ಗುಳೇದಗುಡ್ಡ: ‘ವಿದ್ಯಾರ್ಥಿಗಳು ಅತ್ಯಂತ ಪರಿಶ್ರಮದಿಂದ ಅಧ್ಯಯನ ಮಾಡಿದರೆ ಗುರಿ ತಲುಪಲು ಸಾಧ್ಯವಾಗುತ್ತದೆ’ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಂಜಯ ಬರಗುಂಡಿ ಹೇಳಿದರು.

ಅವರು ಪಟ್ಟಣದ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯಲ್ಲಿ ಹಮ್ಮಿಕೊಂಡ ಸನ್ಮಾನ ಸಮಾರಂಭದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಪ್ರೌಢಶಾಲೆಯಲ್ಲಿ ಹೆಚ್ಚು ಅಂಕ ಗಳಿಸಿದವರನ್ನು ಗೌರವಿಸಿ ಮಾತನಾಡಿದರು.

ಮಕ್ಕಳು ಓದಿಗಾಗಿ ಹೆಚ್ಚಿನ ಜ್ಞಾನಕ್ಕಾಗಿ ಶಿಕ್ಷಕರ ಮಾರ್ಗದರ್ಶನ ಕೇಳಿದಾಗ ಶಿಕ್ಷಕರು ಮಾರ್ಗದರ್ಶನ ಮಾಡಿದ್ದಾರೆ ಹಾಗೂ ವಿದ್ಯಾರ್ಥಿಗಳ ಪರಿಶ್ರಮದ ಓದು ಹೆಚ್ಚು ಅಂಕಗಳಿಸಿ ತಾಲ್ಲೂಕಿಗೆ ಪ್ರಥಮ ಬರಲು ಸಾಧ್ಯವಾಗಿದೆ ಎಂದರು.

ಉಪ ಪ್ರಾಚಾರ್ಯ ಎಂ.ಪಿ.ಮಾಗಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಆರಂಭದಿಂದಲೇ ಮಕ್ಕಳಿಗೆ ಉತ್ತಮ ಪಾಠ ಪ್ರವಚನ ಮಾಡಲಾಗಿದೆ. ಅವರ ಶಿಕ್ಷಣ ಬಲವರ್ಧನೆಗೆ ಶಿಕ್ಷಕರು ಶ್ರಮವಹಿಸಿರುವುದರಿಂದ ಖಾಸಗಿ ಶಾಲೆಗಳಿಗೆ ಕಡಿಮೆ ಇಲ್ಲದಂತೆ ವಿದ್ಯಾರ್ಥಿನಿಯರು ಹೆಚ್ಚು ಅಂಕ ಗಳಿಸಲು ಸಾಧ್ಯವಾಗಿದೆ ಎಂದರು.

ಇದೇ ಸಂದರ್ಭದಲ್ಲಿ ನವ್ಯಶ್ರೀ ಪಾಟೀಲ ಶೇ 98,ಸುಧಾ ಮುತ್ತಲಗೇರಿ ಶೇ 96, ಹುಮೇರಾ ನಬಿವಾಲೆ ಶೇ 95 ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಎಸ್.ಡಿ.ಎಂ.ಸಿ ಅಧ್ಯಕ್ಷ ಶಿವನಗೌಡ ಪಾಟೀಲ, ರಾಜಶೇಖರ ಪಾಗಿ, ಪರ್ವತಿ ಸರ್ಕಾರಿ ಪ್ರೌಢಶಾಲೆಯ ಮುಖ್ಯಶಿಕ್ಷಕ ಎಚ್.ಕೆ.ಗುಡೂರ, ಬಾಲಕರ ಸರ್ಕಾರಿ ಪ್ರೌಢಶಾಲೆಯ ಉಪ ಪ್ರಾಚಾರ್ಯ ಎನ್.ಸಿ.ಮುದಕವಿ, ಎಸ್.ಎಸ್.ಬಿರಾದಾರ, ಎಸ್ಮಾ ಬೇಸ್ಗರ್, ಆರ್.ವಿ.ಬುಳ್ಳಾ, ಪಿ.ಎಸ್.ಪಾಟೀಲ್, ಎಂ.ಎಸ್.ಮದರಂಗಿ, ಸಂಗಮೇಶ ಕಡಿ, ಎಸ್.ಎಂ.ಗಡ್ಡಿ, ಈರಮ್ಮ ಹಾಲಬಾವಿ ದೇವರಾಜ ಅಡ್ಡಿ ಮುಂತಾದವರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260427-19-1538365067

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.