ಹಗರಿಬೊಮ್ಮನಹಳ್ಳಿ: ‘ವಿಧಾನಸಭಾ ಕ್ಷೇತ್ರದ ಎಲ್ಲ ಸರ್ಕಾರಿ ಶಾಲೆಗಳಿಗೆ ಮೂಲ ಸೌಕರ್ಯ ಒದಗಿಸುವ ಮೂಲಕ ಗುಣಮಟ್ಟದ ಶಿಕ್ಷಣಕ್ಕೆ ಮೊದಲ ಆದ್ಯತೆ ನೀಡಲಾಗುವುದು’ ಎಂದು ಶಾಸಕ ಕೆ.ನೇಮರಾಜನಾಯ್ಕ ಹೇಳಿದರು.

ತಾಲ್ಲೂಕಿನ ತಂಬ್ರಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಶಾಲಾ ದಾಖಲಾತಿ ಮತ್ತು ಪ್ರಾರಂಭೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ತಾಲ್ಲೂಕಿನಲ್ಲಿ ಶಾಸಕರ ಅನುದಾನದ ಅಡಿಯಲ್ಲಿ 3 ಸಾವಿರ ಮಕ್ಕಳು ಎಲ್ಕೆಜಿ ಮತ್ತು ಯುಕೆಜಿ ಶಿಕ್ಷಣ ಪಡೆಯುತ್ತಿದ್ದಾರೆ. ಕಳೆದ ಮೂರು ವರ್ಷಗಳಲ್ಲಿ ನೂರಾರು ಕೋಟಿ ಅನುದಾನವನ್ನು ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ನೀಡಲಾಗಿದೆ ಎಂದು ತಿಳಿಸಿದರು.

ಶಾಲಾ ಮಕ್ಕಳಿಗೆ ಉಚಿತ ಸಮವಸ್ತ್ರ ವಿತರಿಸಲಾಯಿತು. ಎಲ್ಕೆಜಿ, ಯುಕೆಜಿ ಹಾಗೂ ಪ್ರಥಮ ತರಗತಿಗೆ ದಾಖಲಾದ ಮಕ್ಕಳನ್ನು ಸ್ವಾಗತಿಸಲಾಯಿತು. ತಹಶೀಲ್ದಾರ್ ಆರ್.ಕವಿತಾ, ತಾಲ್ಲೂಕು ಪಂಚಾಯಿತಿ ಇಒ ವಿಶ್ವನಾಥ ಪಾಲಯ್ಯನಕೋಟೆ, ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಎಸ್. ಜಗದೀಶ್, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ರಾಜಕುಮಾರನಾಯ್ಕ, ಪಿಡಿಒ ಚಂದ್ರಶೇಖರ್, ಮುಖ್ಯ ಶಿಕ್ಷಕ ಎಚ್.ಎಂ. ಸಿದ್ಧೇಶ್, ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ವೈ.ಮಲ್ಲಿಕಾರ್ಜುನ, ಜಿಲ್ಲಾ ಉಪಾಧ್ಯಕ್ಷ ಕೃಷ್ಣಮೂರ್ತಿ ನಾಣ್ಯಾಪುರ, ಸಿದ್ದರಾಜು, ಬಸವರಾಜಪ್ಪ ಗೌರಜ್ಜನವರ, ಕೊಟ್ರೇಶ್ ಬಣಕಾರ, ಎಸ್ಡಿಎಂಸಿ ಅಧ್ಯಕ್ಷ ಎಚ್.ನೀಲಗಿರಿ ಸೇರಿದಂತೆ ಇತರರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260602-25-1436843252

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.