ಹಾರೋಹಳ್ಳಿ: ಪ್ರಸ್ತುತ ನಾಗರಿಕ ಸಮಾಜದಲ್ಲಿ ದುರ್ಬಲರು ಮತ್ತು ಶೋಷಿತರನ್ನು ಸಮಾಜದ ಮುಖ್ಯವಾಹಿನಿಗೆ ತರುವಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಚಿಂತನೆಗಳು ಮಹತ್ವಪೂರ್ಣವಾಗಿದೆ ಎಂದು ಕರ್ನಾಟಕ ಸಮತಾ ಸೈನಿಕ ದಳದ ರಾಜ್ಯ ಯುವ ಘಟಕದ ಅಧ್ಯಕ್ಷ ಕೋಟೆ ಕುಮಾರ್ ಹೇಳಿದರು.

ತಾಲ್ಲೂಕಿನ ಟಿ.ಹೊಸಹಳ್ಳಿ ಗ್ರಾಮದಲ್ಲಿ ಕನ್ನಡ ಸಂಸ್ಕೃತಿ ಇಲಾಖೆ ಮತ್ತು ಶ್ರೀಲಕ್ಷ್ಮಿ ವೆಂಕಟೇಶ್ವರ ಕಲಾ ಟ್ರಸ್ಟ್ ಯೋಜಿಸಿದ್ದ ಅಂಬೇಡ್ಕರ್ ಜಯಂತಿಯಲ್ಲಿ ಅವರು ಮಾತನಾಡಿದರು.ಯುವ ಜನತೆ ಸಂವಿಧಾನ ಅಧ್ಯಯನ ಮಾಡಬೇಕು. ಸಮಾಜದಲ್ಲಿ ಸಾಮಾಜಿಕ ಸಮಾನತೆ ತರುವಲ್ಲಿ ಪ್ರಯತ್ನಿಸಬೇಕು ಎಂದರು.

ಜ್ಙಾನಕ್ಕಿಂತ ದೊಡ್ಡ ಆಯುಧವಿಲ್ಲ. ಇದನ್ನು ಅರಿತಿದ್ದ ಅಂಬೇಡ್ಕರ್ ಜೀವನವನ್ನು ಶಿಕ್ಷಣ,ಸಂಘಟನೆ ಮತ್ತು ಹೋರಾಟಕ್ಕೆ ಮೀಸಲಿಟ್ಟಿದ್ದರು. ಹಾಗಾಗಿ ಪೋಷಕರು ಮಕ್ಕಳ ಶಿಕ್ಷಣದ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕು ಎಂದು ಟಿ.ಹೊಸಹಳ್ಳಿ ಗ್ರಾ.ಪಂ ಪಿಡಿಒ ಮಂಜುಳಾ ಸಲಹೆ ಮಾಡಿದರು.

ಕಲಾತಂಡಗಳೊಂದಿಗೆ ಅಂಬೇಡ್ಕರ್ ಭಾವಚಿತ್ರ ಮೆರವಣಿಗೆ ಮಾಡಲಾಯಿತು. ಸಮತಾ ಸೈನಿಕ ದಳದ ಜಿ.ಗೋವಿಂದಯ್ಯ, ಚಂದ್ರು, ಕೋಟೆ ಪ್ರಕಾಶ್, ಮಧುಸೂಧನ್, ಬಾಬು ರೆಡ್ಡಿ, ಮಲ್ಲಿಕಾರ್ಜುನ್, ಟ್ರಸ್ಟ್ ಅಧ್ಯಕ್ಷ ವೆಂಕಟೇಶ್ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260427-14-1696063952

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.