ಹಾರೋಹಳ್ಳಿ: ತಾಲ್ಲೂಕಿನ ಚೀಲೂರು ಗ್ರಾಮದಲ್ಲಿ ನಿರ್ಮಾಣ ಹಂತದಲ್ಲಿರುವ ಕರ್ನಾಟಕ ಪಬ್ಲಿಕ್ ಶಾಲೆಯ ಕಟ್ಟಡವನ್ನು ಶಾಸಕ ಇಕ್ಬಾಲ್ ಹುಸೇನ್ ಪರಿಶೀಲಿಸಿದರು.

ಮಕ್ಕಳಿಗೆ ಆಸ್ತಿ ಮಾಡುತ್ತೀವೋ ಇಲ್ಲವೋ ಗೊತ್ತಿಲ್ಲ. ಆದರೆ, ಕಡ್ಡಾಯವಾಗಿ ಶಿಕ್ಷಣ ಕೊಡಿಸಬೇಕು. ಒಂದು ಶಾಲೆ ನೂರು ದೇಗುಲಗಳಿಗೆ ಸಮ ಎಂದು ಅಭಿಪ್ರಾಯಪಟ್ಟರು.

ರಾಜ್ಯದಾದ್ಯಂತ ಗುಣಮಟ್ಟದ ಶಿಕ್ಷಣ ನೀಡಲು ಕೆಪಿಎಸ್ ಶಾಲೆ ತೆರೆಯಲಾಗುತ್ತಿದೆ. ಸಿಎಸ್ಆರ್ ಅನುದಾನದಲ್ಲಿ ಯಾವ ಖಾಸಗಿ ಶಾಲೆಗಳಿಗೂ ಕಮ್ಮಿ ಇಲ್ಲದಂತೆ ಎಲ್ಲಾ ರೀತಿಯ ಸೌಲಭ್ಯ ಕಲ್ಪಿಸಲಾಗುವುದು ಎಂದರು.

ಮ್ಯಾಗ್ನೆಟ್ ಶಾಲೆ ವಿಚಾರದಲ್ಲಿ ಗೊಂದಲ ಬೇಡ. ಯಾವುದೇ ರೀತಿಯ ವದಂತಿಗಳಿಗೂ ಕಿವಿಗೊಡಬೇಡಿ. ಗ್ರಾಮದ ಶಾಲೆ ಮುಚುತ್ತದೆ ಎಂದು ಆಲೋಚನೆ ಮಾಡಬೇಡಿ. ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕೊಡುವ ಬಗ್ಗೆ ಮಾತ್ರ ಗಮನ ಹರಿಸಿ. ಕೆಪಿಎಸ್ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ದೊರೆಯಲಿದೆ ಎಂದರು.

ಡಿಡಿಪಿಐ ಸ್ವಾಮಿ, ಬಿಇಒ ಮತ್ತಿಗೌಡ, ಪಿಡಿಒ ಮಹೇಶ್, ಕೇಬಲ್ ರವಿ, ಲೋಕೇಶ್, ಸಣ್ಣಪ್ಪ, ಹೊನ್ನಗಿರಿಗೌಡ, ಕುಮಾರ್ ರಾವ್, ಹರೀಶ್, ಬಸವರಾಜು, ಎಸ್ಡಿಎಂಸಿ ಅಧ್ಯಕ್ಷ ಚೀಲೂರು ಮುನಿರಾಜು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260528-14-977449547

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.