ಹಾಸನ: ‘ದೇಶದಲ್ಲಿ ದಿನದಿಂದ ದಿನಕ್ಕೆ ಮಕ್ಕಳ ಕಳ್ಳಸಾಗಣೆ ಪ್ರಕರಣಗಳು ಹೆಚ್ಚಾಗುತ್ತಿದ್ದು, ಅದನ್ನು ತಡೆಗಟ್ಟಲು ಪ್ರತಿಯೊಬ್ಬ ನಾಗರಿಕರೂ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು’ ಎಂದು ಎಂ.ಜಿ.ರಸ್ತೆ ಮಹಿಳಾ ಕಾಲೇಜಿನ ಸಮಾಜಶಾಸ್ತ್ರ ಪ್ರಾಧ್ಯಾಪಕ ಬಾಷಾ ಕೆ. ಹೇಳಿದರು.

ನಗರದ ಆರ್.ಸಿ.ರಸ್ತೆ ಗಂಧದಕೋಠಿ ಆವರಣದ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಐ.ಕ್ಯೂ.ಎ.ಸಿ ಘಟಕ ಹಾಗೂ ಸಮಾಜಶಾಸ್ತ್ರ ವಿಭಾಗದ ವತಿಯಿಂದ ಮಂಗಳವಾರ ಆಯೋಜಿಸಿದ್ದ ‘ಮಕ್ಕಳು ಮತ್ತು ಕಳ್ಳಸಾಗಣೆ’ ವಿಷಯದ ವಿಶೇಷ ಉಪನ್ಯಾಸ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

‘ರಾಜ್ಯದಲ್ಲಿ ಪ್ರತಿದಿನ 20ರಿಂದ 30 ಮಕ್ಕಳು ಕಾಣೆ ಆಗುತ್ತಿರುವುದು ವರದಿಯಾಗುತ್ತಿದೆ. ಅಂತರರಾಷ್ಟ್ರೀಯ ಮಟ್ಟದಲ್ಲಿ ಮಕ್ಕಳ ಕಳ್ಳಸಾಗಣೆ ದೊಡ್ಡ ಪ್ರಮಾಣದಲ್ಲಿ ನಡೆಯುತ್ತಿದ್ದು, ಸುಮಾರು ₹12 ಲಕ್ಷ ಕೋಟಿ ಮೌಲ್ಯದ ಅಕ್ರಮ ವಹಿವಾಟು ಇದರಿಂದ ನಡೆಯುತ್ತಿದೆ’ ಎಂದು ತಿಳಿಸಿದರು.

‘ಮಕ್ಕಳನ್ನು ಕಾಫಿ ತೋಟಗಳು, ಕ್ರಷರ್ ಘಟಕಗಳು ಹಾಗೂ ಇಟ್ಟಿಗೆ ಕಾರ್ಖಾನೆಗಳಲ್ಲಿ ಬಲವಂತವಾಗಿ ದುಡಿಸಿಕೊಳ್ಳಲಾಗುತ್ತಿದೆ. ಕೆಲವರನ್ನು ಭಿಕ್ಷಾಟನೆಗೆ ತಳ್ಳಲಾಗುತ್ತಿದೆ. ನಕಲಿ ಗುರುತಿನ ಚೀಟಿಗಳ ಮೂಲಕ ವಂಚನೆ ನಡೆಯುತ್ತಿದ್ದು, ಇತ್ತೀಚೆಗೆ ಮಕ್ಕಳು ಮಾದಕ ವಸ್ತುಗಳಿಗೆ ಬಲಿ ಆಗುತ್ತಿರುವುದು ಆತಂಕಕಾರಿ ಬೆಳವಣಿಗೆ’ ಎಂದು ಹೇಳಿದರು.

‘ಮಕ್ಕಳು ಶಿಕ್ಷಣ ಮತ್ತು ಕೌಶಲಗಳ ಮೂಲಕ ಸ್ವಾವಲಂಬಿ ಜೀವನ ನಡೆಸಬೇಕು. ಅನಗತ್ಯವಾಗಿ ಅಪರಿಚಿತ ಸ್ಥಳಗಳಿಗೆ ಹೋಗುವುದನ್ನು ತಪ್ಪಿಸಬೇಕು ಹಾಗೂ ಸ್ವರಕ್ಷಣೆ ಬಗ್ಗೆ ಎಚ್ಚರಿಕೆಯಿಂದ ಇರಬೇಕು’ ಎಂದರು.

ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಿ.ಕೆ.ಮಂಜಯ್ಯ ಮಾತನಾಡಿ, ‘ಮಕ್ಕಳ ಕಳ್ಳಸಾಗಾಣಿಕೆ ಮತ್ತು ಅಂಗಾಂಗಗಳ ಅಕ್ರಮ ವಹಿವಾಟು ಹೆಚ್ಚುತ್ತಿರುವುದು ಗಂಭೀರ ಸಮಸ್ಯೆಯಾಗಿದೆ. ಸಮಾಜದ ಪ್ರತಿಯೊಬ್ಬರೂ ಜಾಗೃತರಾಗಿದ್ದು, ಅನುಮಾನಾಸ್ಪದ ಚಟುವಟಿಕೆಗಳನ್ನು ಕಂಡರೆ ತಕ್ಷಣವೇ ಪೊಲೀಸ್ ಅಥವಾ ಸಂಬಂಧಿತ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು’ ಎಂದು ಸಲಹೆ ನೀಡಿದರು.

ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥ ಕೆ.ಆರ್.ಸುರೇಶ್ ಕುಮಾರ್, ಸಹ ಪ್ರಾಧ್ಯಾಪಕ ವೆಂಕಟೇಶ್ ಎನ್., ಐ.ಕ್ಯೂ.ಎ.ಸಿ ಸಂಚಾಲಕ ಜಿ.ಆರ್.ಮೋಹನ್ ಕುಮಾರ್ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260409-36-1209446916

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.