ಗುಬ್ಬಿ: ಪಟ್ಟಣದ ಗುರುಭವನದಲ್ಲಿ ಭಾನುವಾರ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ನಡೆಯಿತು.

ಚುನಾವಣಾ ಅಧಿಕಾರಿ ಎಚ್.ಕೆ. ನರಸಿಂಹಮೂರ್ತಿ ಮಾತನಾಡಿ, ಬೇರೆ ಎಲ್ಲ ಸಂಘಟನೆಗಳಿಗಿಂತ ಶಿಕ್ಷಕರ ಸಂಘಟನೆಗೆ ಹೆಚ್ಚಿನ ಪ್ರಾಧಾನ್ಯ ಇದೆ. ಸಂಘಟನೆಯ ಪದಾಧಿಕಾರಿಗಳು ಜವಾಬ್ದಾರಿಯಿಂದ ಸಂಘವನ್ನು ಕಟ್ಟಿ, ಬೆಳೆಸಬೇಕು. ಶಿಕ್ಷಣ ಕ್ಷೇತ್ರದಲ್ಲಿ ಆಗಬೇಕಿರುವ ಬದಲಾವಣೆಗಳ ಬಗ್ಗೆಯೂ ಚಿಂತನೆ ನಡೆಸಬೇಕು ಎಂದು ಹೇಳಿದರು.

ಶಿಕ್ಷಕರ ಸಂಘ ಕೇವಲ ಶಿಕ್ಷಕರಿಗೆ ಸೀಮಿತವಾಗಿ ಕಾರ್ಯನಿರ್ವಹಿಸದೆ, ಇಡೀ ಶಿಕ್ಷಣ ಕ್ಷೇತ್ರದ ಎಲ್ಲ ಸಮಸ್ಯೆಗಳನ್ನು ಬಗೆಹರಿಸಿ ಗುಣಮಟ್ಟದ ಶಿಕ್ಷಣ ದೊರಕುವಂತೆ ಮಾಡಬೇಕಿದೆ ಎಂದು ಹೇಳಿದರು.

ನಿವೃತ್ತ ದೈಹಿಕ ಪರಿವೀಕ್ಷಕ ರಮೇಶ್ ಮಾತನಾಡಿ, ಶಿಕ್ಷಕರಲ್ಲಿನ ಬಣಗಳು ಕೇವಲ ಚುನಾವಣೆಗೆ ಸೀಮಿತವಾಗಿರುವಂತೆ ನೋಡಿಕೊಳ್ಳಬೇಕು. ಚುನಾವಣೆ ನಂತರ ಎಲ್ಲರೂ ಒಗ್ಗೂಡಿ ಕಾರ್ಯನಿರ್ವಹಿಸಿದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಬದಲಾವಣೆ ತರಲು ಸಾಧ್ಯವಾಗುವುದು ಎಂದರು.

ಬಿಆರ್ಸಿ ಬಿ. ಮಧುಸೂದನ್, ಅಕ್ಷರ ದಾಸೋಹ ನಿರ್ದೇಶಕ ಜಗದೀಶ್, ನಿಕಟಪೂರ್ವ ಅಧ್ಯಕ್ಷ ಮಂಜುನಾಥ್, ಜಿಲ್ಲಾಧ್ಯಕ್ಷ ತಿಮ್ಮಗೌಡ, ಪ್ರಧಾನ ಕಾರ್ಯದರ್ಶಿ ಮರುಳ ಸಿದ್ದಯ್ಯ, ಸಂಘಟನಾ ಕಾರ್ಯದರ್ಶಿ ಮೋಹನ್ ಕುಮಾರ್, ತಾಲ್ಲೂಕು ಘಟಕದ ಅಧ್ಯಕ್ಷ ಶಶಿಧರ್, ಉಪಾಧ್ಯಕ್ಷರಾದ ಸುರೇಶಯ್ಯ, ಕೋಮಲ, ಪ್ರಧಾನ ಕಾರ್ಯದರ್ಶಿ ಕಾಂತರಾಜು, ಸಹ ಕಾರ್ಯದರ್ಶಿಗಳಾದ ರಾಧಿಕಾ, ಕೆಂಪಯ್ಯ, ಸಂಘಟನಾ ಕಾರ್ಯದರ್ಶಿ ಜಗದೀಶ್, ಖಜಾಂಚಿ ಎಂ.ವಿ. ಗಂಗಾಧರಯ್ಯ, ಪದಾಧಿಕಾರಿಗಳು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260601-17-243709283

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.