ಹರಪನಹಳ್ಳಿ: ‘ತಾಲ್ಲೂಕಿನಾದ್ಯಂತ ಒಟ್ಟು 264 ಸರ್ಕಾರಿ ಪ್ರಾಥಮಿಕ ಶಾಲೆ ಹಾಗೂ 25 ಪ್ರೌಢಶಾಲೆಗಳು ಜೂನ್ 1ರಿಂದ ಆರಂಭವಾಗಲಿದ್ದು, ಮಕ್ಕಳನ್ನು ಸ್ವಾಗತಿಸಲು ತಳಿರು ತೋರಣ, ಸ್ವಚ್ಛತೆ ಸೇರಿದಂತೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ’ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಲೇಪಾಕ್ಷಪ್ಪ ತಿಳಿಸಿದರು.

ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ, ಸಮವಸ್ತ್ರ ವಿತರಣೆ ಮಾಡಲಾಗುತ್ತಿದ್ದು, ಮಧ್ಯಾಹ್ನ ಸಿಹಿ ಊಟದ ವ್ಯವಸ್ಥೆ ಕಲ್ಪಿಸಲಾಗಿದೆ. ಮೊದಲ ಎರಡು ಅವಧಿಗಳಲ್ಲಿ ಸ್ವಾಗತ ಕೋರಿ, ಮೂರನೇ ಅವಧಿಯಿಂದಲೇ ಪಾಠ ಬೋಧನೆ ಆರಂಭಿಸಲು ಮುಖ್ಯಗುರುಗಳಿಗೆ ಮಾರ್ಗದರ್ಶನ ನೀಡಲಾಗಿದೆ. ಮಕ್ಕಳ ಕಲಿಕಾ ಮಟ್ಟ ಸುಧಾರಿಸಲು ‘ಸೇತುಬಂಧ’ ಚಟುವಟಿಕೆ ಹಾಗೂ ಜೂನ್ 20ರ ವರೆಗೆ ಗಣಿತದ ‘ಮಗ್ಗಿ ಸುಗ್ಗಿ’ ಕಾರ್ಯಕ್ರಮ ಅನುಷ್ಠಾನಗೊಳಿಸಲಾಗಿದೆ ಎಂದರು.

6 ರಿಂದ 14 ವರ್ಷದ ಮಕ್ಕಳ ಕಡ್ಡಾಯ ದಾಖಲಾತಿಗಾಗಿ ಮನೆ ಮನೆಗೆ ಭೇಟಿ ಆಂದೋಲನ ಹಮ್ಮಿಕೊಳ್ಳಲಾಗಿದ್ದು, ಮೊದಲ ದಿನ ಪೋಷಕರು ಹಾಗೂ ಶಾಲಾಭಿವೃದ್ದಿ ಸಮಿತಿ ಸಭೆ ಆಯೋಜಿಸಲು ಸೂಚಿಸಲಾಗಿದೆ. ಶಾಲೆಗಳ ವ್ಯವಸ್ಥಿತ ಕಾರ್ಯನಿರ್ವಹಣೆ ಖಾತರಿಪಡಿಸಿಕೊಳ್ಳಲು ಶಿಕ್ಷಣ ಇಲಾಖೆ ಅಧಿಕಾರಿಗಳಿಂದ ತಾಲೂಕಿನಾದ್ಯಂತ ‘ಮಿಂಚಿನ ಸಂಚಾರ’ ಪರಿಶೀಲನೆ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260601-25-568219241

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.