ಗುಡಿಬಂಡೆ: ಕರ್ನಾಟಕದಲ್ಲಿ ಪ್ರಾದೇಶಿಕ ಭಾಷೆಗಳಲ್ಲದೇ ಹೊರ ರಾಜ್ಯದವರೂ ಇದ್ದಾರೆ. ಅವರನ್ನೂ ನಮ್ಮವರೆಂದು ಭಾವಿಸಿ ಒಪ್ಪಿಕೊಳ್ಳುವ ವಿಶಾಲ ಮನಸ್ಸು ಕನ್ನಡಿಗರಲ್ಲಿದೆ. ಆದರೆ, ಈ ವೈಶಾಲ್ಯದ ಮಧ್ಯೆ ನಮ್ಮ ಭಾಷೆಯನ್ನು ಮರೆಯಬಾರದು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಕೃಷ್ಣಕುಮಾರಿ ಹೇಳಿದರು.

ಪಟ್ಟಣದ ನ್ಯೂ ವಿಷನ್ ಆಂಗ್ಲ ಶಾಲೆಯಲ್ಲಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನಿಂದ ಹಮ್ಮಿಕೊಂಡಿದ್ದ ಕನ್ನಡ ಸಾಹಿತ್ಯ ಪರಿಷತ್ತಿನ 112ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷ ಪ್ರೆಸ್ ಸುಬ್ಬರಾಯಪ್ಪ ಮಾತನಾಡಿ, ಕನ್ನಡ ಸಾಹಿತ್ಯ ಪರಿಷತ್ತಿಗೆ 112 ವರ್ಷಗಳ ಸಂಭ್ರಮ. ಕನ್ನಡ ನಾಡು, ನುಡಿ, ಸಂಸ್ಕೃತಿ ರಕ್ಷಣೆಗಾಗಿ 1915ರಲ್ಲಿ ಆಗಿನ ಮೈಸೂರು ಸಂಸ್ಥಾನದ ಅರಸ ನಾಲ್ವಡಿ ಕೃಷ್ಣರಾಜ ಒಡೆಯರ್, ಸರ್. ಎಂ. ವಿಶ್ವೇಶ್ವರಯ್ಯ ವಿಶೇಷ ಕಾಳಜಿ ವಹಿಸಿ ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆಯಾಗಿ ಪರಿಷತ್ ಸಂಸ್ಥಾಪನೆಗೊಳ್ಳಲು ಕಾರಣರಾಗಿದ್ದರು. ಆಗಿನಿಂದ ಇಂದಿನವರೆಗೂ ಅನೇಕ ಮಹನೀಯರು ಕನ್ನಡ ಕಟ್ಟುವ ಕಾರ್ಯದಲ್ಲಿ ತೊಡಗಿದ್ದಾರೆ ಎಂದರು.

ಸ.ನ. ನಾಗೇಂದ್ರ, ಗುಡಿಬಂಡೆ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಬೆಳೆದು ಬಂದ ಹಾದಿಯ ಬಗ್ಗೆ ತಿಳಿಸಿದರು.

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಪ್ರಾಧ್ಯಾಪಕ ಡಾ. ಕೆ.ಎಂ.ನಯಾಜ್ ಅಹ್ಮದ್ ಮಾತನಾಡಿ, ವ್ಯಕ್ತಿ ಪರಿಪೂರ್ಣತೆ ಪಡೆಯಬೇಕಾದರೆ ಮಾತೃಭಾಷೆಯಿಂದ ಮಾತ್ರ ಸಾಧ್ಯ. ಮಾತೃಭಾಷೆಯನ್ನು ಕಡೆಗಣಿಸಿದ ವ್ಯಕ್ತಿ ಹೆತ್ತ ತಾಯಿಯನ್ನು ಕಡೆಗಣಿಸಿದಷ್ಟೇ ಸತ್ಯ. ಕನ್ನಡಿಗನಾಗಿ ಹುಟ್ಟಿ ಕೊನೆಗೆ ಮಣ್ಣಲ್ಲಿ ಮಣ್ಣಾಗುವವರೆಗೆ ಕನ್ನಡಿಗನಾಗಿ ಬದುಕಿ ಬಾಳುವುದು ಮನುಷ್ಯತ್ವ ಎಂದರು.

ರಾಜ್ಯ ಸರ್ಕಾರ ಸಹ ಕನ್ನಡ ಭಾಷೆ ಉಳಿವಿಗೆ ದೃಢ ನಿರ್ಧಾರ ತೆಗೆಕೊಳ್ಳಬೇಕೆಂದರು.

ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಬಿ. ಮಂಜುನಾಥ ಮಾತನಾಡಿ, ಇತ್ತೀಚೆಗೆ ಯುವಜನತೆ ಪುಸ್ತಕ ಹಾಗೂ ದಿನ ಪತ್ರಿಕೆಗಳನ್ನು ಓದುವುದನ್ನೇ ಮರೆತಿದ್ದಾರೆ. ಮೊಬೈಲ್, ಸಾಮಾಜಿಕ ಜಾಲತಾಣಗಳ ವ್ಯಾಮೋಹದಲ್ಲಿ ಮುಳುಗಿದ್ದಾರೆ. ಇದರಿಂದ ಹೊರಬಂದು ಕನ್ನಡ ಭಾಷೆ ಉಳಿವಿಗೆ ಸಹಕಾರ ನೀಡಬೇಕು ಎಂದರು.

ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಎಸ್ಎಸ್ಎಲ್ಸಿಯಲ್ಲಿ ಹೆಚ್ಚು ಅಂಕಗಳಿಸಿ ತಾಲ್ಲೂಕಿಗೆ ಪ್ರಥಮ ಸ್ಥಾನ ಪಡೆದ ಶ್ರೇಷ್ಠ, ದ್ವಿತೀಯ ಸ್ಥಾನ ಪಡೆದ ಸನ್ನತಿ, ತೃತಿಯ ಸ್ಥಾನ ಪಡೆದ ಪಲ್ಲವಿ ಅವರನ್ನು ಸನ್ಮಾನಿಸಲಾಯಿತು.

ತಾಲ್ಲೂಕು ಪಂಚಾಯಿತಿ ಇಒ ನಾಗಮಣಿ, ಕನ್ನಡ ಸಾಹಿತ್ಯ ಪರಿಷತ್ತಿನ 7ನೇ ಸಮ್ಮೇಳನಾಧ್ಯಕ್ಷ ಬಿ. ಅಮೀರ್ ಜಾನ್, ಡಿ.ಎಲ್. ಪರಿಮಳ, ಎಲ್.ಎನ್. ಈಶ್ವರಪ್ಪ, ಶ್ರೀನಿವಾಸ್ ಯಾದವ್, ವಿ. ಶ್ರೀರಾಮಪ್ಪ, ಗುಂಪುಮರದ ಆನಂದ್, ಜೀವಿಕ ನಾರಾಯಣಸ್ವಾಮಿ, ಕಡೇಹಳ್ಳಿ ಕದಿರಪ್ಪ, ಆರ್. ರಾಜಪ್ಪ, ಜಿ.ವಿ. ಗಂಗಪ್ಪ, ರಾಮಾಂಜಿನೆಯ್ಯ, ಯಳವರ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260506-16-599906775

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.