ಹನುಮಸಾಗರ: ‘ರಾಜ್ಯ ಮಕ್ಕಳ ರಕ್ಷಣ ನಿರ್ದೇಶನಾಲಯ ಬೆಂಗಳೂರು, ಜಿಲ್ಲಾಡಳಿತ, ಜಿ.ಪಂ, ಜಿಲ್ಲಾ ಪೊಲೀಸ್ ಇಲಾಖೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣ ಘಟಕ ಆಶ್ರಯದಲ್ಲಿ ಜಹಗೀರ ಗುಡದೂರು ಗ್ರಾಮದ ಶರಣಬಸವೇಶ್ವರ ದೇವಸ್ಥಾನದಲ್ಲಿ ಮಕ್ಕಳ ಹಕ್ಕುಗಳು ಹಾಗೂ ಮಕ್ಕಳ ಪರವಾದ ಕಾನೂನುಗಳ ಕುರಿತು ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಜಹಗೀರ ಗುಡದೂರು ಗ್ರಾ.ಪಂ ಪಿಡಿಒ ನಿಂಗಪ್ಪ ಬಿ.ಮೂಲಿಮನಿ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸಿಂಧು ಅಂಗಡಿ ಭಾಗವಹಿಸಿ, ಮಕ್ಕಳ ಹಕ್ಕುಗಳ ಮಹತ್ವ ಮತ್ತು ಅವುಗಳ ರಕ್ಷಣೆಗೆ ಇರುವ ಕಾನೂನುಗಳ ಬಗ್ಗೆ ಮಾಹಿತಿ ನೀಡಿದರು.

ಸಂಪನ್ಮೂಲ ವ್ಯಕ್ತಿಗಳಾಗಿ ಶಿವಲೀಲಾ ಹೊನ್ನೂರು ಹಾಗೂ ಪ್ರತಿಭಾ ಕಾಶಿಮಠ ಮಕ್ಕಳ ಸುರಕ್ಷತೆ, ಶಿಕ್ಷಣ ಹಕ್ಕು, ಬಾಲಕಾರ್ಮಿಕ ಪದ್ಧತಿ ನಿಷೇಧ, ಬಾಲ್ಯವಿವಾಹ ತಡೆ ಸೇರಿದಂತೆ ವಿವಿಧ ವಿಷಯಗಳ ಕುರಿತು ಅರಿವು ಮೂಡಿಸಿದರು.

ಅಂಗನವಾಡಿ ಮೇಲ್ವಿಚಾರಕಿ ಮಂಜುಳಾ ನಾಗರಾಜ, ಶಿಕ್ಷಕರಾದ ಹೇಮಲೆಪ್ಪ ನಾಯಕ, ಮಹಾಂತೇಶ ಕವಡಿಮಟ್ಟಿ, ಶಿವಾನಂದ ರೇವಣಿಕೀಮಠ, ಭೀಮಪ್ಪ ಗೋಡೆಕಾರ, ಪಿಎಚ್ಸಿ ಹಿರೇಗೋಣ್ಣಾಗರದ ಸಂಗಮೇಶ ಭಿಕ್ಷಾವತಿಮಠ, ಕಾರ್ಮಿಕ ಇಲಾಖೆ ರಮೇಶ ಕುರ್ನಾಳ, ಸಮಾಜ ಕಲ್ಯಾಣ ಇಲಾಖೆ ಅಶೋಕ ಬುಕನಟ್ಟಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ನಾಲ್ಕು ಗ್ರಾಮಗಳ ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಎನ್ಬಿಕೆ ಕಾರ್ಯಕರ್ತೆಯರು, ಗ್ರಾ.ಪಂ ಸಿಬ್ಬಂದಿ ಹಾಗೂ ಊರಿನ ಗುರು ಹಿರಿಯರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260408-35-212707054

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.