ಹಾಸನ: ಎ.ವಿ.ಕಾಂತಮ್ಮ ಮಹಿಳಾ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ವತಿಯಿಂದ ಗ್ರಾಮೀಣ ಕ್ರೀಡಾ ವೈಭವ ಕಾರ್ಯಕ್ರಮವನ್ನು ಗುರುವಾರ ಆಯೋಜಿಸಲಾಗಿತ್ತು.

ಉದ್ಘಾಟಿಸಿ ಮಾತನಾಡಿದ ಮಲೆನಾಡು ತಾಂತ್ರಿಕ ಶಿಕ್ಷಣ ಸಮಿತಿಯ ಕಾರ್ಯದರ್ಶಿ ಸಿ.ಆರ್.ಜಗದೀಶ್, ಗ್ರಾಮೀಣ ಪ್ರದೇಶದ ಕ್ರೀಡೆಗಳನ್ನು ವಿದ್ಯಾರ್ಥಿಗಳಿಗಾಗಿ ಆಯೋಜಿಸಿರುವುದು ಶ್ಲಾಘನೀಯ. ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಹೆಣ್ಣು ಮಕ್ಕಳು ದೈಹಿಕ ಮತ್ತು ಮಾನಸಿಕ ಸದೃಢತೆ ಕಾಪಾಡಿಕೊಳ್ಳಲು ಸಾಧ್ಯವಾಗುತ್ತದೆ. ಪ್ರತಿಯೊಬ್ಬರು ಆರೋಗ್ಯದಿಂದ ಇರಲು ಕ್ರೀಡೆಗಳು ಸಹಕಾರಿ ಎಂದು ತಿಳಿಸಿದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಮಲೆನಾಡು ತಾಂತ್ರಿಕ ಶಿಕ್ಷಣ ಸಮಿತಿಯ ಅಧ್ಯಕ್ಷ ಆರ್.ಟಿ.ದ್ಯಾವೇಗೌಡ ಮಾತನಾಡಿ, ವಿದ್ಯಾರ್ಥಿ ಜೀವನದಲ್ಲಿ ಕ್ರೀಡೆಗಳಲ್ಲಿ ಪಾಲ್ಗೊಳ್ಳುವುದು ಅತ್ಯಂತ ಉಪಯುಕ್ತ. ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಕ್ರೀಡೆಗಳು ಸಹಕಾರಿ. ಎ.ವಿ.ಕಾಂತಮ್ಮ ಮಹಿಳಾ ಕಾಲೇಜಿನಲ್ಲಿ ಗ್ರಾಮೀಣ ಕ್ರಿಡೆಗಳನ್ನು ಏರ್ಪಡಿಸಿರುವುದು ಅರ್ಥಪೂರ್ಣ ಎಂದರು.

ಗ್ರಾಮೀಣ ಕ್ರೀಡೆಗಳಾದ ಹಗ್ಗ ಜಗ್ಗಾಟ, ಗೋಣಿ ಚೀಲದ ಓಟ, ನಿಂಬೆ ಹಣ್ಣಿನ ಓಟ, ಮಡಿಕೆ ಓಡೆಯುವುದು, ನೀರು ಹೊರುವುದು ಮೊದಲಾದ ಕ್ರೀಡೆಗಳಲ್ಲಿ ವಿದ್ಯಾರ್ಥಿನಿಯರು ಉತ್ಸಾಹದಿಂದ ಭಾಗವಹಿಸಿದ್ದರು.

ಖಜಾಂಚಿ ಪಾರ್ಶ್ವನಾಥ್, ವಿದ್ಯಾರ್ಥಿ ಸಂಘದ ಸಲಹೆಗಾರ್ತಿ ಡಾ.ಶಶಿಕಲಾ ಎನ್.ಎಸ್., ವ್ಯವಸ್ಥಾಪಕಿ ಎಚ್.ಎನ್. ಶ್ರೀಲಕ್ಷ್ಮಿ, ದೈಹಿಕ ಶಿಕ್ಷಣ ನಿರ್ದೇಶಕಿ ಡಾ.ಹೇಮಲತಾ ಸಿ.ಎಸ್., ಐಕ್ಯೂಎಸಿ ಸಂಯೋಜಕ ಡಾ.ಪಾಪಯ್ಯ ಉಪಸ್ಥಿತರಿದ್ದರು. ಪ್ರಾಂಶುಪಾಲ ಡಾ.ಸೀ.ಚ. ಯತೀಶ್ವರ್ ಸ್ವಾಗತಿಸಿದರು. ಕನ್ನಡ ಉಪನ್ಯಾಸಕಿ ಮಹಾಲಕ್ಷ್ಮಿ ಜಿ.ಟಿ. ನಿರೂಪಿಸಿ, ವಂದಿಸಿದರು. ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260410-36-486103916

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.