ಹಾರೋಹಳ್ಳಿ: ವಿದ್ಯಾರ್ಥಿಗಳು ಜೀವನದಲ್ಲಿ ಉತ್ತಮ ಹವ್ಯಾಸ ರೂಢಿಸಿಕೊಳ್ಳಬೇಕು. ಮಾದಕ ವಸ್ತುಗಳಿಂದ ಮೊದಲು ದೂರವಿರಬೇಕು ಎಂದು ನಿವೃತ್ತ ಮುಖ್ಯ ಶಿಕ್ಷಕ ಯಾಕೂಬ್ ಪಾಷಾ ಹೇಳಿದರು.

ಹಾರೋಹಳ್ಳಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ನಡೆದ ವಿಶ್ವ ಆರೋಗ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಯುವ ಪೀಳಿಗೆ ಮಾದಕ ವಸ್ತು ಗೀಳು ಅಂಟಿಸಿಕೊಂಡು ಆರೋಗ್ಯ ಹಾಳು ಮಾಡಿಕೊಳ್ಳುವುದು ತರವಲ್ಲ. ಕ್ಷಣಿಕ ಸುಖಕ್ಕೆ ಬದುಕು ಬಲಿಕೊಡದೆ ದುಶ್ಚಟಗಳ ದುಷ್ಪರಿಣಾಮ ಅರಿತು ಎಚ್ಚರ ವಹಿಸಬೇಕು ಎಂದು ಸಲಹೆ ನೀಡಿದರು.

ಒತ್ತಡ ಸಂದರ್ಭದಲ್ಲಿ ಯೋಗಾಸನ, ವ್ಯಾಯಾಮ, ಪ್ರಾಣಾಯಾಮ, ಅಭ್ಯಾಸ ಮೈಗೂಢಿಸಿಕೊಳ್ಳಬೇಕೇ ಹೊರತು ಮಾದಕ ವ್ಯಸನಗಳನ್ನಲ್ಲ ಎಂದು ಹೇಳಿದರು.

ಪ್ರಾಂಶುಪಾಲ ಕಿಶೋರ್ ಮಾತನಾಡಿ, ಇಂದಿನ ಸ್ಪರ್ಧತ್ಮಕ ಜಗತ್ತಿನಲ್ಲಿ ನಿರೀಕ್ಷೆ ಪ್ರಮಾಣ ಹೆಚ್ಚಾಗಿರುವ ಕಾರಣ ವೇಗಕ್ಕೆ ತಾಳ ಹಾಕಲು ಕಷ್ಟವಾಗಿ ತಪ್ಪುದಾರಿ ಹಿಡಿಯುತ್ತಿದ್ದಾರೆ. ಮಾದಕ ದ್ರವ್ಯಗಳ ವ್ಯಸನಕ್ಕೆ ಬಲಿಯಾಗುತ್ತಿದ್ದಾರೆ. ಇದನ್ನೆಲ್ಲ ತಡೆಗಟ್ಟುವ ನಿಟ್ಟಿನಲ್ಲಿ ಜಗತ್ತಿನಾದ್ಯಂತ ಮಾದಕ ದ್ರವ್ಯಗಳ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ಶೋಭಾ, ಎನ್.ಎಸ್.ಎಸ್ ಆಧಿಕಾರಿ ಹೇಮನಾಯ್ಕ, ಪ್ರೊ.ಲಕ್ಷ್ಮಮ್ಮ, ಗೀತಾ, ರಮೇಶ್, ಕಾಳನಾಯಕ್, ರೂಪಾ ಬಾಯಿ, ಅತಿಥಿ ಉಪನ್ಯಾಸಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260412-14-1299266022

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.