ಗುಬ್ಬಿ: ಹೊಸ ಪ್ರಯತ್ನ, ಆಲೋಚನೆಯಿಂದ ಯಶಸ್ಸು ಸಿಗುತ್ತದೆ. ವಿದ್ಯಾರ್ಥಿಗಳು ಕೇವಲ ಉದ್ಯೋಗ ಪಡೆಯುವುದಕ್ಕೆ ಸೀಮಿತವಾಗದೆ, ಸಮಾಜಮುಖಿ ಚಿಂತನೆ ಬೆಳೆಸಿಕೊಳ್ಳಬೇಕು ಎಂದು ಶಾಸಕ ಜಿ.ಬಿ.ಜ್ಯೋತಿಗಣೇಶ್ ಸಲಹೆ ಮಾಡಿದರು.

ಪಟ್ಟಣದ ಚನ್ನಬಸವೇಶ್ವರ ತಾಂತ್ರಿಕ ಮಹಾವಿದ್ಯಾಲಯದಲ್ಲಿ (ಸಿಐಟಿಯು) ಶುಕ್ರವಾರ ನಡೆದ ಪದವಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದರು.

ವಿದ್ಯಾರ್ಥಿಗಳು ದೇಶದ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆ ನೀಡಬೇಕು. ಸಿಐಟಿ ಸಂಸ್ಥೆಯಲ್ಲಿ 25 ವರ್ಷಗಳಿಂದ 13 ಸಾವಿರಕ್ಕೂ ಹೆಚ್ಚು ಮಂದಿ ಶಿಕ್ಷಣ ಪಡೆದಿದ್ದಾರೆ. ದೇಶ–ವಿದೇಶಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ಸ್ವಂತ ಕಂಪನಿ ಆರಂಭಿಸಿ ಇತರರಿಗೂ ಉದ್ಯೋಗ ನೀಡುತ್ತಿದ್ದಾರೆ ಎಂದರು.

ಬೆಂಗಳೂರಿನ ನೈಷಾ ಮೊಬಿಲಿಟಿ ಟೆಕ್ ಪ್ರೈವೇಟ್ ಲಿ. ಉಪಾಧ್ಯಕ್ಷ ಅತಿಶಯ್ ಜೈನ್, ‘ತಾಂತ್ರಿಕ ಜ್ಞಾನದ ಜತೆಗೆ ಮಾನವೀಯ ಮೌಲ್ಯ ಅಳವಡಿಸಿಕೊಳ್ಳಬೇಕು. ನಿರಂತರ ಕಲಿಕೆಯ ಮನೋಭಾವ ರೂಢಿಸಿಕೊಳ್ಳಬೇಕು. ಮತ್ತಷ್ಟು ಕೌಶಲಗಳನ್ನು ಕಲಿಯಬೇಕು’ ಎಂದು ತಿಳಿಸಿದರು.

ಲುಫ್ತಾನ್ಸಾ ಸಿಸ್ಟಮ್ಸ್ ಸಂಸ್ಥೆಯ ಕಿರಣ್ ಆಡಿ, ಸಿಐಟಿ ಪ್ರಾಂಶುಪಾಲ ಡಿ.ಎಸ್.ಸುರೇಶ್, ಮುಖ್ಯ ಸಲಹೆಗಾರ ಶ್ರೀಧರ್ ಕೆ.ಎನ್.ರಾವ್, ಉಪಪ್ರಾಂಶುಪಾಲರಾದ ಸಿ.ಪಿ.ಶಾಂತಲಾ ಇತರರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260530-17-624636899

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.