ಹರಿಹರ: ಬಡ ವಿದ್ಯಾರ್ಥಿಗಳಿಗೆ ಪ್ರತಿ ತಿಂಗಳು ಧನಸಹಾಯ ನೀಡುವ ಮೂಲಕ ಉನ್ನತ ವ್ಯಾಸಂಗಕ್ಕೆ ಪ್ರೋತ್ಸಾಹಿಸುತ್ತಿರುವ ‘ಸುವಿದ್ಯಾನಿಧಿ’ ಗುಂಪಿನ ಸಾಮಾಜಿಕ ಕಾರ್ಯ ಶ್ಲಾಘನೀಯ. ತುರ್ತು ಸಂದರ್ಭಗಳಲ್ಲಿ ಜೀವ ಉಳಿಸಲು ಪ್ರತಿಯೊಬ್ಬರಿಗೂ ಪ್ರಥಮ ಚಿಕಿತ್ಸೆಯ ಅರಿವು ಅತ್ಯಗತ್ಯ ಎಂದು ನಗರದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯ ಜಯಪ್ಪ ತಿಳಿಸಿದರು.

ದಾವಣಗೆರೆಯ ಸುವಿದ್ಯಾನಿಧಿ ಗುಂಪು, ನಗರದ ಸರ್ಕಾರಿ ಐಟಿಐ ಕಾಲೇಜಿನಲ್ಲಿ ಎ.ಎಂ. ಶಿವಕುಮಾರ್ ನೇತೃತ್ವದಲ್ಲಿ ಈಚೆಗೆ ಆಯೋಜಿಸಿದ್ದ ವಿದ್ಯಾರ್ಥಿಗಳಿಗೆ ಪ್ರಥಮ ಚಿಕಿತ್ಸೆ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ರಾಷ್ಟ್ರೀಯ ತರಬೇತುದಾರ ಕುಮಾರ್ ವಿ.ಎಲ್.ಎಸ್. ಅವರು, ತುರ್ತು ಸಂದರ್ಭಗಳಲ್ಲಿ ಗಾಯಾಳುಗಳನ್ನು ಪರೀಕ್ಷಿಸುವ ವಿಧಾನ, ಸಿಪಿಆರ್ ಮಾಡುವ ವಿಧಾನ ಹಾಗೂ ವಹಿಸಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಕುರಿತು ವಿದ್ಯಾರ್ಥಿಗಳಿಗೆ ಪ್ರಾತ್ಯಕ್ಷಿಕೆ ಮೂಲಕ ಅರಿವು ಮೂಡಿಸಿದರು.

ಉಪನ್ಯಾಸಕರಾದ ಜಯಪ್ರಕಾಶ್ ಕೆ.ಎಸ್., ವೀರೇಶ್, ಉತ್ತಮ್ ಚರಣ್, ಪುನೀತಾ ಹಾಗೂ ಸುವಿದ್ಯಾನಿಧಿ ಗುಂಪಿನ ಕುಮಾರ್ ಎಂ., ಶಿವಕುಮಾರ್ ಎನ್.ಜಿ. ಮತ್ತಿತರರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260524-43-190974320

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.