ಹಾನಗಲ್: ತಾಲ್ಲೂಕಿನ ಪ್ರತಿಷ್ಠಿತ ಜನತಾ ಶಿಕ್ಷಣ ಸೌಹಾರ್ದ ಸಹಕಾರಿ ಸಂಘದ 15 ನಿರ್ದೇಶಕರ ಸ್ಥಾನಕ್ಕೆ ಚುನಾವಣೆ ಪ್ರಕ್ರಿಯೆ ಸಿದ್ಧತೆಗಳು ನಡೆಯುತ್ತಿದ್ದು, ಜೂ 14 ರಂದು ಇಲ್ಲಿನ ಕುಮಾರೇಶ್ವರ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದ ಮೂರು ಮತಗಟ್ಟೆಗಳಲ್ಲಿ ಮತದಾನ ನಡೆಯಲಿದೆ.

ತಾತ್ಕಾಲಿಕ ಯಾದಿ ಪ್ರಕಾರ ಸದ್ಯಕ್ಕೆ 1178 ಮತದಾರರ ಇದ್ದು, ಮೇ 31 ರಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಜೂ 6 ತನಕ ನಡೆಯಲಿದೆ. ಜೂ. 7ರಂದು ನಾಮಪತ್ರಗಳ ಪರಿಶೀಲನೆ, 8 ರಂದು ನಾಮಪತ್ರ ವಾಪಸ್ಗೆ ಬೆಳಿಗ್ಗೆ 11 ರಿಂದ ಮಧ್ಯಾಹ್ಮ 3 ಗಂಟೆ ತನಕ ಅವಕಾಶ ಇದೆ. ಅಂದು ಅಭ್ಯರ್ಥಿಗಳ ಅಂತಿಮ ಪಟ್ಟಿ ಬಿಡುಗಡೆ ಮಾಡಿ ಚಿನ್ಹೆಗಳ ಹಂಚಿಕೆ ನಡೆಯಲಿದೆ. ಜೂ 14 ರಂದು ಬೆಳಿಗ್ಗೆ 9 ರಿಂದ ಸಂಜೆ 4 ಗಂಟೆ ತನಕ ಮತದಾನ ನಡೆಯುತ್ತದೆ. ಬಳಿಕ ಮತ ಎಣಿಕೆ ಮತ್ತು ಫಲಿತಾಂಶ ಘೋಷಣೆ ಮಾಡುತ್ತೇವೆ ಎಂದು ಸಹಾಯಕ ಚುನಾವಣಾಧಿಕಾರಿ ಸುಭಾಸ ಮಾದರ ತಿಳಿಸಿದ್ದಾರೆ.

9 ಸ್ಥಾನ ಸಾಮಾನ್ಯ, 1 ಎಸ್ಸಿ, 1 ಎಸ್ಟಿ, 2 ಮಹಿಳೆ ಮತ್ತು 2 ಸ್ಥಾನ ಹಿಂದುಳಿದ ವರ್ಗಕ್ಕೆ ಮೀಸಲಾಗಿದೆ. ಮೇ 29 ರಂದು ಅರ್ಹ ಮತದಾರರ ಯಾದಿ ಬಿಡುಗಡೆಗೊಳ್ಳಲಿದ್ದು, ಈಗಿರುವ ಮತದಾರರ ಸಂಖ್ಯೆಯಲ್ಲಿ ಹೆಚ್ಚಳವಾಗುವ ಸಾಧ್ಯತೆ ಇದೆ. ವ್ಯವಸ್ಥಿತ ಚುನಾವಣೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಸಂಸ್ಥೆಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮನೋಹರ ಬಳಿಗಾರ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260528-22-1591523222

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.