ಗುಬ್ಬಿ: ಗ್ರಾಮೀಣ ಭಾಗದಲ್ಲಿ ಉನ್ನತ ಹಾಗೂ ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶದಿಂದಲೇ ಚನ್ನಬಸವೇಶ್ವರ ಶಿಕ್ಷಣ ಸಂಸ್ಥೆ ಸ್ಥಾಪಿಸಲಾಗಿದೆ ಎಂದು ಚನ್ನಬಸವೇಶ್ವರ ಶಿಕ್ಷಣ ಸಂಸ್ಥೆ ಅಧ್ಯಕ್ಷ ಜಿ.ಎಸ್. ಬಸವರಾಜು ತಿಳಿಸಿದರು.

ಹೇರೂರಿನ ಸಿಐಟಿ ಕಾಲೇಜು ಆವರಣದಲ್ಲಿ ಬುಧವಾರ ನಡೆದ ಉಚಿತ ಕ್ಯಾಟ್ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕಳೆದ 25 ವರ್ಷಗಳಲ್ಲಿ ಈ ಸಂಸ್ಥೆಯಲ್ಲಿ ಸಾವಿರಾರು ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಉನ್ನತ ಶಿಕ್ಷಣವನ್ನು ಪಡೆದಿದ್ದಾರೆ. ಪ್ರಸ್ತುತ ದೇಶ, ವಿದೇಶಗಳಲ್ಲಿ ಕಾರ್ಯನಿರ್ವಹಿಸುತ್ತಿರುವುದು ಹೆಮ್ಮೆ ಎನಿಸುತ್ತಿದೆ. ಗ್ರಾಮೀಣ ಭಾಗದ ಹೆಣ್ಣು ಮಕ್ಕಳು ಬಂದು, ಹೋಗಲು ಅನುಕೂಲ ಇರುವುದರಿಂದ ಮನೆಯ ಬಾಗಿಲಿನಲ್ಲಿಯೇ ತಾಂತ್ರಿಕ ಶಿಕ್ಷಣ ಪಡೆಯಲು ಸಾಧ್ಯವಾಗುತ್ತಿದೆ ಎಂದು ಹೇಳಿದರು.

ಗ್ರಾಮೀಣ ಭಾಗದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ನೀಡುವ ಉದ್ದೇಶದಿಂದ ಕ್ಯಾಟ್ ಪರೀಕ್ಷೆ ನಡೆಸಲಾಗುತ್ತಿದೆ. ಪರೀಕ್ಷೆಯಲ್ಲಿ ನಿಗದಿ ಪಡಿಸಿರುವ ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ನೀಡಲಾಗುವುದು ಎಂದು ತಿಳಿಸಿದರು.

ಶಾಸಕ ಜಿ.ಬಿ. ಜ್ಯೋತಿ ಗಣೇಶ್ ಮಾತನಾಡಿ, ಆರ್ಥಿಕವಾಗಿ ಆಶಕ್ತರಾಗಿರುವ ವಿದ್ಯಾರ್ಥಿಗಳಿಗೂ ಎಂಜಿನಿಯರಿಂಗ್ ವಿದ್ಯಾಭ್ಯಾಸ ದೊರಕಿಸಿ ಕೊಡುವ ಉದ್ದೇಶದಿಂದಲೇ ಪ್ರವೇಶ ಪರೀಕ್ಷೆ ನಡೆಸಲಾಗುತ್ತಿದೆ. ಮಹಾನಗರಗಳಲ್ಲಿ ದೊರಕುವ ಎಲ್ಲ ಸೌಲಭ್ಯಗಳು ಗ್ರಾಮೀಣ ಭಾಗದ ಈ ಸಂಸ್ಥೆಯಲ್ಲೂ ದೊರಕುತ್ತಿವೆ. ಮತ್ತಷ್ಟು ಮೂಲ ಸೌಕರ್ಯಗಳನ್ನು ಹೆಚ್ಚಿಸಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡಲಾಗುವುದು. ಸಂಸ್ಥೆಯನ್ನು ಸ್ವಾಯತ್ತ ವಿಶ್ವವಿದ್ಯಾಲಯವನ್ನಾಗಿಸುವ ಆಶಯ ಹೊಂದಿದ್ದೇವೆ ಎಂದು ಹೇಳಿದರು.

ಕಾರ್ಯಕ್ರಮವನ್ನು ಉದ್ದೇಶಿಸಿ ಸಿಐಟಿ ಸಂಸ್ಥೆ ನಿರ್ದೇಶಕ ಸುರೇಶ್ ಡಿ.ಎಸ್., ಉಪ ಪ್ರಾಂಶುಪಾಲ ಶಾಂತಲಾ ಸಿ.ಪಿ. ಮಾತನಾಡಿದರು.

ಪ್ರಾಧ್ಯಾಪಕ ಜಿ.ಎಸ್. ಸುರೇಶ್, ಚೇತನ್ ಬಾಲಾಜಿ, ಅನಿಲ್ ಕುಮಾರ್, ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260514-17-1429042159

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.