ಗುಂಡ್ಲುಪೇಟೆ: ‘ತಂಬಾಕು ಸೇವನೆ ಕ್ಯಾನರ್ ಕಾರಕವಾಗಿದ್ದು, ಯುವ ಸಮೂಹ ತಂಬಾಕಿನಿಂದ ದೂರವಿರಬೇಕು’ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಅಲೀಂ ಪಾಷ ಸಲಹೆ ನೀಡಿದರು.

ಪಟ್ಟಣದ ನಾಗರತ್ನಮ್ಮ ಸಂಯುಕ್ತ ಪದವಿಪೂರ್ವ ಕಾಲೇಜಿನಲ್ಲಿ ವಿಶ್ವ ತಂಬಾಕು ರಹಿತ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ‘ತಂಬಾಕು ರಹಿತ ದಿನವನ್ನು ವಿಶ್ವ ಆರೋಗ್ಯ ಸಂಸ್ಥೆ 1987ರಿಂದ ಆಚರಿಸುತ್ತಿದ್ದು, ತಂಬಾಕು ಸೇವನೆಯಿಂದ ಉಂಟಾಗುವ ಆರೋಗ್ಯ ಹಾನಿ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವುದು ಇದರ ಮುಖ್ಯ ಉದ್ದೇಶವಾಗಿದೆ’ ಎಂದು ತಿಳಿಸಿದರು.

‘ಸಾರ್ವಜನಿಕರು ಧೂಮಪಾನ ಹಾಗೂ ಇತರ ತಂಬಾಕು ಉತ್ಪನ್ನಗಳ ಬಳಕೆ ಕಡಿಮೆ ಮಾಡಬೇಕು. ಯುವಜನರು ಮತ್ತು ಮಕ್ಕಳನ್ನು ತಂಬಾಕು ವ್ಯಸನದಿಂದ ರಕ್ಷಿಸಬೇಕು. ಯಾವುದೇ ವ್ಯಕ್ತಿಯು ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವುದು ಅಪರಾಧ. ಕಚೇರಿ, ಆಸ್ಪತ್ರೆ, ರೆಸ್ಟೊರೆಂಟ್, ರೈಲ್ವೆ ನಿಲ್ದಾಣ, ಬಸ್ ನಿಲ್ದಾಣ, ನ್ಯಾಯಾಲಯ ಆವರಣ ಇತರೆಡೆ ನಿಯಮ ಉಲ್ಲಂಘನೆ ಮಾಡಿದವರಿಗೆ ₹1,000ವರೆಗೆ ದಂಡ ವಿಧಿಸಬಹುದು’ ಎಂದು ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ರಾಘವೇಂದ್ರ, ವಿನಯ್, ಕಾಲೇಜು ಪ್ರಭಾರ ಪ್ರಾಂಶುಪಾಲರಾದ ಜಯಶ್ರೀ, ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260602-37-1209837713

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.