ಹಳಿಯಾಳ: ಇಲ್ಲಿನ ಕರ್ನಾಟಕ ಲಾ ಸೊಸೈಟಿ ವಿಶ್ವನಾಥರಾವ್ ದೇಶಪಾಂಡೆ ತಾಂತ್ರಿಕ ವಿದ್ಯಾಲಯ (ಕೆಎಲ್ಎಸ್ವಿಡಿಐಟಿ)ದ ವಾರ್ಷಿಕ ಸಾಂಸ್ಕೃತಿಕ ಉತ್ಸವ ಉಮಂಗ್–2026 ಈಚೆಗೆ ನಡೆಯಿತು.

ಉತ್ಸವದಲ್ಲಿ ಪಾಶ್ಚಿಮಾತ್ಯ ಸಂಸ್ಕೃತಿ ಬಿಂಬಿಸುವ ಹಲೋ ವಿನ್ ಡೇ, ರೆಟ್ರೋ ಡೇ ಹಾಗೂ ಭಾರತದ ವಿವಿಧ ಸಂಸ್ಕೃತಿಯನ್ನು ಬಿಂಬಿಸುವ ಉಡುಗೆಯನ್ನು ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ತೊಟ್ಟು ಸಂಭ್ರಮಿಸಿದರು.

ಹಾಸ್ಯ ಕಲಾವಿದ ಗಂಗಾವತಿ ಪ್ರಾಣೇಶ್, ಬಸವರಾಜ ಮಹಾಮನಿ, ನರಸಿಂಹ ಜೋಶಿ ಅವರಿಂದ ಹಾಸ್ಯ ಕಾರ್ಯಕ್ರಮ ನಡೆಯಿತು.

ಕೆಎಲ್ಎಸ್ ಸಂಸ್ಥೆಯ ಅಧ್ಯಕ್ಷರಾದ ಪ್ರದೀಪ್ ಸಾವ್ಕಾರ್, ಚೇರಮನ್ ಎ.ಕೆ. ತಗಾರೆ, ಕಾರ್ಯದರ್ಶಿ ಸುಧೀಂದ್ರ ಗಣಾಚಾರಿ, ಆಡಳಿತ ಮಂಡಳಿ ಅಧ್ಯಕ್ಷ ಪಿ.ಎಸ್. ಕುಲಕರ್ಣಿ, ಸದಸ್ಯ ಆರ್.ಎಸ್. ಮುತಾಲಿಕ್, ದಾಂಡೇಲಿಯ ಡಿವೈಎಸ್ಪಿ ಶಿವಾನಂದ ಎನ್.ಬಿ, ಪಿಎಸ್ಐ ಬಸವರಾಜ ಮಬನೂರ, ವಿಆರ್ಡಿಎಂ ಟ್ರಸ್ಟ್ ಕಾರ್ಯದರ್ಶಿ ಪ್ರಕಾಶ ಪ್ರಭು ಹಾಜರಿದ್ದರು. ಪ್ರಾಚಾರ್ಯ ಡಾ. ವಿ.ಎ. ಕುಲಕರ್ಣಿ ಸ್ವಾಗತಿಸಿದರು. ಡಾ. ಕೆ.ಎಸ್. ಪೂಜಾರ್, ಪ್ರೊ. ಹರ್ಷ ಜಾಧವ ಸಂಯೋಜಿಸಿದ್ದರು. ವಿದ್ಯಾರ್ಥಿಗಳು, ಮಹಾವಿದ್ಯಾಲಯದ ಸಿಬ್ಬಂದಿ, ವಿದ್ಯಾರ್ಥಿಗಳ ಪಾಲಕರು, ಹಾಸ್ಯ ಸಂಜೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಮಹಾವಿದ್ಯಾಲಯದ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ನೃತ್ಯ, ಗಾಯನ ಪ್ರದರ್ಶಿಸಿದರು. ಅಂತಿಮ ವರ್ಷದ ವಿದ್ಯಾರ್ಥಿಗಳು ಶೈಕ್ಷಣಿಕ, ಸಾಂಸ್ಕೃತಿಕ, ಕ್ರೀಡೆ ಮತ್ತು ಸಾಮಾಜಿಕ ಸೇವೆಯಲ್ಲಿ ನೀಡಿದ ಕೊಡುಗೆ ಪರಿಗಣಿಸಿ, ವರ್ಷದ ಅತ್ಯುತ್ತಮ ವಿದ್ಯಾರ್ಥಿ - ವಿಭಾಗ ಮಟ್ಟ ಮತ್ತು ವರ್ಷದ ಅತ್ಯುತ್ತಮ ವಿದ್ಯಾರ್ಥಿ - ಕಾಲೇಜು ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ವಿಭಾಗದ ವಿದ್ಯಾರ್ಥಿ ಅನುರಾಗ ದಿಂಡಾಲಕೊಪ್ಪ ಅವರಿಗೆ ಉತ್ತಮ ವಿದ್ಯಾರ್ಥಿ ಪುರಸ್ಕಾರವನ್ನು ಈ ಸಂದರ್ಭದಲ್ಲಿ ನೀಡಲಾಯಿತು.

ವಿಭಾಗ ಮಟ್ಟದಲ್ಲಿ ಹೃಷಿಕೇಶ್ ಶಿಂಧೆ (ಮೆಕ್ಯಾನಿಕಲ್ ವಿಭಾಗ), ವಿನಯ್ ಪಾಟೀಲ್ ( ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ವಿಭಾಗ), ಸಾತ್ವಿಕ್ ಮೇತ್ರಿ (ಸಿವಿಲ್ ವಿಭಾಗ), ಸುರಭಿ ಕುಲಕರ್ಣಿ (ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ವಿಭಾಗ), ನಿಕಿತಾ ಕೋಲೂರ್ ಮಠ್ (ಕಂಪ್ಯೂಟರ್ ಸೈನ್ಸ್ ವಿಭಾಗ), ಸಾಯಿ ಪ್ರತ್ಯುಷ (ಎಐಎಂಎಲ್ ವಿಭಾಗ). ವಿದ್ಯಾರ್ಥಿಗಳು ಮತ್ತು ಪಾಲಕರನ್ನು ಸನ್ಮಾನಿಸಲಾಯಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260428-20-1254405015

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.