ಗೌರಿಬಿದನೂರು: ನಗರದ ನ್ಯಾಷನಲ್ ಕಾಲೇಜಿನಲ್ಲಿ ಸ್ಮೈಲ್ಸ್ ಆಸ್ಪತ್ರೆ ಮತ್ತು ಮಾನಸ ಆಸ್ಪತ್ರೆಯಿಂದ ಪೈಲ್ಸ್ ಮತ್ತು ಸಂಬಂಧಿತ ಕಾಯಿಲೆಗಳ ಉಚಿತ ತಪಾಸಣಾ ಶಿಬಿರ ಭಾನುವಾರ ಹಮ್ಮಿಕೊಳ್ಳಲಾಗಿತ್ತು.

ಶಾಸಕ ಕೆ.ಎಚ್ ಪುಟ್ಟಸ್ವಾಮಿಗೌಡ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಜನರ ಒತ್ತಡದ ಜಂಜಾಟದಲ್ಲಿ ಕಾಯಿಲೆಗಳು ಸಾಮಾನ್ಯವಾಗುತ್ತಿವೆ. ಶಿಬಿರದಲ್ಲಿ ವೈದ್ಯರ ತಂಡ ಬಂದು ಚಿಕಿತ್ಸೆ ನೀಡುತ್ತದೆ. ಯಾವುದೇ ಮುಜುಗರ ಪಟ್ಟುಕೊಳ್ಳದೆ, ಅವಶ್ಯಕತೆ ಇರುವ ಜನರು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಹೇಳಿದರು.

ನ್ಯಾಷನಲ್ ಕಾಲೇಜಿನ ಪ್ರಾಂಶುಪಾಲೆ ಶೈಲಜಾ ಸಪ್ತಗಿರಿ ಮಾತನಾಡಿ, ಮನುಷ್ಯನಿಗೆ ಆರೋಗ್ಯವೇ ಮಹಾಭಾಗ್ಯ. ಒತ್ತಡದ ಜೀವನದಲ್ಲಿ ಎಲ್ಲರೂ ಆರೋಗ್ಯ ಕಾಪಾಡಿಕೊಳ್ಳುವುದು ಮುಖ್ಯವಾಗಿದೆ. ರೋಗಿಗಳು ಯಾವುದೇ ಕಾಯಿಲೆ ಇದ್ದರೂ ವೈದ್ಯರ ಬಳಿ ಯಾವುದೇ ಸಂಕೋಚವಿಲ್ಲದೆ ಸಮಸ್ಯೆ ಹೇಳಿ, ಚಿಕಿತ್ಸೆ ಪಡೆಯಬೇಕು ಎಂದು ಹೇಳಿದರು.

ಕೃಷಿಕ ಸಮಾಜದ ಅಧ್ಯಕ್ಷ ಪ್ರಭಾಕರ್ ರೆಡ್ಡಿ, ಕೆಎಚ್ಪಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶ್ರೀನಿವಾಸ್ ಗೌಡ, ಸ್ಮೈಲ್ಸ್ ಆಸ್ಪತ್ರೆ ವ್ಯವಸ್ಥಾಪಕ ಡಾ.ಪರಮೇಶ್ವರ್, ಡಾ.ನರಸಾರೆಡ್ಡಿ, ನಾಗೇಂದ್ರ, ಅಬ್ದುಲ್ಲಾ, ವರಲಕ್ಷ್ಮಿ, ಸಂಗೀತಾ, ನವ್ಯ, ಭವ್ಯ, ವಿಜಯ್, ಮಾದೇಶ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260525-16-519114906

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.