ಹಂದಿಗುಂದ: ರಾಯಬಾಗ ತಾಲ್ಲೂಕಿನ ಹಂದಿಗುಂದ ಹಾಗೂ ಸುತ್ತಮುತ್ತಲಿನ ಹಳ್ಳಿಗಳಲ್ಲಿ ಜನಗಣತಿ ಕಾರ್ಯಕ್ಕೆ ನಿಯೋಜನೆಗೊಂಡ ಶಿಕ್ಷಕರಿಗೆ ಇಲಾಖೆಯಿಂದ ಕಿಟ್ಗಳನ್ನು ನೀಡಿಲ್ಲ. ಇದಿರಂದ ಗಣತಿ ಕಾರ್ಯಕ್ಕೆ ಹಿನ್ನಡೆ ಆಗಿದೆ ಎಂಬ ದೂರುಗಳು ಕೇಳಿಬಂದಿವೆ.

‘ಬ್ಯಾಗ್, ಪ್ಯಾಡ್, ಐಡಿ, ಕ್ಯಾಪ್, ಪೆನ್ಸಿಲ್, ಮಾರ್ಕರ್, ಡೈರಿ ಮುಂತಾದ ಪರಿಕರಗಳಿರುವ ಕಿಟ್ ಈವರೆಗೂ ಪೂರೈಕೆ ಮಾಡಿಲ್ಲ. ಈ ಕುರಿತು ಚಾರ್ಜ್ ಅಧಿಕಾರಿಗಳನ್ನು ಕೇಳಿದಾಗ ಮೇಲಿನಿಂದಲೇ ಬಂದಿಲ್ಲ ಎಂದು ಹಾರಿಕೆ ಉತ್ತರ ನೀಡುತ್ತಿದ್ದಾರೆ. ಸುಡುವ ಬಿಸಿಲಿನಲ್ಲಿ ಶಿಕ್ಷಕರು ಗಣತಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಆದರೆ, ಅವರಿಗೆ ಸರಿಯಾದ ವ್ಯವಸ್ಥೆ ಮಾಡಿಲ್ಲ’ ಎಂದು ಗಣತಿದಾರರು ದೂರಿದ್ದಾರೆ.

ಶಿಕ್ಷಕಿಯರು, ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರನ್ನು ಗಣತಿ ಕಾರ್ಯಕ್ಕೆ ನಿಯೋಜಿಸಿದ್ದು, ಅವರಿಗೆ ತೋಟಗಳ ಬ್ಲಾಕ್ ನೀಡಲಾಗಿದೆ. ಇದರಿಂದ ಮಹಿಳೆಯರಿಗೆ ತೊಂದರೆಯಾಗುತ್ತಿದೆ ಎಂಬ ದೂರುಗಳೂ ಕೇಳಿಬಂದಿವೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260429-21-1800527234

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.