ಹಾಸನ: ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ತಮ್ಮಲ್ಲಿರುವ ಪ್ರತಿಭೆ ಹಾಗೂ ಕೌಶಲವನ್ನು ಗುರುತಿಸಿ ಬೆಳೆಸಿಕೊಳ್ಳಬೇಕು ಎಂದು ಬೆಂಗಳೂರು ಐಐಟಿ ಸಂಶೋಧನಾ ಪ್ರಾಧ್ಯಾಪಕ ಗೋಪಾಲಕೃಷ್ಣ ಹೆಗ್ಡೆ ತಿಳಿಸಿದರು.

ನಗರದ ಹೊರವಲಯದ ನವಕಿಸ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಶುಕ್ರವಾರ ಆಯೋಜಿಸಿದ್ದ ‘ನವ ಉತ್ಸವ’ದಲ್ಲಿ ಭಾಗವಹಿಸಿ ಮಾತನಾಡಿದರು.

ಪ್ರತಿಯೊಬ್ಬ ವಿದ್ಯಾರ್ಥಿಯಲ್ಲೂ ಒಂದಿಲ್ಲೊಂದು ವಿಶೇಷ ಪ್ರತಿಭೆ ಹಾಗೂ ಕೌಶಲ ಅಡಗಿರುತ್ತದೆ. ಆದರೆ ಪೋಷಕರು ಮಕ್ಕಳ ಆಸಕ್ತಿ ಅರಿಯದೇ ತಮ್ಮ ನಿರೀಕ್ಷೆಯಂತೆ ಶಿಕ್ಷಣ ನೀಡುತ್ತಿರುವುದು ಹಲವರ ಪ್ರತಿಭೆ ಮರೆಯಾಗಲು ಕಾರಣವಾಗಿದೆ ಎಂದರು.

ಪ್ರಸ್ತುತ ಶಿಕ್ಷಣ ವ್ಯವಸ್ಥೆಯಲ್ಲಿ ಸಾಕಷ್ಟು ಬದಲಾವಣೆಗಳಾಗಿದ್ದು, ಬೋಧನೆ ಹಾಗೂ ಕಲಿಕೆಯ ವಿಧಾನಗಳಲ್ಲೂ ದೊಡ್ಡ ವ್ಯತ್ಯಾಸ ಕಂಡುಬರುತ್ತಿದೆ. ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಎರಡು ದಶಕಗಳಿಂದ ಯಾವುದೇ ಕ್ಷೇತ್ರವಾಗಲಿ, ಕಂಪ್ಯೂಟರ್ ಆಧಾರಿತ ಕಾರ್ಯಪದ್ಧತಿ ಅನಿವಾರ್ಯವಾಗಿದೆ. ತಂತ್ರಜ್ಞಾನದ ಜ್ಞಾನ ಹೊಂದಿರುವ ವಿದ್ಯಾರ್ಥಿಗಳಿಗೆ ಭವಿಷ್ಯದಲ್ಲಿ ಹೆಚ್ಚಿನ ಅವಕಾಶಗಳಿವೆ ಎಂದು ಹೇಳಿದರು.

ಬೆಂಗಳೂರಿನ ವೆಲ್ಸ್ ಫಾರ್ಗೋ ಸಂಸ್ಥೆಯ ಉಪಾಧ್ಯಕ್ಷೆ ಸೌಮ್ಯ ಎನ್.ಸ್ವಾಮಿ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಛಲ ಮತ್ತು ಹಂಬಲವಿದ್ದರೆ ಜೀವನದಲ್ಲಿ ಯಾವುದೇ ಗುರಿ ಸಾಧಿಸಬಹುದು ಎಂದು ಹೇಳಿದರು.

ಯಾವಾಗಲೂ ದೊಡ್ಡ ಕನಸು ಕಾಣಬೇಕು. ತಮ್ಮ ಬಗ್ಗೆ ಕೀಳರಿಮೆ ಹೊಂದದೇ ಗುರಿಯತ್ತ ದೃಢ ಸಂಕಲ್ಪದಿಂದ ಸಾಗಿದರೆ ಯಶಸ್ಸು ಖಚಿತ ಎಂದರು.

ಕಾಲೇಜು ಪ್ರಾಂಶುಪಾಲ ಡಿ.ವಿ.ಮಂಜುನಾಥ, ಡೀನ್ ಶ್ರೀಪಾದ ಮಾರ್ಕಂಡೆ, ಪ್ರಾಧ್ಯಾಪಕರಾದ ಎಂ.ಎಸ್.ಸತೀಶ್, ಎಂ.ಆರ್.ವಿನುತಾ, ರಾಘವೇಂದ್ರ, ವಿವೇಕಾನಂದ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-36-720364954

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.