ಗುಂಡ್ಲುಪೇಟೆ: ಮಕ್ಕಳೊಳಗೆ ಸೃಜನಶೀಲ ಅಭಿರುಚಿ ಸೃಷ್ಟಿಸಲು ಬೇಸಿಗೆ ಶಿಬಿರಗಳು ಸಹಕಾರಿ ಎಂದು ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಕೆ.ಪಿ.ಸತೀಶ್ ಅಭಿಪ್ರಾಯಪಟ್ಟರು.

ಪಟ್ಟಣದ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಅವರಣದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಯಿಂದ ನಡೆದ (ರಜಾ-ಮಜಾ) ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ವಿದ್ಯಾರ್ಥಿಗಳಿಗೆ ಕಲಿಕೆ ಮತ್ತು ಶಾಲಾ ಪಠ್ಯಗಳನ್ನು ಓದುವುದರ ಜೊತೆಗೆ ಪಠ್ಯೇತರ ಚಟುವಟಿಕೆಗಳನ್ನು ಕಲಿಸಬೇಕು. ಇದರಿಂದ ಮಕ್ಕಳ ಮನಸ್ಸು ಉಲ್ಲಾಸದಿಂದ ಪ್ರತಿಯೊಂದು ವಿಚಾರದಲ್ಲೂ ಆಸಕ್ತಿ ಹಾಗೂ ಅಭಿರುಚಿ ಮೂಡುತ್ತದೆ ಎಂದು ತಿಳಿಸಿದರು.

ಶಾಲೆಯ ಹಿರಿಯ ಮುಖ್ಯ ಶಿಕ್ಷಕ ದೊಡ್ಡಬಸವಯ್ಯ ಮಾತನಾಡಿ, ಮಕ್ಕಳ ಬೌದ್ಧಿಕ ಮತ್ತು ಮಾನಸಿಕ ಸಾಮರ್ಥ್ಯ ಹೆಚ್ಚಿಸಿ ಸ್ಪರ್ಧಾತ್ಮಕ ಜಗತ್ತಿಗೆ ಮಕ್ಕಳನ್ನು ತಯಾರು ಮಾಡವ ಅವಕಾಶವನ್ನು ಬೇಸಿಗೆ ಶಿಬಿರಗಳು ಮಾಡುತ್ತವೆ. ಶಿಬಿರದಲ್ಲಿ ಕಲಿತ ಚಟುವಟಿಕೆಗಳು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.

ಗಾಯಕ ಮಯೂರ.ವಿ ಮಾತನಾಡಿ, ಬೇಸಿಗೆ ರಜೆಯ ಮೋಜಿನಲ್ಲಿ ಜೀವನಕ್ಕೆ ಬೇಕಾದ ಕೌಶಲಗಳನ್ನು ಕಲಿಸಿ, ಆನಂದವನ್ನು ಇಮ್ಮಡಿಗೊಳಿಸುವ ಅದ್ಭುತ ಮಾರ್ಗ ಬೇಸಿಗೆ ಶಿಬಿರ. ಬಗೆಬಗೆಯ ಚಟುವಟಿಕೆಗಳಲ್ಲಿ ಮಕ್ಕಳು ತೊಡಗಿಕೂಳ್ಳಲು ಬೇಸಿಗೆ ಶಿಬಿರ ಅವಕಾಶ ಎಂಂದರು. ಗಾಯನದ ಮೂಲಕ ಮಕ್ಕಳನ್ನು ರಂಜಿಸಿದರು.

ಶಿಬಿರದ ಶಿಕ್ಷಕ ಮೋಹನಕುಮಾರ್ ಮಾತನಾಡಿ, ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಪ್ರೇರಣೆಯಿಂದ 150ಕ್ಕೂ ಹೆಚ್ಚು ಮಕ್ಕಳು ಉಚಿತ ಬೇಸಿಗೆ ಶಿಬಿರದಲ್ಲಿ ಭಾಗವಹಿಸಿದ್ದು, ಶಿಬಿರ ನಡೆಸಲು ಸ್ಫೂರ್ತಿದಾಯಕವಾಗಿದೆ. ಶಿಬಿರದಲ್ಲಿ ಕಲಿತ ಮೌಲ್ಯಗಳು ಖಂಡಿತ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂದರು.

ಮುಖ್ಯ ಶಿಕ್ಷಕ ಸಿದ್ದಾರ್ಥ್, ದೈಹಿಕ ಶಿಕ್ಷಕ ಸಿದ್ದಶೆಟ್ಟಿ, ಬಿ.ಆರ್.ಸಿ ಮಣಿಕಂಠಚಾರಿ, ಮಿಮಿಕ್ರಿ ರಾಜು ಪೋಷಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260516-37-824787825

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.