ಹಾಸನ: ‘ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಆತ್ಮವಿಶ್ವಾಸ, ಶಿಸ್ತು ಹಾಗೂ ನಿರಂತರ ಅಧ್ಯಯನವನ್ನು ಜೀವನದ ಭಾಗವನ್ನಾಗಿ ಮಾಡಿಕೊಂಡಲ್ಲಿ ಯಾವುದೇ ಕ್ಷೇತ್ರದಲ್ಲೂ ಯಶಸ್ಸು ಸಾಧಿಸಬಹುದು’ ಎಂದು ವೈದ್ಯ ಡಾ.ಅಂಜನಪ್ಪ ಟಿ.ಎಚ್.ಅಭಿಪ್ರಾಯಪಟ್ಟರು.

ನಗರದ ಸರ್ಕಾರಿ ಕಲಾ, ವಾಣಿಜ್ಯ ಮತ್ತು ಸ್ನಾತಕೋತ್ತರ ಕಾಲೇಜಿನಲ್ಲಿ ಶನಿವಾರ ಆಯೋಜಿಸಿದ್ದ ಸಹಪಠ್ಯ ಚಟುವಟಿಕೆಗಳ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

‘ಐ ಆಮ್ ದ ಬೆಸ್ಟ್’ ಎನ್ನುವ ಧನಾತ್ಮಕ ಚಿಂತನೆಯೇ ವ್ಯಕ್ತಿತ್ವ ವಿಕಸನದ ಮೊದಲ ಹೆಜ್ಜೆ. ಪ್ರತಿಯೊಬ್ಬ ವಿದ್ಯಾರ್ಥಿಯೂ ತನ್ನಲ್ಲಿರುವ ಸಾಮರ್ಥ್ಯವನ್ನು ಅರಿತುಕೊಂಡು ಆತ್ಮವಿಶ್ವಾಸದಿಂದ ಮುನ್ನಡೆಯಬೇಕು. ನಮ್ಮನ್ನು ನಾವು ನಂಬಿಕೊಳ್ಳುವ ಮನೋಭಾವ ಬೆಳೆಸಿಕೊಂಡರೆ ಬದುಕಿನ ಹಲವು ಸವಾಲುಗಳನ್ನು ಸುಲಭವಾಗಿ ಎದುರಿಸಬಹುದು’ ಎಂದು ಸಲಹೆ ನೀಡಿದರು.

‘ಜೀವನದಲ್ಲಿ ಸಾಧನೆ ಮಾಡಲು ಕೇವಲ ಅಂಕಗಳು ಮಾತ್ರ ಸಾಲದು. ಉತ್ತಮ ನಡವಳಿಕೆ, ಮಾನವೀಯ ಮೌಲ್ಯಗಳು ಮತ್ತು ಸಮಾಜದ ಬಗ್ಗೆ ಕಾಳಜಿಯೂ ಅಗತ್ಯ. ವಿದ್ಯಾರ್ಥಿ ಜೀವನದಲ್ಲಿ ಓದು ಮತ್ತು ಅಧ್ಯಯನಕ್ಕೆ ಪರ್ಯಾಯವೇ ಇಲ್ಲ. ಪ್ರತಿದಿನ ಹೊಸ ವಿಷಯಗಳನ್ನು ಕಲಿಯುವ ಅಭ್ಯಾಸ ಬೆಳೆಸಿಕೊಳ್ಳಬೇಕು’ ಎಂದರು.

‘ಮೊಬೈಲ್ ಹಾಗೂ ಸಾಮಾಜಿಕ ಜಾಲತಾಣಗಳ ಅತಿಯಾದ ಬಳಕೆ ವಿದ್ಯಾರ್ಥಿಗಳ ಭವಿಷ್ಯಕ್ಕೆ ಅಡ್ಡಿಯಾಗಬಹುದು. ಸಮಯದ ಮೌಲ್ಯವನ್ನು ಅರಿತು ಶಿಸ್ತಿನಿಂದ ಬದುಕಬೇಕು’ ಎಂದು ಕಿವಿಮಾತು ಹೇಳಿದರು.

ಆರೋಗ್ಯದ ಮಹತ್ವವನ್ನು ವಿವರಿಸಿದ ಡಾ.ಅಂಜನಪ್ಪ, ವಿದ್ಯಾರ್ಥಿಗಳು ದೈಹಿಕ ಹಾಗೂ ಮಾನಸಿಕ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ತುರ್ತು ಸಂದರ್ಭಗಳಲ್ಲಿ ಅನುಸರಿಸಬೇಕಾದ ಆರೋಗ್ಯ ಸುರಕ್ಷತಾ ಕ್ರಮಗಳು, ಸಾಮಾನ್ಯ ಕಾಯಿಲೆಗಳ ಬಗ್ಗೆ ಜಾಗೃತಿ ಹಾಗೂ ಪ್ರಾಥಮಿಕ ಚಿಕಿತ್ಸೆ ಕುರಿತು ಮಾಹಿತಿ ಹಂಚಿಕೊಂಡರು.

ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ರಾಜು ಡಿ.ಎಸ್. ಮಾತನಾಡಿ, ‘ಗ್ರಾಮೀಣ ಭಾಗದ ವಿದ್ಯಾರ್ಥಿಗಳಲ್ಲಿಯೂ ಅಪಾರ ಪ್ರತಿಭೆ ಅಡಗಿದ್ದು, ಸರಿಯಾದ ಮಾರ್ಗದರ್ಶನ ಹಾಗೂ ಪರಿಶ್ರಮದಿಂದ ಅವರು ಉನ್ನತ ಹುದ್ದೆಗಳನ್ನು ಅಲಂಕರಿಸಬಹುದು’ ಎಂದರು.

‘ಕಾಲೇಜು ಕೇವಲ ಪಾಠ ಕಲಿಸುವ ಕೇಂದ್ರವಲ್ಲ. ವಿದ್ಯಾರ್ಥಿಗಳ ವ್ಯಕ್ತಿತ್ವ ರೂಪಿಸುವ ಪವಿತ್ರ ವೇದಿಕೆಯಾಗಿದೆ. ಶಿಕ್ಷಣದ ಜೊತೆಗೆ ಸಾಂಸ್ಕೃತಿಕ, ಕ್ರೀಡಾ ಹಾಗೂ ಸಾಮಾಜಿಕ ಚಟುವಟಿಕೆಗಳಲ್ಲಿ ಭಾಗವಹಿಸುವುದರಿಂದ ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣಗಳು ಬೆಳೆಯುತ್ತವೆ’ ಎಂದು ಹೇಳಿದರು.

ಸಾಂಸ್ಕೃತಿಕ ವೇದಿಕೆ ಸಂಚಾಲಕ ಬಸವೇಗೌಡ ಪ್ರಾಸ್ತಾವಿಕವಾಗಿ ಮಾತನಾಡಿದರು. ಸವಿತಾ ಸ್ವಾಗತಿಸಿದರು. ಮಹೇಶ್ ವಂದಿಸಿದರು. ಗೋಪಾಲ್ ನಿರೂಪಿಸಿದರು. ಕಾಲೇಜಿನ ಶೈಕ್ಷಣಿಕ ಡೀನ್ ಹರೀಶ್ ಎಂ.ಕೆ., ಪರೀಕ್ಷಾ ನಿಯಂತ್ರಕ ಮುರಳೀಧರ ಕೆ.ಡಿ., ವಿವಿಧ ಸಮಿತಿಗಳ ಸಂಚಾಲಕರು, ಉಪನ್ಯಾಸಕರು, ವಿದ್ಯಾರ್ಥಿಗಳು ಹಾಗೂ ಪೋಷಕರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260511-36-1500553247

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.