಭಾಗದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಬೆಳ್ಳಿಹಬ್ಬದ ಕಾರ್ಯಕ್ರಮವನ್ನು ಭಾನುವಾರ ಉದ್ಘಾಟಿಸಿ ಅವರು ಮಾತನಾಡಿದರು.

‘ಶಿಕ್ಷಣದ ಸಂಗಡ ಸಂಸ್ಕಾರವೂ ಮಕ್ಕಳಿಗೆ ಸಿಗಬೇಕು. ಆಗ ಮಾತ್ರ ವ್ಯಕ್ತಿ ಹೆಮ್ಮರವಾಗಿ ಬೆಳೆಯಲು ಸಾಧ್ಯ’ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಎಸ್.ಡಿ.ಎಂ.ಸಿ. ಅಧ್ಯಕ್ಷೆ ಸುಜಾತಾ ಅಂಬಿಗ ಅಧ್ಯಕ್ಷತೆ ವಹಿಸಿದ್ದರು. ಲತಾ ಎಂ. ನಾಯಕ ಹಸ್ತಪ್ರತಿ ಬಿಡುಗಡೆ ಮಾಡಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಉದಯ ನಾಯ್ಕ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರಾಜೇಂದ್ರ ಭಟ್, ಪ್ರಮುಖರಾದ ನಾಗರಾಜ ಹಿತ್ತಲಮಕ್ಕಿ, ಮಂಜುನಾಥ ಜನ್ನು, ಮಹೇಶ ಶೆಟ್ಟಿ, ಭದ್ರಕಾಳಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಸಿ.ಜಿ. ನಾಯಕ ದೊರೆ, ಬೆಳ್ಳಿಹಬ್ಬ ಸಮಿತಿಯ ಅಧ್ಯಕ್ಷ ಮಹೇಶ ಅಂಬಿಗ, ಸಮಿತಿಯ ಗೌರವಾಧ್ಯಕ್ಷ ಸತೀಶ ದೇಶಭಂಡಾರಿ, ಕುಮಾರ ದೀವಟಿಗೆ, ಮುಖ್ಯ ಶಿಕ್ಷಕ ಗಣಪತಿ ಆರ್. ನಾಯ್ಕ, ಸಹಶಿಕ್ಷಕಿ ಪಾರ್ವತಿ ಎಸ್. ಗೌಡ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260401-20-307246096

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.