ಹಾಸನ: ‘ನಮ್ಮೂರ ಶಾಲೆ ನಮ್ಮ ಕಣ್ಮಣಿ, ಕೆಪಿಎಸ್ ಶಾಲೆಗೆ ನಮ್ಮ ಮಕ್ಕಳನ್ನು ಕಳುಹಿಸಲು ಒಪ್ಪಿಗೆ ಇಲ್ಲ’ ಎಂದು ಅರಸೀಕೆರೆ ತಾಲ್ಲೂಕಿನ ಹರಳಕಟ್ಟ ಸರ್ಕಾರಿ ಶಾಲೆ ಉಳಿಸಿ ಸಮಿತಿ ಸದಸ್ಯರು, ಶಿಕ್ಷಣಾಧಿಕಾರಿಗೆ ಪತ್ರ ಬರೆದು ವಿರೋಧ ವ್ಯಕ್ತಪಡಿಸಿದ್ದಾರೆ.

ಕೆಪಿಎಸ್ ಮ್ಯಾಗ್ನೆಟ್ ಯೋಜನೆ ವಿರೋಧಿಸಿ ಜಿಲ್ಲೆಯಾದ್ಯಂತ ಹಲವು ಹಳ್ಳಿಗಳಲ್ಲಿ ‘ನಮ್ಮೂರ ಶಾಲೆ ನಮ್ಮ ಹೆಮ್ಮೆ’ ಎಂಬ ಘೋಷಣೆಯೊಂದಿಗೆ ಹೋರಾಟ ನಡೆಯುತ್ತಿದ್ದರೂ ಸರ್ಕಾರ ಯೋಜನೆಯನ್ನು ಮುಂದುವರಿಸುತ್ತಿದೆ ಎಂದು ಎಐಡಿಎಸ್ಒ ಜಿಲ್ಲಾ ಘಟಕ ದೂರಿದೆ.

ಇದರ ಭಾಗವಾಗಿ ಹರಳಕಟ್ಟ ಗ್ರಾಮಸ್ಥರು ಬುಧವಾರ ಶಾಲೆ ಮುಂದೆ ‘ನಮ್ಮೂರ ಶಾಲೆ ನಮ್ಮ ಕಣ್ಮಣಿ’ ಎಂಬ ಬ್ಯಾನರ್ ಕಟ್ಟಿ, ಮುಂದಿನ ಶೈಕ್ಷಣಿಕ ಸಾಲಿಗೆ ವಿದ್ಯಾರ್ಥಿಗಳನ್ನು ಸ್ವಾಗತಿಸಿದರು. ಮುಂದೆಯೂ ನಮ್ಮ ಶಾಲೆ ಉಳಿಸಿಕೊಳ್ಳಲು ಎಂತಹ ಹೋರಾಟಕ್ಕೂ ಸಿದ್ಧ ಎಂದು ಸಮಿತಿ ಸದಸ್ಯರು ಘೋಷಣೆ ಕೂಗಿದರು.

ಎಐಡಿಎಸ್ಒ ಜಿಲ್ಲಾ ಘಟಕದ ಅಧ್ಯಕ್ಷೆ ಚೈತ್ರಾ, ಕಾರ್ಯದರ್ಶಿ ಸುಷ್ಮಾ, ಹರಳಕಟ್ಟ ಶಾಲೆ ಉಳಿಸಿ ಸಮಿತಿ ಅಧ್ಯಕ್ಷ ಸುಬ್ಬಣ್ಣ, ಸದಸ್ಯರಾದ ರಮೇಶ್, ರುದ್ರೇಶ್, ಓಂಕಾರಮೂರ್ತಿ, ಸೋಮಯ್ಯ, ಶಿವಣ್ಣ, ಶಾಲಾ ಮಕ್ಕಳು ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260515-36-1019667579

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.