ಗುಳೇದಗುಡ್ಡ: ಭಾರತ ಗ್ರಾಮಗಳಿಂದ ಕೂಡಿದ ದೇಶ. ಗ್ರಾಮಗಳು ಅಭಿವೃದ್ಧಿಯಾದರೆ ದೇಶವೇ ಅಭಿವೃದ್ಧಿಯಾಗುತ್ತದೆ. ಗ್ರಾಮಗಳ ಅಭಿವೃದ್ಧಿಯಾಗಲು ವಿದ್ಯಾರ್ಥಿಗಳು ಸೇವಾ ಮನೋಭಾವ ರೂಢಿಸಿಕೊಳ್ಳಬೇಕೆಂದು ಹಂಸನೂರು ಶಿವಾನಂದಮಠದ ಅಭಿನವ ಬಸವರಾಜ ಸ್ವಾಮೀಜಿ ಹೇಳಿದರು.

ಅವರು ಬಾದಾಮಿಯ ಕಾಳಿದಾಸ ಪದವಿ ಮಹಾವಿದ್ಯಾಲಯ ಹಾಗೂ ಬಾಗಲಕೋಟೆ ವಿಶ್ವವಿದ್ಯಾಲಯ ಜಮಖಂಡಿ ಅವರ ಸಂಯುಕ್ತ ಆಶ್ರಯದಲ್ಲಿ ದತ್ತು ಗ್ರಾಮ ತಾಲ್ಲೂಕಿನ ರಾಘಾಪೂರು ಗ್ರಾಮದಲ್ಲಿ ಇತ್ತೀಚಿಗೆ ಜರುಗಿದ ಎನ್ಎಸ್ಎಸ್ ವಿಶೇಷ ವಾರ್ಷಿಕ ಶಿಬಿರದ ಸಮಾರೋಪ ಸಮಾರಂಭದ ಸಾನಿಧ್ಯವಹಿಸಿ ಮಾತನಾಡಿದರು.

‘ಇಂದು ಯುವಕರಲ್ಲಿ ಮಾನವೀಯ ಮೌಲ್ಯ ಕಡಿಮೆಯಾಗುತ್ತದೆ. ಚಟಗಳಿಗೆ ದಾಸರಾಗುತ್ತಿದ್ದಾರೆ ಕೆಟ್ಟ ಹವ್ಯಾಸ ಬಿಟ್ಟು ಓದುವ, ಪರಿಶ್ರಮದ ಎಲ್ಲ ಆಲೋಚನೆಗಳನ್ನು ರೂಢಿಸಿಕೊಳ್ಳಬೇಕು ಎಂದು’ ಹೇಳಿದರು.

ಕಾಳಿದಾಸ ಪದವಿ ಪೂರ್ವ ಕಾಲೇಜು ಉಪನ್ಯಾಸಕ ಎಸ್.ಎಚ್.ಕರಿಗಾರ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿ, ವಿದ್ಯಾರ್ಥಿಗಳು ಸತತ ಅಧ್ಯಯನದೊಂದಿಗೆ ಸೇವಾ ಮನೋಭಾವ ರೂಢಿಸಿಕೊಳ್ಳಬೇಕು. ಅಂದಾಗ ಹಾಕಿಕೊಂಡ ಗುರಿ ತಲುಪಲು ಸಾಧ್ಯವಾಗುತ್ತದೆ ಎಂದರು. ಸಂಸ್ಥೆಯ ಪ್ರಾಚಾರ್ಯ ಎಚ್.ಎಂ.ಸಂಗಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಹಂಸನೂರು ಗ್ರಾಮ ಪಂಚಾಯಿತಿ ಪಿಡಿಒ ಮಂಜುನಾಥ ಅರಳಿಕಟ್ಟಿ, ಯಮನಪ್ಪ ಗಿಡ್ಡನಾಯಕನಾಳ ಬಾಲು ಉಂಡಿ, ರಂಗಪ್ಪ ಡಂಬೂರ, ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಕಲ್ಲಯ್ಯ ಒಡೆಯರ, ರಂಗಪ್ಪ ದಾದಿ, ಯಮನಪ್ಪ ಕಟಾಪುರ, ಉಮೇಶ್ ಮಮಟಗೇರಿ ಎನ್ಎಸ್ಎಸ್ ಸಂಯೋಜಕರಾದ ಪಿ.ಆರ್ ವಾಗ್ಮೋಡೆ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260401-19-415390359

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.