ಗುಳೇದಗುಡ್ಡ: ವಿದ್ಯಾರ್ಥಿ ಜೀವನದಲ್ಲಿ ಸತತ ಅಧ್ಯಯನದಿಂದ ಮಾತ್ರ ಯಶಸ್ಸು ಸಾಧ್ಯ ಎಂದು ನಿವೃತ್ತ ಶಿಕ್ಷಕಿ ಎನ್.ಡಿ.ಹಿರೇಮಠ ಹೇಳಿದರು.

ಅವರು ಶುಕ್ರವಾರ ತಾಲ್ಲೂಕಿನ ಕೋಟೆಕಲ್ ಗ್ರಾಮದಲ್ಲಿನ ಸರ್ಕಾರಿ ಆರ್ಎಂಎಸ್ಎ ಶಾಲೆಯಲ್ಲಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಮಾತನಾಡಿದರು.

ಹಿಂದೆ ಗುರು, ಮುಂದೆ ಗುರಿ ಇರಬೇಕು. ವಿದ್ಯೆ ಯಾರ ಸ್ವತ್ತೂ ಅಲ್ಲ. ನಿಮ್ಮಲ್ಲಿ ಜ್ಞಾನದ ಹಸಿವು ಇರಬೇಕು. ಜೀವನದಲ್ಲಿ ಎಷ್ಟೇ ಕಷ್ಟ ಬಂದರೂ ಅವುಗಳನ್ನು ಮೆಟ್ಟಿನಿಲ್ಲಬೇಕು. ಅಂದಾಗ ಮಾತ್ರ ಒಬ್ಬ ವಿದ್ಯಾರ್ಥಿ ಉತ್ತಮ ಸಾಧನೆ ಮಾಡಿ ದೇಶದ ಸತ್ಪ್ರಜೆಯಾಗಿ ಹೊರಹೊಮ್ಮಲು ಸಾಧ್ಯ. ವಿದ್ಯಾರ್ಥಿಗಳು ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು ಎಂದರು.

ಸಿ.ಆರ್.ಪಿ ರಾಮಚಂದ್ರ ಭಾಪಟ್ ಮಾತನಾಡಿ, ಶಿಕ್ಷಕರು ಮೌಲ್ಯಯುತ ಶಿಕ್ಷಣವನ್ನು ವಿದ್ಯಾರ್ಥಿಗಳಿಗೆ ನೀಡಬೇಕು. ವಿದ್ಯಾರ್ಥಿಗಳು ಉತ್ತಮವಾಗಿ ಓದಿ ಒಳ್ಳೆಯ ಅಂಕಪಡೆದು ಶಾಲೆ ಹಾಗೂ ಪಾಲಕರಿಗೆ ಕೀರ್ತಿ ತರಬೇಕು ಎಂದರು.

ಶಾಲಾ ಮುಖ್ಯಶಿಕ್ಷಕ ಬಿ.ಡಿ. ಕಲ್ಯಾಣಕರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಎಸ್ಡಿಎಂಸಿ ಅಧ್ಯಕ್ಷೆ ಲೀಲಾ ಗಾಜಿ, ಉಪಾಧ್ಯಕ್ಷ ನಿಂಗಪ್ಪ ಅಬಕಾರಿ, ಸಂಗಪ್ಪ ಹಡಪದ, ಸಿದ್ರಾಮಯ್ಯ ಪುರಾಣಿಕಮಠ, ಕರಿಯಪ್ಪ ಸೀತಿಮನಿ, ಶಿಕ್ಷಕಿ ಲತಾ ಪತ್ತಾರ, ನಾಗಪ್ಪ ನಿಡಗುಂದಿ, ಆರ್.ಎಸ್.ಸುನಗಲ್ಲ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260401-19-305634881

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.