ಹರಪನಹಳ್ಳಿ: ‘ವಿದೇಶಿಗರು, ಅನ್ಯ ರಾಜ್ಯದವರು ನಮ್ಮ ರಾಜ್ಯಕ್ಕೆ ಬಂದಿದ್ದರೆ ಅವರೂ ನಮ್ಮ ಮಾತೃ ಭಾಷೆ ಕಲಿತು ಸುಲಲಿತವಾಗಿ ಮಾತನಾಡಿದರೆ ಮಾತ್ರ ಕನ್ನಡ ಭಾಷೆ ಉಳಿಯುತ್ತದೆ‘ ಎಂದು ಶಾಸಕಿ ಎಂ.ಪಿ.ಲತಾ ಮಲ್ಲಿಕಾರ್ಜುನ ತಿಳಿಸಿದರು.

ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಈಚೆಗೆ ಕನ್ನಡ ಸಾಹಿತ್ಯ ಪರಿಷತ್ತು ಆಯೋಜಿಸಿದ್ದ ಕಸಾಪ ಸಂಸ್ಥಾಪನೆ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ತೆಗ್ಗಿನಮಠದ ವರಸದ್ಯೋಜಾತ ಸ್ವಾಮೀಜಿ ಮಾತನಾಡಿ, ಕನ್ನಡ ಭಾಷೆ, ಸಾಹಿತ್ಯ ಬೆಳವಣಿಗೆಯಲ್ಲಿ ಸಾಹಿತ್ಯ ಪರಿಷತ್ತು ಗಮನಾರ್ಹ ಕೆಲಸ ಮಾಡಿದೆ. ಸಾರ್ವಜನಿಕರು ಸಹ ಕನ್ನಡದ ಬಗ್ಗೆ ಅಭಿಮಾನ ಬೆಳೆಸಿಕೊಳ್ಳಲು ಸಲಹೆ ನೀಡಿದರು.

ಅರಸೀಕೆರೆ ಜಿವಿವಿಡಿಎಸ್ ಪ್ರೌಢಶಾಲೆ ಸಹ ಶಿಕ್ಷಕಿ ಜಿ.ಮಂಜುಳಾ ಉಪನ್ಯಾಸ ನೀಡಿದರು. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಕೆ.ಸತೀಶ ಮಾತನಾಡಿದರು. ಅಧ್ಯಕ್ಷತೆ ವಹಿಸಿದ್ದ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಕೆ.ಉಚ್ಚೆಂಗೆಪ್ಪ ಮಾತನಾಡಿದರು. ಕನ್ನಡ ಸಾಹಿತ್ಯದಲ್ಲಿ ಛಾಪು ಮೂಡಿಸಿದ ಬರಹಗಾರರನ್ನು ಸನ್ಮಾನಿಸಲಾಯಿತು. ಮಾಜಿ ಅಧ್ಯಕ್ಷ ಡಿ.ರಾಮನಮಲಿ, ಎಚ್.ಮಲ್ಲಿಕಾರ್ಜುನ, ದಾವಣಗೆರೆ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತು ಅಧ್ಯಕ್ಷ ಕೆ.ಎಸ್.ವೀರಭದ್ರಪ್ಪ, ಶಿಕ್ಷಕರಾದ ಮಲ್ಲಮ್ಮ ವಡ್ಡರ, ಶಶಿಕಲಾ ನಾಗಭೂಷಣ, ಪ್ರಾಧ್ಯಾಪಕ ಎನ್.ಎಂ.ನಾಗರಾಜ್, ಹುಚ್ಚರಾಯಪ್ಪ, ಹರಾಳು ಬುಳ್ಳಪ್ಪ, ಎಚ್.ಕೊಟ್ರೇಶ್, ಎಂ.ಸುರೇಶ, ಬಸವರಾಜ್, ಕೆ.ಎನ್.ತಿಪ್ಪೆಸ್ವಾಮಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260514-25-1050986373

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.