ಹಲಗೂರು: ಪ್ರತಿಯೊಬ್ಬರು ನಿಮ್ಮ ಗ್ರಾಮದ ಎಲ್ಲ ಮಕ್ಕಳನ್ನು ಸರ್ಕಾರಿ ಶಾಲೆಗೆ ದಾಖಲಿಸುವ ಮೂಲಕ ಸರ್ಕಾರಿ ಶಾಲೆಗಳ ಉಳಿವಿಗೆ ಕೈ ಜೋಡಿಸಿ ಎಂದು ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಎಚ್.ಜಿ.ಶ್ರೀನಿವಾಸ್ ಮನವಿ ಮಾಡಿದರು.

ಮಳವಳ್ಳಿ ತಾ,ಪಂ., ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಗ್ರಾಮ ಪಂಚಾಯಿತಿ ಬ್ಯಾಡರಹಳ್ಳಿ ಇವರ ಆಶ್ರಯದಲ್ಲಿ ಬ್ಯಾಡರಹಳ್ಳಿ ಸರ್ಕಾರಿ ಪ್ರೌಢಶಾಲೆಯ ಆವರಣದಲ್ಲಿ ಬುಧವಾರ ಆಯೋಜಿಸಿದ್ದ ‘ಸರ್ಕಾರಿ ಶಾಲೆ ದಾಖಲಾತಿ ಅಂದೋಲನ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ನಮ್ಮ ತಾಲ್ಲೂಕಿನ ಖಾಸಗಿ ಶಾಲೆಗಳಲ್ಲಿಯೂ ಇಲ್ಲದ ಮಲ್ಟಿಮೀಡಿಯಾ ವ್ಯವಸ್ಥೆ ಸರ್ಕಾರಿ ಶಾಲೆಗಳಿಗೆ ಕಲ್ಪಿಸಲಾಗಿದೆ. ಆದ್ದರಿಂದ ಪೋಷಕರು ಖಾಸಗಿ ಶಾಲೆಗಳ ವ್ಯಾಮೋಹ ಬಿಟ್ಟು ಸರ್ಕಾರಿ ಶಾಲೆಗಳತ್ತ ಗಮನಹರಿಸಿ. ಸರ್ಕಾರದ ಈ ಮಹತ್ವದ ಕಾರ್ಯದ ಜೊತೆಗೆ ವಿದ್ಯಾರ್ಥಿಗಳು, ಪೋಷಕರು ಮತ್ತು ನಾವೆಲ್ಲರೂ ಕೈಜೋಡಿಸಿ ಯಶಸ್ವಿ ಮಾಡೋಣ’ ಎಂದರು.

ಪಿಡಿಒ ಲಿಂಗಯ್ಯ ಮಾತನಾಡಿ, ಗುಣಮಟ್ಟದ ಶಿಕ್ಷಣಕ್ಕೆ ಸರ್ಕಾರಿ ಶಾಲೆಗೆ ಮಕ್ಕಳನ್ನು ದಾಖಲಿಸಿ ಎಂದರು.

ಶಿಕ್ಷಣ ಸಂಯೋಜಕ ದಯಾನಂದ್, ಬಾಬು, ಸಿ.ಆರ್.ಪಿ ಪುಟ್ಟರಾಜು, ಜಿ.ಎಸ್.ಕೃಷ್ಣ, ಮುಖ್ಯ ಶಿಕ್ಷಕ ತೇಜೋಮಯ, ಮಾಹಿತಿ ಶಿಕ್ಷಣ ಸಂಯೋಜಕ ಸುನೀಲ್ ಕುಮಾರ್, ಚುಂಚಣ್ಣ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260529-40-1725466092

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.