ಹರಿಹರ: ‘ಆತ್ಮವಿಶ್ವಾಸ ಮತ್ತು ಕುತೂಹಲವು ವಿದ್ಯಾರ್ಥಿಗಳನ್ನು ಉತ್ತಮ ನಾಯಕರನ್ನಾಗಿ ರೂಪಿಸುತ್ತದೆ’ ಎಂದು ಕುಮಾರಪಟ್ಟಣಂನ ಗ್ರಾಸಿಮ್ ಕಂಪನಿಯ ವಿದ್ಯುತ್ ನಿರ್ವಹಣಾ ವಿಭಾಗದ ವ್ಯವಸ್ಥಾಪಕ ನಿರ್ದೇಶಕ ಚಂದ್ರೇಶ್ ಅಗರವಾಲ್ ಹೇಳಿದರು.

ನಗರದ ಕಿರ್ಲೋಸ್ಕರ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಸ್ಟಡೀಸ್ ಕಾಲೇಜಿನ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ರಾಜ್ಯಮಟ್ಟದ ನಿರ್ವಹಣಾ ಉತ್ಸವ ‘ಬಿಜ್ಜೈಮ 2ಕೆ26’ ಉದ್ಘಾಟಿಸಿ ಅವರು ಮಾತನಾಡಿದರು.

‘ನಾಯಕನಾಗುವವನಿಗೆ ದಿಟ್ಟ ನಿರ್ಧಾರಗಳನ್ನು ತೆಗೆದುಕೊಳ್ಳಲು ಮತ್ತು ಆ ನಿರ್ಧಾರಗಳ ಮೇಲೆ ದೃಢವಾಗಿ ನಿಲ್ಲಲು ಆತ್ಮವಿಶ್ವಾಸ ಮುಖ್ಯ. ಹಾಗೆಯೇ, ಕುತೂಹಲವು ನಿರಂತರ ಕಲಿಕೆ ಮತ್ತು ನಾವೀನ್ಯತೆಯನ್ನು ಪ್ರೇರೇಪಿಸುತ್ತದೆ. ಇಂದಿನ ಕ್ರಿಯಾಶೀಲ ಕಾರ್ಪೊರೇಟ್ ಜಗತ್ತಿನಲ್ಲಿ ಇವೆರಡೂ ಅತ್ಯಗತ್ಯ. ವಿದ್ಯಾರ್ಥಿಗಳು ಇವುಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಮುನ್ನೆಲೆಗೆ ಬರಬೇಕು’ ಎಂದು ಸಲಹೆ ನೀಡಿದರು.

‘ವಿದ್ಯಾರ್ಥಿಗಳಲ್ಲಿ ಅಗತ್ಯ ನಿರ್ವಹಣಾ ಕೌಶಲಗಳನ್ನು ಪೋಷಿಸುವಲ್ಲಿ ಅನುಭವಾತ್ಮಕ ಕಲಿಕೆಯು ಅತ್ಯಂತ ಪ್ರಾಮುಖ್ಯತೆ ಹೊಂದಿದೆ’ ಎಂದು ಕಾಲೇಜಿನ ಪ್ರಾಚಾರ್ಯ ವೈ.ಎಂ.ಗಿರೀಶ್ ತಿಳಿಸಿದರು.

ಉತ್ಸವದಲ್ಲಿ ರಾಜ್ಯದ ವಿವಿಧೆಡೆಯ 14 ವಿವಿಧ ಕಾಲೇಜುಗಳಿಂದ 120ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಬಿಬಿಎ ವಿಭಾಗದ ಮುಖ್ಯಸ್ಥ ಪ್ರೊ.ಕಿರಣ್ ಕುಮಾರ್ ಜಿ.ಕೆ, ಪ್ರೊ.ಯೋಗೇಶ್ ಎನ್, ಪ್ರಾಧ್ಯಾಪಕಿ ಸವಿತಾ ಜಿ. ಲಕ್ಕೋಳ್ ಸೇರಿ ಇತರರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260329-43-1271086817

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.