ಹಲಗೂರು: ‘ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಮನಸ್ಸು ಮತ್ತು ದೇಹ ಸಧೃಢವಾಗಿರುತ್ತದೆ. ಯುವಕರು ದೈನಂದಿನ ಜೀವನದಲ್ಲಿ ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ ದೈಹಿಕ ಮತ್ತು ಮಾನಸಿಕ ಸ್ಥೈರ್ಯ ಹೆಚ್ಚಲಿದೆ’ ಎಂದು ಪ್ರಾಂಶುಪಾಲ ಅಲಂಗೂರು ಮಂಜುನಾಥ್ ತಿಳಿಸಿದರು.

ಹಲಗೂರಿನ ಕರ್ನಾಟಕ ಪಬ್ಲಿಕ್ ಸ್ಕೂಲ್ ಆವರಣದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವತಿಯಿಂದ ಆಯೋಜಿಸಿದ್ದ 2025-26ನೇ ಸಾಲಿನ 'ಕಾಲೇಜು ವಾರ್ಷಿಕ ಕ್ರೀಡಾಕೂಟ'ಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

‘ಆರೋಗ್ಯದ ಸಂಪತ್ತು ದ್ವಿಗುಣಗೊಳ್ಳಬೇಕಾದರೆ ಕ್ರೀಡಾ ಚಟುವಟಿಕೆಯಿಂದ ಮಾತ್ರ ಸಾಧ್ಯ. ಜಗತ್ತಿನ ಹೆಚ್ಚು ಯುವಶಕ್ತಿಯನ್ನು ಹೊಂದಿರುವ ದೇಶ ಭಾರತ. ನಮ್ಮ ಯುವಕರಲ್ಲಿ ಕ್ರೀಡೆಗಳಲ್ಲಿ ಆಸಕ್ತಿ ಹೆಚ್ಚಾದಾಗ ನಮ್ಮ ರಾಷ್ಟ್ರದ ಶಕ್ತಿಯು ಹೆಚ್ಚುತ್ತದೆ’ ಎಂದರು.

ದೈಹಿಕ ಶಿಕ್ಷಣ ನಿರ್ದೇಶಕ ಶ್ರೀನಿವಾಸ್ ಮಾತನಾಡಿ, ‘ನಮ್ಮ ಕಾಲೇಜಿನಲ್ಲಿ ಪಠ್ಯದ ಜೊತೆಗೆ ಕ್ರೀಡಾ ಚಟುವಟಿಕೆಗಳಿಗೂ ಹೆಚ್ಚು ಮಹತ್ವ ನೀಡಲಾಗುತ್ತಿದೆ. ಪ್ರಸ್ತುತ ಶೈಕ್ಷಣಿಕ ಸಾಲಿನಲ್ಲಿ ನಮ್ಮ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಮಂಡ್ಯ ವಿಶ್ವವಿದ್ಯಾಲಯ ಪ್ರತಿನಿಧಿಸಿ ಮೈಸೂರು ಅಂತರ ಕಾಲೇಜು ಕ್ರೀಡಾಕೂಟದಲ್ಲಿ ಭಾಗವಹಿಸಿರುವುದು ಶ್ಲಾಘನೀಯ’ ಎಂದರು.

ಸೀಮಾ ಕೌಸರ್, ಪ್ರೊ.ಸುಧಾ ಬಿದರಿ, ಶಂಕರೇಗೌಡ, ತಾರಾ ಜಯಲಕ್ಷ್ಮಿ, ಬಿ.ಸಿ.ರವಿ, ಗುರುಪ್ರಸಾದ್, ರಮ್ಯಾ, ಎಂ.ಎಚ್.ಮೂರ್ತಿ, ಚೇತನಾ ಹಲವರು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260519-40-967189361

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.