ಗುಳೇದಗುಡ್ಡ: ಭವಿಷ್ಯತ್ತಿನಲ್ಲಿ ಶಿಕ್ಷಕರಾಗುವ ಪ್ರಶಿಕ್ಷಣಾರ್ಥಿಗಳು ಸೇವಾ ಮನೋಭಾವ ರೂಢಿಸಿಕೊಂಡು ಸಮಾಜದ ಉನ್ನತಿಗೆ ಶ್ರಮಿಸಬೇಕು ಎಂದು ಪಟ್ಟಣದ ಗುರುಸಿದ್ಧೇಶ್ವರ ಬೃಹನ್ಮಠದ ಗುರುಸಿದ್ಧ ಪಟ್ಟದಾರ್ಯ ಶ್ರೀಗಳು ಹೇಳಿದರು.

ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ವಿಜಯಪುರ ಹಾಗೂ ಗುರುಸಿದ್ಧೇಶ್ವರ ಮಹಿಳಾ ಶಿಕ್ಷಣ(ಬಿ.ಇಡಿ) ಮಹಾವಿದ್ಯಾಲಯದ ಆಶ್ರಯದಲ್ಲಿ ತಾಲ್ಲೂಕಿನ ಸಬ್ಬಲ ಹುಣಸಿ ಗ್ರಾಮದಲ್ಲಿ ಜರುಗಿದ 2025-26ನೇ ಸಾಲಿನ ಪೌರತ್ವ ತರಬೇತಿ ಶಿಬಿರ ಉದ್ಘಾಟಿಸಿ ಮಾತನಾಡಿದರು.

ಗ್ರಾಮಗಳಲ್ಲಿ ಸ್ವಚ್ಛತೆ, ಶೌಚಾಲಯ ನಿರ್ಮಾಣ ಅದರ ಉಪಯೋಗ, ಸಸಿಗಳ ನೆಡುವಿಕೆ ಉತ್ತಮ ಪರಿಸರದ ಕುರಿತು ಗ್ರಾಮದಲ್ಲಿ ಜಾಗೃತಿ ಮೂಡಿಸುವ ಮೂಲಕ ಮಾದರಿ ಕಾರ್ಯ ಮಾಡಬೇಕು ಎಂದು ಹೇಳಿದರು.

ಗುರುಸಿದ್ಧೇಶ್ವರ ವಿದ್ಯಾವರ್ಧಕ ಮತ್ತು ಸಾಂಸ್ಕೃತಿಕ ಸಂಸ್ಥೆಯ ಅಧ್ಯಕ್ಷ ರಾಜು ಜವಳಿ ಮಾತನಾಡಿ, ಇಂದು ಪರಿಸರ ಅಸಮತೋಲನವಾಗಿದೆ. ಇಂಗು ಗುಂಡಿಗಳನ್ನು ತೊಡುವ ಮೂಲಕ ಅಂತರ್ಜಲ ಮಟ್ಟವನ್ನು ಹೆಚ್ಚಿಸಬಹುದು ಎಂದು ಹೇಳಿದರು

ಎಸ್.ಡಿ.ಎಂ.ಸಿ ಮಾಜಿ ಅಧ್ಯಕ್ಷ ಸುರೇಶ ಘಂಟಿ, ಆಡಳಿತಾಧಿಕಾರಿ ರಂಗಪ್ಪ ಶೇಬಿನಕಟ್ಟಿ, ಎಸ್.ಸಿ. ಗದ್ದಿಗೌಡರ ಮಾತನಾಡಿದರು. ಪ್ರಾಚಾರ್ಯ ಎಚ್. .ಎಸ್.ಘಂಟಿ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು.

ಗ್ರಾಮ ಪಂಚಾಯಿತಿ ಮಾಜಿ ಸದಸ್ಯರಾದ ರೇಣವ್ವ ನಡೆಶೇಸಿ, ಪೌರತ್ವ ತರಬೇತಿ ಶಿಬಿರದ ಸಂಯೋಜಕಿ ಸಕ್ಕೂಬಾಯಿ ನೆಲ್ಲೂರು, ಗ್ರಾ.ಪಂ. ಮಾಜಿ ಸದಸ್ಯ ದ್ಯಾವಪ್ಪ ನರಹಟ್ಟಿ, ಶಿವಪ್ಪ ಘಂಟಿ, ಪರಸಪ್ಪ ನಡಶೇಶಿ, ರಾಯಪ್ಪ ಘಂಟಿ, ಯಲಗುರ್ದಪ್ಪ ನಡಶೇಸಿ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ವಾಯ್.ಅರ್.ತಳವಾರ, ಶಿಕ್ಷಕ ಸಿದ್ದಾರೂಢ ಪರಗಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260526-19-2063544588

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.