ಬೇಸಿಗೆ ರಜೆ ದಿನಗಳ ಅಂಗವಾಗಿ ಇಲ್ಲಿನ ರೋಶನಿ ಸಮಾಜ ಸೇವಾ ಸಂಸ್ಥೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಒಂದು ತಿಂಗಳು ನಡೆದ ಸ್ಪೋಕನ್ ಇಂಗ್ಲೀಷ್ ತರಬೇತಿ ಶಿಬಿರದ ಮುಕ್ತಾಯ ಸಮಾರಂಭ ಶನಿವಾರ ನಡೆಯಿತು.

ರೋಶನಿ ಸಂಸ್ಥೆಯ ನಿರ್ದೇಶಕಿ ಸಿಸ್ಟರ್ ಅನಿತಾ ಡಿಸೋಜಾ ಮಾತನಾಡಿ, ಮಕ್ಕಳ ಪ್ರತಿಭೆಗೆ ಅನುಗುಣವಾಗಿ ಪಾಲಕರ ಪ್ರೋತ್ಸಾಹ ಅಗತ್ಯವಾಗಿದ್ದು, ಜಾಗತಿಕ ಸಂವಹನ ಭಾಷೆಯಾಗಿ ಇಂಗ್ಲೀಷ್ ಗುರುತಿಸಿಕೊಂಡಿದೆ. ಹೀಗಾಗಿ ನಮ್ಮ ಭಾಷೆಯೊಂದಿಗೆ ಇಂಗ್ಲೀಷ್ ಬಳಕೆ ಅಗತ್ಯವಾಗಿದೆ ಎಂದರು.

ರೋಶನಿ ಸಂಸ್ಥೆಯ ಹಿತೈಷಿ ಪುನೀತಾ ಪೇಟಕರ ಮಾತನಾಡಿ, ಇಂಗ್ಲೀಷ್ ಭಾಷೆ ಕಠಿಣ ಎಂಬ ಕಾರಣಕ್ಕಾಗಿ ಹಿಂಜರಿಕೆ ಸಲ್ಲದು. ವಿದ್ಯಾರ್ಥಿ ಹಂತದಿಂದಲೇ ಇಂಗ್ಲೀಷ್ ಭಾಷೆಯ ಮೇಲೆ ಹಿಡಿತ ಸಾಧಿಸಬೇಕು. ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಮತ್ತು ಸಂವಹನಶೀಲತೆ ಹೆಚ್ಚಿಸಲು ಸ್ಪೋಕನ್ ಇಂಗ್ಲೀಷ್ ತರಬೇತಿ ಪ್ರಮುಖವಾಗಿದೆ ಎಂದರು.

ಕೆಡಿಪಿ ಸದಸ್ಯ ಮಹ್ಮದ್ಹನೀಫ್ ಬಂಕಾಪೂರ ಮಾತನಾಡಿ, ಕಲಿಕೆ ನಿರಂತರ. ಒಂದು ತಿಂಗಳ ತರಬೇತಿಯಲ್ಲಿ ಪಡೆದ ಜ್ಞಾನವನ್ನು ವಿದ್ಯಾರ್ಥಿಗಳು ಮುಂದುವರೆಸಬೇಕು ಎಂದರು.

ತರಬೇತಿಯಲ್ಲಿ ಭಾಗವಹಿಸಿದ್ದ 41 ವಿದ್ಯಾರ್ಥಿಗಳಿಗೆ ಸಂಸ್ಥೆಯ ವತಿಯಿಂದ ಪ್ರಮಾಣಪತ್ರ ವಿತರಿಸಲಾಯಿತು. ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ 11 ವಿಕಲಚೇತನ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಸ್ಪೋಕನ್ ಇಂಗ್ಲೀಷ್ ತರಬೇತಿ ಶಿಕ್ಷಕರಾದ ಮಲ್ಲಿಕಾರ್ಜುನ, ಸಿಸ್ಟರ್ ಸುಲೋಚನ ಮಾತನಾಡಿದರು. ವ್ಯವಸ್ಥಾಪಕಿ ನಿರ್ಮಲಾ ಮಡಿವಾಳರ ಇದ್ದರು. ವಿದ್ಯಾರ್ಥಿಗಳು ಇಂಗ್ಲೀಷ್ ಭಾಷೆಯಲ್ಲಿ ತಮ್ಮ ಅಭಿಪ್ರಾಯ ಹಂಚಿಕೊಂಡರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260511-22-88160753

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.