ಗುಬ್ಬಿಗಾ(ನರಸಿಂಹರಾಜಪುರ): 9ರಿಂದ 12ನೇ ತರಗತಿಯಲ್ಲಿ ಅತಿ ಹೆಚ್ಚು ಅಂಕ ಪಡೆದ 10 ಬಡ ವಿದ್ಯಾರ್ಥಿಗಳಿಗೆ ಪ್ರತಿ ಜೇಸಿ ಘಟಕದಿಂದ ವಿದ್ಯಾರ್ಥಿ ವೇತನ ನೀಡುವ ಕಾರ್ಯಕ್ರಮವಿದೆ ಎಂದು ಜ್ವಾಲಾಮಾಲಿನಿ ಜೆಸಿಐ ಸಂಸ್ಥೆಯ ಅಧ್ಯಕ್ಷ ಆದರ್ಶ ಬಿ. ಗೌಡ ಹೇಳಿದರು.

ಗುಬ್ಬಿಗಾ ಗ್ರಾಮ ಪಂಚಾಯಿತಿ ಯಲ್ಲಿ ನಡೆಯುತ್ತಿದ್ದ ಮಕ್ಕಳ ಬೇಸಿಗೆ ಶಿಬಿರದಲ್ಲಿ ಜ್ವಾಲಾಮಾಲಿನಿ ಜೆಸಿಐ ಸಂಸ್ಥೆಯ ವತಿಯಿಂದ ನಡೆದ ವ್ಯಕ್ತಿತ್ವ ವಿಕಸನ ಶಿಬಿರದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜೆಸಿಐ ಸಂಸ್ಥೆ ಪ್ರಾರಂಭವಾಗಿ 110 ವರ್ಷಗಳು ತುಂಬಿದೆ. 120ಕ್ಕೂ ಹೆಚ್ಚು ದೇಶಗಳಲ್ಲಿ ಸಂಸ್ಥೆಯ ಘಟಕಗಳಿವೆ. 18ರಿಂದ 45 ವರ್ಷದ ವಯೋಮಾನದ ಯುವಜನರು ಜೆಸಿಐ ಸದಸ್ಯರಾಗಬಹುದು. ಮಕ್ಕಳು ಮೊಬೈಲ್ ಫೋನ್, ಟಿ.ವಿಯನ್ನು ನೋಡದೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಬೇಕು. ಬೇಸಿಗೆ ಶಿಬಿರದಲ್ಲಿ ಮಕ್ಕಳು ಭಾಗವಹಿಸುವುದರಿಂದ ಬೇರೆ, ಬೇರೆ ಶಾಲೆಯ ಮಕ್ಕಳ ಪರಿಚಯವಾಗಲಿದೆ ಎಂದರು.

ಗುಬ್ಬಿಗಾ ಗ್ರಾಮ ಪಂಚಾಯಿತಿಯ ಪಿ.ಡಿ.ಒ. ಸೀಮಾ ಪ್ರಾಸ್ತಾವಿಕವಾಗಿ ಮಾತನಾಡಿದರು. ಜೆಸಿಐ ಸಂಸ್ಥೆ ಕಾರ್ಯದರ್ಶಿ ರಜಿತ್ ವಗಡೆ, ಜೆಸಿಐ ಸದಸ್ಯರಾದ ಮನು ಕೂಸ್ಗಲ್, ಜೋಯಿ ಬ್ರೋ, ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಹೂವಮ್ಮ ಇದ್ದರು.

ಜೆಸಿಐ ಸಂಸ್ಥೆಯ ಸೆಲ್ಯೂಟ್ ಸೈಲೆಂಟ್ ಸ್ಟಾರ್ ಕಾರ್ಯಕ್ರಮದಡಿ ಗುಬ್ಬಿಗಾ ಗ್ರಾಮ ಪಂಚಾಯಿತಿಯಲ್ಲಿ ನೀರುಗಂಟಿಯಾಗಿ 27 ವರ್ಷದಿಂದ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿರುವ ಜೆ. ರಾಘವ ಪೂಜಾರಿ ಅವರನ್ನು ಗೌರವಿಸಲಾಯಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260418-126-209768378

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.