ಹಂಪಾಪುರ: ಕೆಪಿಎಸ್ ಮ್ಯಾಗ್ನೆಟ್ ಯೋಜನೆಯಡಿ ಹೊಮ್ಮರಗಳ್ಳಿ ಶಾಲೆಗೆ ವಿಲೀನಗೊಳಿಸಲು ಹೊರಟಿರುವ ಹೇರಗಳ್ಳಿ, ಶಂಖಹಳ್ಳಿ, ವಡ್ಡರಪಾಳ್ಯ ಸರ್ಕಾರಿ ಶಾಲೆಗಳನ್ನು ಉಳಿಸಬೇಕು ಎಂದು ಒತ್ತಾಯಿಸಿ ಎಐಡಿಎಸ್ಒ ನೇತೃತ್ವದಲ್ಲಿ ಗ್ರಾಮಸ್ಥರು ಪ್ರತಿಭಟನೆ ಮಾಡಿದರು.

ಹೇರಗಳ್ಳಿಯಲ್ಲಿ ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿಯ ಸದಸ್ಯ ಟಿ.ಆರ್. ಸುನೀಲ್ ಮಾತನಾಡಿ, ‘ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಕಡಿಮೆಯಿದೆ ಎಂದು ಸರ್ಕಾರ ಹೇಳುತ್ತಿರುವುದು ಶುದ್ಧ ಸುಳ್ಳು. ರಾಜ್ಯದಲ್ಲಿ 37 ಲಕ್ಷ ಮಕ್ಕಳು ಸರ್ಕಾರಿ ಶಾಲೆಗಳಲ್ಲಿ ಓದುತ್ತಿದ್ದಾರೆ. ಆದರೆ ಸರ್ಕಾರದ ನಿರ್ಲಕ್ಷ್ಯದಿಂದ ಮಕ್ಕಳು ತೊಂದರೆ ಅನುಭವಿಸುವಂತಾಗಿದೆ’ ಎಂದರು.

‘ಬಳ್ಳಾರಿಯಲ್ಲಿ ಶಾಲೆ ಕಟ್ಟಡ ಕುಸಿದು ವಿದ್ಯಾರ್ಥಿ ಮೃತಪಟ್ಟಿರುವುದು ಸರ್ಕಾರಿ ಶಾಲೆಗಳ ಪರಿಸ್ಥಿತಿಯನ್ನು ತೋರಿಸುತ್ತದೆ. ರಾಜ್ಯದಲ್ಲಿ 21 ಸಾವಿರ ಸರ್ಕಾರಿ ಶಾಲೆ ಕಟ್ಟಡಗಳು ಹಲವು ವರ್ಷಗಳಿಂದ ದುರಸ್ತಿ ಕಂಡಿಲ್ಲ. 60 ಸಾವಿರಕ್ಕೂ ಅಧಿಕ ಶಿಕ್ಷಕರ ಹುದ್ದೆ ಖಾಲಿ ಇವೆ. ಈ ಸಮಸ್ಯೆ ಬಗೆಹರಿಸುವುದನ್ನು ಬಿಟ್ಟು, ಕೆಪಿಎಸ್ ಮ್ಯಾಗ್ನೆಟ್ ಹೆಸರಿನಲ್ಲಿ ಗ್ರಾಮೀಣ ಭಾಗದ ಶಾಲೆಗಳನ್ನು ಮುಚ್ಚಲು ಹೊರಟಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

‘ಕರ್ನಾಟಕದ ಜನತೆ ಈ ನೀತಿ ವಿರುದ್ಧ ಗಟ್ಟಿಯಾಗಿ ಹೋರಾಟ ಮಾಡಬೇಕಿದೆ. ಈಗಾಗಲೇ ರಾಜ್ಯದಾದ್ಯಂತ ಕೆಪಿಎಸ್ ಮ್ಯಾಗ್ನೆಟ್ ಯೋಜನೆ ವಿರೋಧಿಸಿ ಪೋಷಕರಿಂದ ಪ್ರತಿಭಟನೆಗಳು ನಡೆಯುತ್ತಿವೆ. ಈ ಯೋಜನೆ ಅಡಿಯಲ್ಲಿ 40,000 ಸರ್ಕಾರಿ ಶಾಲೆಗಳನ್ನು ಮುಚ್ಚುತ್ತಿರುವ ಸರ್ಕಾರದ ನಡೆ ಖಂಡನೀಯ’ ಎಂದರು.

ಗ್ರಾಮದ ಶಂಕಹಳ್ಳಿಯ ಮಾದಪ್ಪ ಮಾತನಾಡಿ, ‘ನಮ್ಮೂರ ಸರ್ಕಾರಿ ಶಾಲೆ ಕೇವಲ ಶಾಲೆ ಮಾತ್ರವಲ್ಲ, ಇದು ಮಕ್ಕಳ ಭವಿಷ್ಯ ಹಾಗೂ ಗ್ರಾಮದ ಅಸ್ತಿತ್ವ. ಆದ್ದರಿಂದ ಶಾಲೆ ಮುಚ್ಚಬಾರದು’ ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಎಐಡಿಎಸ್ಒ ಜಿಲ್ಲಾ ಪದಾಧಿಕಾರಿಗಳಾದ ಚಂದ್ರಿಕಾ, ಸುಮಾ, ನೀತುಶ್ರೀ, ಅಭಿಷೇಕ್, ಗ್ರಾಮಸ್ಥರಾದ ಶ್ರೀನಿವಾಸ್ ಮಾದೇವಸ್ವಾಮಿ, ಮಾದಪ್ಪ, ಪಾಪಣ್ಣ, ನಂಜಪ್ಪ, ಅನಿಲ್, ನಿತಿನ್ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260401-38-1704300722

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.