ಹರಿಹರ: ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದಿದಲ್ಲಿ ಮಾತ್ರ ಎಲ್ಲವನ್ನೂ ಪಡೆಯಲು ಸಾಧ್ಯ ಎಂದು ಶಾಸಕ ಬಿ.ಪಿ. ಹರೀಶ್ ತಿಳಿಸಿದರು.

ಮಾದಾರ ಚನ್ನಯ್ಯ ಜಯಂತಿ ಅಂಗವಾಗಿ ನಗರದ ಕಾಟ್ವೆ ಸಮುದಾಯ ಭವನದಲ್ಲಿ ಮಾದಿಗ ಸಮಾಜದ ತಾಲ್ಲೂಕು ಘಟಕದ ವತಿಯಿಂದ ಶನಿ ವಾರ ಏರ್ಪಡಿಸಿದ್ದ ಪ್ರತಿಭಾ ಪುರಸ್ಕಾರ, ಬಡ ವಿದ್ಯಾರ್ಥಿಗಳಿಗೆ ಉಚಿತ ಕಿಟ್ ವಿತರಣೆ ಹಾಗೂ ಜನಜಾಗೃತಿ ಸಮಾವೇಶ ಉದ್ಘಾಟಿಸಿ ಮಾತನಾಡಿದರು.

ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರು ಸಂವಿಧಾನದ ಮೂಲಕ ಹಕ್ಕು ಹಾಗೂ ಸವಲತ್ತುಗಳನ್ನು ನೀಡಿದ್ದಾರೆ. ಅವುಗಳ ಸಮಗ್ರ ಲಾಭ ಪಡೆಯಬೇಕಾದರೆ ಪ್ರತಿಯೊಬ್ಬರೂ ಸುಶಿಕ್ಷಿತರಾಗಬೇಕು ಎಂದರು.

ಏಳು ವರ್ಷಗಳಿಂದ ಈ ಕಾರ್ಯಕ್ರಮ ನಡೆಸಿಕೊಂಡು ಬರಲಾಗುತ್ತಿದೆ. 2024-25 ಹಾಗೂ 2025-26ನೇ ಸಾಲಿನ ಎಸ್ಎಸ್ಎಲ್ಸಿ ಮತ್ತು ಪಿಯುಸಿಯಲ್ಲಿ ಶೇ 75ಕ್ಕೂ ಹೆಚ್ಚು ಅಂಕ ಗಳಿಸಿದ 65 ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಗಿದೆ. 300 ಬಡ ವಿದ್ಯಾರ್ಥಿಗಳಿಗೆ ಉಚಿತ ಶೈಕ್ಷಣಿಕ ಕಿಟ್ ವಿತರಿಸಲಾಗಿದೆ ಎಂದು ಅಧ್ಯಕ್ಷತೆ ವಹಿಸಿದ್ದ ಮಾದಿಗ ಸಮಾಜದ ತಾಲ್ಲೂಕು ಘಟಕದ ಅಧ್ಯಕ್ಷ ಎಂ.ಎಸ್. ಆನಂದಕುಮಾರ್ ಹೇಳಿದರು.

‘ಒಳಮೀಸಲಾತಿ, ಶಿಕ್ಷಣ ಮತ್ತು ಉದ್ಯೋಗ' ಕುರಿತು ವಕೀಲ ಎಂ.ಸಿ ಮೋಹನ್ ಕುಮಾರ್ ಉಪನ್ಯಾಸ ನೀಡಿದರು. ನಿವೃತ್ತ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ. ರವಿನಾರಾಯಣ್ ಶಿಕ್ಷಣದ ಮಹತ್ವ ತಿಳಿಸಿ ಸಮಾಜ ಬಾಂಧವರಲ್ಲಿ ಜಾಗೃತಿ ಮೂಡಿಸಿದರು. ಸರ್ಕಾರಿ ನೌಕರರ ಸಂಘದ ತಾಲ್ಲೂಕು ಘಟಕದ ಮಾಜಿ ಅಧ್ಯಕ್ಷ ಎ.ಕೆ. ಭೂಮೇಶ್ ಪ್ರಾಸ್ತಾವಿಕವಾಗಿ ಮಾತನಾಡಿದರು.

ಮರಾಠ ಅಭಿವೃದ್ಧಿ ನಿಗಮದ ಅಧ್ಯಕ್ಷ ಜಿ.ಎಚ್. ಮರಿಯೋಜಿರಾವ್ ವಿದ್ಯಾರ್ಥಿಗಳಿಗೆ ಕಿಟ್ ವಿತರಿಸಿದರು. ಮಾಜಿ ಶಾಸಕ ಎಸ್. ರಾಮಪ್ಪ, ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ತಾಲ್ಲೂಕು ಘಟಕದ ಅಧ್ಯಕ್ಷ ನಂದಿಗಾವಿ ಶ್ರೀನಿವಾಸ್, ಧೂಡಾ ಅಧ್ಯಕ್ಷ ದಿನೇಶ್ ಶೆಟ್ಟಿ, ಮುಖಂಡರಾದ ಹಾಲೇಶಗೌಡ, ಎಲ್.ಬಿ. ಹನುಮಂತಪ್ಪ ಅವರು ಮಾದಾರ ಚನ್ನಯ್ಯ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.

ಎಲ್ಐಸಿ ನಿವೃತ್ತ ಅಧಿಕಾರಿ ಎಂ.ಬಿ. ಧರ್ಮದತ್, ಸಮಾಜದ ಉಪಾಧ್ಯಕ್ಷರಾದ ಹನುಮಂತಪ್ಪ ದೊಡ್ಮನೆ ಹಳ್ಳಿಹಾಳ್, ಎಂ.ಎಸ್.ಶ್ರೀನಿವಾಸ್, ಕಾರ್ಯದರ್ಶಿ ಎಚ್. ಶಿವಪ್ಪ, ನಿರ್ದೇಶಕರಾದ ಬಿ.ಡಿ.ಬಸವರಾಜಪ್ಪ ಕೊಕ್ಕನೂರು, ಎಚ್.ಎಂ. ಹನುಮಂತಪ್ಪ ಬನ್ನಿಕೋಡ್, ಎ.ಕೆ. ನಾಗೇಂದ್ರಪ್ಪ ರಾಜನಹಳ್ಳಿ, ಚೌಡಪ್ಪ ಹೊಳೆಸಿರಿಗೆರೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260601-43-341042970

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.