ಹಗರಿಬೊಮ್ಮನಹಳ್ಳಿ: ‘ಜ್ಞಾನಕ್ಕಿಂತ ದೊಡ್ಡ ಆಸ್ತಿ ಯಾವುದೂ ಇಲ್ಲ. ವಿದ್ಯೆ ಎಲ್ಲಕ್ಕಿಂತ ಮಿಗಿಲಾದದ್ದು. ಸರಸ್ವತಿ ಒಲಿದರೆ ಜೀವನದಲ್ಲಿ ಅತ್ಯುತ್ತಮ ಸಾಧನೆ ಮಾಡಬಹುದು’ ಎಂದು ವೀರಶೈವ ಲಿಂಗಾಯತ ಪಂಚಮಸಾಲಿ ಸಂಘದ ಮಾಜಿ ಅಧ್ಯಕ್ಷ ಬಿ. ನಾಗನಗೌಡ ಹೇಳಿದರು.

ಪಟ್ಟಣದಲ್ಲಿ ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜದಿಂದ ಭಾನುವಾರ ಹಮ್ಮಿಕೊಂಡಿದ್ದ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

‘ಮಕ್ಕಳಿಗೆ ಶಿಕ್ಷಣದ ಜತೆಗೆ ವಿನಯ, ಸಂಸ್ಕಾರ ಕಲಿಸಬೇಕು. ಮೊಬೈಲ್ ಫೋನ್ ಬಳಕೆ ಅತಿಯಾಗಬಾರದು. ಅಕ್ಷರ ಕಲಿಸಿದ ಎಲ್ಲರೂ ಗುರುಗಳೇ ಆಗಿದ್ದು, ಅವರನ್ನು ಗೌರವಿಸಬೇಕು’ ಎಂದು ಸಲಹೆ ನೀಡಿದರು.

ಅಕ್ಕಿ ಬಸವೇಶ್ ಉಪನ್ಯಾಸ ನೀಡಿದರು. ನಿಜಲಿಂಗೇಶ್ವರ ಸ್ವಾಮೀಜಿ ನಿಡಸೋಸಿ, ಗದ್ದಿಕೇರಿ ಮಹಾಂತ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಪಂಚಮಸಾಲಿ ಸಮಾಜದ ತಾಲ್ಲೂಕು ಘಟಕದ ಅಧ್ಯಕ್ಷ ಮಂಜುನಾಥ್ ಗೌಡ ಅಧ್ಯಕ್ಷತೆ ವಹಿಸಿದ್ದರು.

ಉತ್ತಮ ಸಾಧನೆ ಮಾಡಿದ ಎಸ್ಎಸ್ಎಲ್ಸಿಯ 65, ಪಿಯುಸಿ 44 ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 109 ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.

ಸಮಾಜದ ಪ್ರಧಾನ ಕಾರ್ಯದರ್ಶಿ ಬಾವಿ ರವೀಂದ್ರ, ಮಹಿಳಾ ಘಟಕದ ಅಧ್ಯಕ್ಷೆ ನಿರ್ಮಲ ಮೀಣಸಿಗಿ, ನಗರ ಘಟಕದ ಅಧ್ಯಕ್ಷೆ ಮಂಜುಳಾ, ಯುವ ಘಟಕದ ಅಧ್ಯಕ್ಷ ಕಿಚಿಡಿ ಕೊಟ್ರೇಶ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಎಚ್. ಲೋಕಪ್ಪ, ಬಿಜೆಪಿ ಮಂಡಲ ಅಧ್ಯಕ್ಷ ಬೆಣ್ಣೆಕಲ್ಲು ಪ್ರಕಾಶ್, ಸಮಾಜದ ನೌಕರರ ಸಂಘದ ಅಧ್ಯಕ್ಷ ವಿರುಪಾಕ್ಷ, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಗುರುಬಸವರಾಜ್ ಸೊನ್ನದ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260518-25-339661108

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.