ಹಂತುವಾನಿ (ನರಸಿಂಹರಾಜಪುರ): ಆಧುನಿಕತೆಯ ಭರಾಟೆಯಲ್ಲಿ ಮನುಷ್ಯ ಸಂಬಂಧಗಳು ಯಾಂತ್ರಿಕವಾಗುತ್ತಿವೆ. ಶಾಲೆಯ ಹಿರಿಯ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಒಂದೆಡೆ ಸೇರುವ ಈ ಸ್ನೇಹ ಮಿಲನವು ಪ್ರತಿಯೊಬ್ಬರಲ್ಲೂ ಮಾನವೀಯ ಮೌಲ್ಯಗಳು ಹೆಚ್ಚಾಗುವಂತೆ ಮಾಡಲಿ ಎಂದು ಹಂತುವಾನಿಯ ಸೇಂಟ್ ಆಂಟನಿ ಪ್ರಾಥಮಿಕ ಶಾಲೆಯ ಮಾಜಿ ಶಿಕ್ಷಕಿ ಸಲಿನ ಹೇಳಿದರು.

ತಾಲ್ಲೂಕಿನ ಹಂತುವಾನಿಯ ಸೇಂಟ್ ಆಂಟನಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಹಿರಿಯ ವಿದ್ಯಾರ್ಥಿಗಳು ಹಾಗೂ ಶಿಕ್ಷಕರ ಸ್ನೇಹ ಮಿಲನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಶಾಲೆಯಲ್ಲಿ ವ್ಯಾಸಂಗ ಮಾಡಿದ ಹಲವು ವಿದ್ಯಾರ್ಥಿಗಳು ವಿವಿಧೆಡೆ ಉನ್ನತ ಹುದ್ದೆಯಲ್ಲಿದ್ದಾರೆ. ಅವರ ಪ್ರತಿ ದಿನದ ವೃತ್ತಿಯಲ್ಲೂ ಶಾಲೆ, ಶಿಕ್ಷಣ, ಸಂಸ್ಕಾರ ಅಭಿವ್ಯಕ್ತಿಗೊಳ್ಳುತ್ತಿದೆ. ನಮ್ಮ ವಿದ್ಯಾರ್ಥಿಗಳು ಉನ್ನತ ಹುದ್ದೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದರೂ ಅವರು ಈಗಲೂ ಶಿಕ್ಷಕರಾದವರಿಗೆ ವಿದ್ಯಾರ್ಥಿಯಂತೆ ಕಾಣುತ್ತಾರೆ. ಸ್ನೇಹ ಮಿಲನ ಕಾರ್ಯಕ್ರಮ ನಮ್ಮಲ್ಲಿರುವ ಸದ್ಭಾವನೆ ಅರಳುವಂತೆ ಮಾಡುತ್ತದೆ ಎಂದರು.

ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಫಾದರ್ ಅಬ್ರಹಾಂ ಮಾತನಾಡಿ, 35 ವರ್ಷದ ಹಿಂದೆ ಹಂತುವಾನಿ ಗ್ರಾಮದ ಸುತ್ತ ಸಂಚರಿಸುವಾಗ ಈ ಪ್ರದೇಶವು ಶೈಕ್ಷಣಿಕವಾಗಿ ಹಿಂದುಳಿದಿರುವುದನ್ನು ಕಂಡಿದ್ದೆವು. ಆದ್ದರಿಂದ 1ನೇ ತರಗತಿಯಿಂದ 10ನೇ ತರಗತಿಯವರೆಗೆ ಶಾಲೆಯನ್ನು ಸ್ಥಾಪಿಸಲು ಮುಂದಾದೆವು. ನಮ್ಮ ಪ್ರಯತ್ನದ ಫಲವಾಗಿ ಈ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಾವಿರಾರು ವಿದ್ಯಾರ್ಥಿಗಳು ಈ ಶಾಲೆಯಲ್ಲಿ 10ನೇ ತರಗತಿಯಲ್ಲಿ ವ್ಯಾಸಂಗ ಮಾಡಲು ಸಾಧ್ಯವಾಯಿತು ಎಂದರು.

ಮಾಜಿ ಮುಖ್ಯಶಿಕ್ಷಕಿ ಸಿಸ್ಟರ್ ರೋಸ್ ಬೆಲ್ ಮಾತನಾಡಿದರು. ಸ್ನೇಹ ಮಿಲನ ಕಾರ್ಯಕ್ರಮದಲ್ಲಿ ಹಿರಿಯ ವಿದ್ಯಾರ್ಥಿಗಳಿಂದ ಸಂಗೀತ, ನೃತ್ಯ ಕಾರ್ಯಕ್ರಮ ನಡೆಯಿತು. 40ಕ್ಕೂ ಹೆಚ್ಚು ಶಿಕ್ಷಕ, ಶಿಕ್ಷಕಿಯರನ್ನು ಗೌರವಿಸಲಾಯಿತು. 100 ಕ್ಕೂ ಹೆಚ್ಚು ಹಿರಿಯ ವಿದ್ಯಾರ್ಥಿಗಳಿಗೆ ಸ್ಮರಣಿಕೆ ನೀಡಲಾಯಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260506-126-1555129528

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.