ಹನೂರು: ‘ಶಿಕ್ಷಣ ಇಲಾಖೆಯ ಜೊತೆಗೆ ಶಿಕ್ಷಕರ ಸಂಘಗಳು ಸಹಕಾರ ನೀಡುವುದರಿಂದ ಶಿಕ್ಷಕರ ಸಮಸ್ಯೆ ಬಗೆಹರಿಯಲಿದೆ’ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಪ್ರತಿಭಾ ತಿಳಿಸಿದರು.

ಪಟ್ಟಣದ ಬಿಆರ್ಸಿ ಕೇಂದ್ರದಲ್ಲಿ ಹಮ್ಮಿಕೊಂಡಿದ್ದ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಅವರು ಮಾತನಾಡಿದರು.

‘ಸಂಘದ ಎಲ್ಲಾ ಸದಸ್ಯರು ಕೂಡ ಶಿಕ್ಷಕರ ಶ್ರೇಯೋಭಿವೃದ್ಧಿಗೆ ಪಣತೊಟ್ಟು ಬಂದಿದ್ದೀರಿ. ಸಂಘ ಹಾಗೂ ಇಲಾಖೆ ಅಧಿಕಾರಿಗಳು ಸಮನ್ವಯದಿಂದ ಇದ್ದರೆ ಮಾತ್ರ ಶಿಕ್ಷಕರ ಸಮಸ್ಯೆಗಳನ್ನು ಬಗೆಹರಿಸಲು ಸಾಧ್ಯವಾಗುತ್ತದೆ. ಆ ನಿಟ್ಟಿನಲ್ಲಿ ನಿಮ್ಮ ಸಲಹೆ ಸಹಕಾರ ಪಡೆದು ಮುಂದಿನ ದಿನಗಳಲ್ಲಿ ಸಮಸ್ಯೆಗಳನ್ನು ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಇಲ್ಲಿಯವರೆಗೂ ಬಗೆಹರಿಯದ ಸಮಸ್ಯೆಗಳಿದ್ದರೆ ಸೂಕ್ತ ದಾಖಲಾತಿಗಳನ್ನು ಒದಗಿಸಿದ್ದಲ್ಲಿ ಖಂಡಿತ ಸಮಸ್ಯೆಗಳಿಗೆ ಮುಕ್ತಿ ಹಾಡೋಣ’ ಎಂದರು.

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನೂತನ ಅಧ್ಯಕ್ಷ ಮಾದೇಶ್ ಮಾತನಾಡಿ, ‘ಶಿಕ್ಷಕರ ಸಮಸ್ಯೆಗಳಿಗೆ ನಾವೆಲ್ಲರೂ ಸ್ಪಂದಿಸಬೇಕಾಗುತ್ತದೆ. ಜೊತೆಗೆ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸರ್ವ ಸದಸ್ಯರು ಕೂಡ ಕೈಜೋಡಿಸಿದಾಗ ಮಾತ್ರ ಯಾವುದೇ ಕಾರ್ಯಕ್ರಮಗಳು ಯಶಸ್ವಿಯಾಗುತ್ತವೆ’ ಎಂದರು.

ಬಿಆರ್ಸಿ ವೆಂಕಟೇಶ್, ದೈಹಿಕ ಶಿಕ್ಷಣ ಪರಿವೀಕ್ಷಕ ಚಂದ್ರಶೇಖರ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಹನೂರು ಘಟಕದ ಉಪಾಧ್ಯಕ್ಷ ಗಿರೀಶ್, ಪ್ರಧಾನ ಕಾರ್ಯದರ್ಶಿ ಮಹದೇಶ್ ಸಿ, ಖಜಾಂಚಿ ಶಿವಕುಮಾರಿ ಹಾಗೂ ನಿರ್ಗಮಿತ ಸಂಘದ ಸದಸ್ಯರು, ಈ ಸಿಒಗಳಾದ ಚಿನ್ನಪ್ಪಯ, ಮಹೇಶ್, ಅಶೋಕ್, ನಿವೃತ್ತ ಶಿಕ್ಷಕರು ಹಾಗೂ ಹಾಲಿ ಶಿಕ್ಷಕರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260531-37-1601032667

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.