ಹಳೇಬೀಡು: ಬೇಲೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ದುರ್ಬಲ ಹಾಗೂ ಹಿಂದುಳಿದ ವರ್ಗದ ಮಕ್ಕಳ ಶಿಕ್ಷಣಕ್ಕೆ ತೊಂದರೆ ಆಗದಂತೆ ಎಚ್ಚರ ವಹಿಸಿದ್ದೇವೆ ಎಂದು ಶಾಸಕ ಎಚ್.ಕೆ.ಸುರೇಶ್ ಹೇಳಿದರು.

ಹಳೇಬೀಡಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸೋಮವಾರ ನಡೆದ ಸಹ ಪಠ್ಯ ಚಟುವಟಿಕೆಗಳ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

‘ತಾಲ್ಲೂಕಿನ ವಿದ್ಯಾರ್ಥಿಗಳು ಸಾಧನೆಯತ್ತ ಹೆಜ್ಜೆ ಹಾಕಿ ಇತಿಹಾಸ ಸೃಷ್ಟಿಸಬೇಕು. ವಿದ್ಯಾರ್ಥಿಗಳು ಗ್ರಾಮೀಣ ಕಾಲೇಜಿನಲ್ಲಿ ಓದುತ್ತಿದ್ದೇವೆ ಎಂಬ ಭಾವನೆಯಿಂದ ಹೊರಬಂದು, ಹೊಯ್ಸಳರ ರಾಜಧಾನಿ ಪ್ರಾಚೀನ ನಗರದಲ್ಲಿ ಕಲಿಯುತ್ತಿದ್ದೇವೆ ಎಂದು ಹೆಮ್ಮೆ ಪಡಬೇಕು’ ಎಂದು ಅವರು ಹೇಳಿದರು.

‘ವಿದ್ಯಾರ್ಥಿಗಳ ಕೌಶಲವೃದ್ಧಿಗಾಗಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಸಹಪಠ್ಯ ಟಿಕೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಆದರೆ ಹಳೇಬೀಡು ಕಾಲೇಜಿನಲ್ಲಿ ಬಿಸಿಲು ಮಳೆ ಎನ್ನದೆ ಬಯಲಿನಲ್ಲಿ ಕಾರ್ಯಕ್ರಮ ನಡೆಸುವಂತಾಗಿದೆ. ₹1 ಕೋಟಿ ವೆಚ್ಚದ ಕಾಲೇಜಿನ ಆಡಿಟೋರಿಯಂ ಕಟ್ಟಡ ಕಾಮಗಾರಿ ಚುರುಕುಗೊಳಿಸಲು ಸೂಚಿಸುತ್ತೇವೆ. ವಿದ್ಯಾರ್ಥಿಗಳು ಕಲಿಕೆ ಜೊತೆಯಲ್ಲಿ ವಿನಯವಂತರಾಗಿ ಸಮನ್ವಯತೆಯಿಂದ ಕಲಿಯಬೇಕು. ಸ್ಪರ್ಧಾತ್ಮಕ ಯುಗದಲ್ಲಿ ಸಾಧನೆಯ ಮೆಟ್ಟಿಲೇರಲು, ಪಠ್ಯದೊಂದಿಗೆ ಸಾಮಾನ್ಯ ಜ್ಞಾನ ಪಡೆಯಬೇಕು’ ಎಂದು ಸುರೇಶ್ ಹೇಳಿದರು.

ಕಳಸಾಪುರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಎಚ್.ಎಂ.ನಾಗರಾಜರಾವ್ ಕಲ್ಕಟ್ಟೆ ಮಾತನಾಡಿ, ‘ವಿದ್ಯಾರ್ಥಿಗಳು ಪಾಠದ ಜೊತೆಗೆ ಸಹಪಠ್ಯ ಚಟುವಟಿಕೆಗಳಲ್ಲೂ ಸಕ್ರಿಯವಾಗಿ ಪಾಲ್ಗೊಳ್ಳುವುದರಿಂದ ಪರಿಪೂರ್ಣ ಪ್ರಗತಿಗೆ ಅನುಕೂಲವಾಗುತ್ತದೆ. ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳು ಮಾನಸಿಕ, ದೈಹಿಕ ಆರೋಗ್ಯದ ಜೊತೆ ಜ್ಜಾನ ವೃದ್ಧಿಸುತ್ತವೆ’ ಎಂದರು.

ಪ್ರಾಂಶುಪಾಲ ಡಾ.ಶ್ರೀನಿವಾಸ.ಬಿ.ಕೆ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಭೂದಾನಿ ಸಿ.ಆರ್.ಲಿಂಗಪ್ಪ(ಪ್ರೇಮಣ್ಣ), ಸಿಡಿಸಿ ಕಾರ್ಯಾಧ್ಯಕ್ಷ ಎಚ್.ಸಿ.ಚೇತನ್, ಸದಸ್ಯ ರಂಜಿತ್, ಪಿಡಿಒ ಎಸ್.ಸಿ.ವಿರೂಪಾಕ್ಷ, ಹಿರಿಯ ಶ್ರೇಣಿ ಗ್ರಂಥಪಾಲಕ ಡಾ.ಮನೋಜ್ ಕುಮಾರ್, ಪ್ರಾಧ್ಯಾಪಕರಾದ ಡಾ.ಅಭಿಷೇಕ್.ಎನ್, ಶಿವರಾಜ್ ಕುಮಾರ್.ಬಿ.ಇ, ಶಂಕರಪ್ಪ.ಬಿ.ಆರ್, ಡಾ.ತಿಮ್ಮನಾಯಕ, ರಾಘವೇಂದ್ರ.ಕೆ.ಸಿ, ಡಿಂಪಲ್.ವಿ, ದಶರಥ.ಕೆ.ಟಿ, ಪ್ರಥಮ ದರ್ಜೆ ಸಹಾಯಕ ಉಮೇಶ್.ಎಂ.ಎಲ್, ನಿವೃತ್ತ ಶಿಕ್ಷಕ ರುದ್ರೇಗೌಡ ಪಾಲ್ಗೊಂಡಿದ್ದರು. ಸೈಯದ್ ತಾಯೀರ್ ಗಾಯನ ಪ್ರಸ್ತುತಪಡಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260519-36-801616539

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.