ಎಚ್.ಡಿ.ಕೋಟೆ: ರಾಜ್ಯ ಸರ್ಕಾರವು ಮ್ಯಾಗ್ನೆಟ್ ಯೋಜನೆಯಡಿಯಲ್ಲಿ ಎಚ್.ಡಿ. ಕೋಟೆ ಮತ್ತು ಸರಗೂರು ತಾಲ್ಲೂಕಿನಲ್ಲಿ 40ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳನ್ನು ಮುಚ್ಚುತ್ತಿರುವುದನ್ನು ವಿರೋಧಿಸಿ ಎಐಡಿಎಸ್ಒ, ಅಖಿಲ ಭಾರತ ಪ್ರಜಾತಾಂತ್ರಿಕ ವಿದ್ಯಾರ್ಥಿ ಸಂಘಟನೆ ಮತ್ತು ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿ ನೇತೃತ್ವದಲ್ಲಿ ತಾಲ್ಲೂಕಿನ ವಿವಿಧ ಗ್ರಾಮಸ್ಥರು ತಾಲ್ಲೂಕು ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಸಿದರು.

ರಾಜ್ಯ ಸರ್ಕಾರ ಗ್ರಾಮ ಪಂಚಾಯಿತಿಗೆ ಒಂದು ಸರ್ಕಾರಿ ಶಾಲೆಯಂತೆ 6,000 ಶಾಲೆಗಳನ್ನು ತೆರೆದು ಸುಮಾರು 40,000 ಸರ್ಕಾರಿ ಶಾಲೆಗಳನ್ನು ಮುಚ್ಚಿ, ಕೆಪಿಎಸ್ ಮ್ಯಾಗ್ನೆಟ್ ಶಾಲೆಗಳನ್ನು ಆರಂಭಿಸಲು ಮುಂದಾಗಿದೆ. ಬಳಿಕ ಹಂತಹಂತವಾಗಿ ಗ್ರಾಮದ 5 ಕಿ.ಮೀ. ವ್ಯಾಪ್ತಿಯ ಎಲ್ಲಾ ಸರ್ಕಾರಿ ಶಾಲೆಗಳನ್ನು ಮುಚ್ಚುವ ಹುನ್ನಾರ ನಡೆಸಿದೆ. ರಾಜ್ಯದ ಎಲ್ಲಾ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಒಂದನೇ ತರಗತಿಯಿಂದಲೇ ಆಂಗ್ಲ ಮಾಧ್ಯಮ ಆರಂಭಿಸಲು ಸರ್ಕಾರವು ಆದೇಶ ನೀಡಿದೆ. ಈ ಮೂಲಕ ಕನ್ನಡ ಶಾಲೆಗಳನ್ನು ಮುಚ್ಚಲು ಸರ್ಕಾರ ತಯಾರಿ ನಡೆಸುತ್ತಿದೆ ಎಂದು ಎಐಡಿಎಸ್ಒನ ರಾಜ್ಯ ಘಟಕದ ಉಪಾಧ್ಯಕ್ಷೆ ಅಪೂರ್ವ ಆರೋಪಿಸಿದರು.

ಮೈಸೂರು ಜಿಲ್ಲೆಯಲ್ಲಿ ಆರ್ಥಿಕವಾಗಿ ಮತ್ತು ಶೈಕ್ಷಣಿಕವಾಗಿ ತಾಲ್ಲೂಕು ಹಿಂದುಳಿದಿರುವಾಗ ಶಾಲೆಗಳನ್ನು ಮುಚ್ಚಿದರೆ ಮಕ್ಕಳ ಪರಿಸ್ಥಿತಿ ಏನಾಗಬೇಕು. ತಾಲ್ಲೂಕಿನಲ್ಲಿ ಬಡವರು, ದಲಿತರು ಮತ್ತು ಆದಿವಾಸಿಗಳೆ ಹೆಚ್ಚಿದ್ದು, ಈ ಭಾಗಗಳಲ್ಲಿ ಮೂಲಸೌಕರ್ಯಗಳಿಲ್ಲದೆ ಈಗಾಗಲೇ ಹಲವಾರು ಸಮಸ್ಯೆಗಳಿಂದ ಬಹುತೇಕ ವಿದ್ಯಾರ್ಥಿಗಳು ತಮ್ಮ ಪ್ರೌಢಶಿಕ್ಷಣವನ್ನು ಮೊಟಕುಗೊಳಿಸಿದ್ದಾರೆ. ಸರ್ಕಾರ ಶಾಲೆಗಳನ್ನು ಮುಚ್ಚಬಾರದು ಎಂದು ಆಗ್ರಹಿಸಿದರು.

ರೈತ ಸಂಘದ ಜಿಲ್ಲಾ ಘಟಕದ ಉಪಾಧ್ಯಕ್ಷ ಪಳನಿಸ್ವಾಮಿ ಮಾತನಾಡಿ, ‘ಸರ್ಕಾರ ಕ್ರಮೇಣವಾಗಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆ ಮಾಡಿ, ನಿರ್ನಾಮ ಮಾಡಲು ಹೊರಟಿದೆ. ಪ್ರಥಮವಾಗಿ ಮಾತೃ ಭಾಷೆಯಲ್ಲಿ ಶಿಕ್ಷಣ ನೀಡಬೇಕು. ರೈತ ಸಂಘವು ಕೆಪಿಎಸ್ ಮ್ಯಾಗ್ನೆಟ್ ಶಾಲೆ ಯೋಜನೆಯನ್ನು ವಿರೋಧಿಸುತ್ತದೆ’ ಎಂದರು.

ಪ್ರತಿಭಟನೆಗೂ ಮುನ್ನ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯಿಂದ ಪ್ರತಿಭಟನಕಾರರು ಮೆರವಣಿಗೆ ಮೂಲಕ ಪಟ್ಟಣದ ಆಡಳಿತ ಸೌಧ ತಲುಪಿದರು. ಬಳಿಕ ತಾಲ್ಲೂಕು ಶಿರಸ್ತೇದಾರ್ ಮಹೇಶ್, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ಸಿಇಒ ನಂಜರಾಜು ಅವರಿಗೆ ಮನವಿ ಸಲ್ಲಿಸಿದರು.

ಎಐಕೆಕೆಎಂಎಸ್ ರೈತ ಸಂಘಟನೆಯ ಎಚ್.ಪಿ. ಶಿವಪ್ರಕಾಶ್, ಎಐಯುಟಿಯುಸಿ ಕಾರ್ಮಿಕ ಸಂಘಟನೆಯ ಮುಖಂಡ ಹರೀಶ್, ಎಐಎಂಎಸ್ಎಸ್ ಮಹಿಳಾ ಹೋರಾಟಗಾರ್ತಿ ಸೀಮಾ, ಆದಿವಾಸಿ ಸಂಘಟನೆಯ ಸುನಿಲ್, ಎಐಡಿವೈಒ ಸಂಘಟನೆಯ ಸುಮಾ, ಮಹಾರಾಣಿ ಕಾಲೇಜಿನ ನಿವೃತ್ತ ಪ್ರಾಧ್ಯಾಪಕಿ ಲತಾ, ಎಐಡಿಎಸ್ಒ ಜಿಲ್ಲಾ ಕಾರ್ಯದರ್ಶಿ ನಿತಿನ್, ಜಿಲ್ಲಾ ಘಟಕದ ಉಪಾಧ್ಯಕ್ಷೆ ಸ್ವಾತಿ, ಪದಾಧಿಕಾರಿಗಳಾದ ಚಂದನ, ಚಂದ್ರಿಕಾ, ಅಭಿಷೇಕ್, ದೀಕ್ಷಿತಾ, ಪೂರ್ಣಿಮಾ, ನೀತುಶ್ರೀ, ಬಸವರಾಜು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260514-38-1546961374

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.