ಹಾಸನ: ನಗರದ ಸರ್ಕಾರಿ ಕಾನೂನು ಕಾಲೇಜಿನ ವಿದ್ಯಾರ್ಥಿಗಳು ಗಂಭೀರ ಸಂಕಷ್ಟಕ್ಕೆ ಸಿಲುಕಿದ್ದು, ಪರೀಕ್ಷೆ ಬರೆದಿದ್ದರೂ ಫಲಿತಾಂಶ ಪ್ರಕಟಿಸದೇ ಕಾನೂನು ವಿಶ್ವವಿದ್ಯಾಲಯ ಕಿರುಕುಳ ನೀಡುತ್ತಿದೆ ಎಂಬ ಆರೋಪ ಕೇಳಿಬಂದಿದೆ.

2022-23ನೇ ಸಾಲಿನಲ್ಲಿ ಹಾಸನದ ಸರ್ಕಾರಿ ಕಾನೂನು ಕಾಲೇಜಿನಲ್ಲಿ ನಿಗದಿತ 60 ಸೀಟುಗಳ ಬದಲಿಗೆ 120 ವಿದ್ಯಾರ್ಥಿಗಳನ್ನು ದಾಖಲಿಸಿಕೊಳ್ಳಲಾಗಿತ್ತು. ಬಾರ್ ಕೌನ್ಸಿಲ್ ಆಫ್ ಇಂಡಿಯಾ (ಬಿಸಿಐ) ಅನುಮತಿ ಸಿಗುವ ಮೊದಲೇ ಹೆಚ್ಚುವರಿ ದಾಖಲಾತಿ ಮಾಡಿಕೊಂಡಿದ್ದೇ ಸಮಸ್ಯೆಗೆ ಕಾರಣ. 4ನೇ ವರ್ಷಕ್ಕೆ ಬಂದಿರುವ ನಮ್ಮ ಫಲಿತಾಂಶವನ್ನು ವಿಶ್ವವಿದ್ಯಾಲಯವು ಈಗ ಅಮಾನ್ಯಗೊಳಿಸಿದ್ದು, ಬೀದಿಗೆ ಬೀಳುವಂತಾಗಿದೆ ಎಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯ ಸರ್ಕಾರದ ಅನುಮತಿಯಂತೆ ಹೆಚ್ಚುವರಿ ಪ್ರವೇಶ ಪಡೆದ ಸುಮಾರು 40 ವಿದ್ಯಾರ್ಥಿಗಳು ಇದೀಗ ಅನಿಶ್ಚಿತತೆಯಲ್ಲಿ ಸಿಲುಕಿದ್ದಾರೆ. ಬಿಸಿಐ ಆನ್ಲೈನ್ ಪರಿಶೀಲನೆ ನಡೆಸಿ, ಮೊದಲ ಮತ್ತು ಎರಡನೇ ವರ್ಷದ ನವೀಕರಣ ನೀಡಿತ್ತು. ಆದರೆ ಮೂರನೇ ವರ್ಷದಲ್ಲಿ ಮೂಲಸೌಲಭ್ಯಗಳ ಕೊರತೆ ಉಲ್ಲೇಖಿಸಿ ಅನುಮತಿ ತಡೆಹಿಡಿದಿದೆ. ಇದರಿಂದ ನಾಲ್ಕು ಹಾಗೂ ಐದನೇ ವರ್ಷದ ಕಾನೂನು ವಿದ್ಯಾರ್ಥಿಗಳು ಸಂಕಷ್ಟ ಎದುರಿಸುತ್ತಿದ್ದಾರೆ.

14 ತಿಂಗಳ ವಿಳಂಬಕ್ಕೆ ₹14 ಲಕ್ಷ ದಂಡ ಕಟ್ಟಬೇಕು ಎಂದು ಹೇಳಲಾಗುತ್ತಿದೆ. ಸರ್ಕಾರಿ ಕಾಲೇಜು ಇಷ್ಟು ಹಣವನ್ನು ಹೇಗೆ ಹೊಂದಿಸಬೇಕು? ಇಲ್ಲಿ ಓದುತ್ತಿರುವವರು ಬಹುತೇಕ ಬಡ ಕುಟುಂಬದ ವಿದ್ಯಾರ್ಥಿಗಳು ಎಂದು ಕಾಲೇಜು ಪ್ರಾಂಶುಪಾಲರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸಂಸದ ಶ್ರೇಯಸ್ ಪಟೇಲ್ ಭೇಟಿ: ಇದನ್ನು ಖಂಡಿಸಿ ವಿದ್ಯಾರ್ಥಿಗಳು ಎರಡು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದು, ಶನಿವಾರ ಸ್ಥಳಕ್ಕೆ ಭೇಟಿ ನೀಡಿದ ಸಂಸದ ಶ್ರೇಯಸ್ ಪಟೇಲ್, ವಿದ್ಯಾರ್ಥಿಗಳ ಸಮಸ್ಯೆಯನ್ನು ಆಲಿಸಿ ಪರಿಹಾರ್ ಭರವಸೆ ನೀಡಿದರು.

ಈ ರೀತಿಯ ಸಮಸ್ಯೆ ಎದುರಾಗಬಾರದಿತ್ತು. ವಿದ್ಯಾರ್ಥಿಗಳು ಪದವಿ ಮುಗಿಸುವವರೆಗೆ ಯಾವುದೇ ತೊಂದರೆ ಆಗದಂತೆ ಕ್ರಮ ಕೈಗೊಳ್ಳುತ್ತೇವೆ. ಕಾನೂನು ಸಚಿವರೊಂದಿಗೆ ಮಾತುಕತೆ ನಡೆಸಿ ಸಮಸ್ಯೆ ಬಗೆಹರಿಸಲು ಪ್ರಯತ್ನಿಸುತ್ತೇನೆ. ಅಗತ್ಯವಿದ್ದರೆ ಕೇಂದ್ರ ಸಚಿವರು ಹಾಗೂ ಬಾರ್ ಕೌನ್ಸಿಲ್ ಅಧಿಕಾರಿಗಳೊಂದಿಗೆ ಕೂಡ ಚರ್ಚೆ ಮಾಡುತ್ತೇನೆ ಎಂದು ತಿಳಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260412-36-286373212

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.