ಹಾಸನ: ಜಿಲ್ಲೆಯ ಯುವ ಜನತೆಗೆ ನೆರವಾಗುವಂತೆ ಹಾಸನ ಜಿಲ್ಲಾ ಕೇಂದ್ರ ಗ್ರಂಥಾಲಯದ ಅಧೀನದಲ್ಲಿರುವ ತಾಂತ್ರಿಕ ವಿಭಾಗದ ಕೊಠಡಿಯಲ್ಲಿ ಸ್ಪರ್ಧಾತ್ಮಕ ಅಧ್ಯಯನ ಕೇಂದ್ರ ‘ಹಾಸನ ಸ್ಪರ್ಧಾ ಕುಟೀರ' ಪ್ರಾರಂಭಿಸಲು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಗ್ರಂಥಾಲಯದಲ್ಲಿ ಓದುಗರಿಗೆ ಮೂಲಸೌಕರ್ಯ ಕಲ್ಪಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದರು.

ಜಿಲ್ಲಾ ಗ್ರಂಥಾಲಯ ಅಧೀನದಲ್ಲಿರುವ ವಾಹನಗಳನ್ನು ನಿಲ್ಲಿಸಲು ನಿರ್ಮಿಸಿರುವ ಶೆಡ್ನಲ್ಲಿ ಪರಾಮರ್ಶನ ವಿಭಾಗದ ಓದುಗರಿಗೆ ಅಧ್ಯಯನ ಮಾಡಲು ಸೂಕ್ತ ರೀತಿಯಲ್ಲಿ ಸ್ಥಳಾವಕಾಶ ವಿಸ್ತರಿಸಬೇಕು ಎಂದು ಸೂಚಿಸಿದರು.

ಹಾಸನ ಸ್ಪರ್ಧಾ ಕುಟೀರ ಕೋಚಿಂಗ್ ಸೆಂಟರ್ನಲ್ಲಿ ಕುಳಿತುಕೊಳ್ಳಲು ಆಸನ ವ್ಯವಸ್ಥೆ ಹಾಗೂ ಡಿಜಿಟಲ್ ಬೋರ್ಡ್ ಅಳವಡಿಸಿ. ಯಾವುದೇ ಇಲಾಖೆಯ ನೋಟಿಫಿಕೇಶನ್ ಆಗಲಿ ಅದರ ಮಾಹಿತಿಯನ್ನು ಪ್ರಕಟಿಸಿ ಮಕ್ಕಳಿಗೆ ಲಭ್ಯವಾಗುವಂತೆ ನೋಡಿಕೊಳ್ಳಿ ಎಂದು ತಿಳಿಸಿದರು.

ಸ್ಪರ್ಧಾತ್ಮಕ ಪರೀಕ್ಷೆ ಅಧ್ಯಯನ ಮಾಡಲು ಬರುವ ಮಕ್ಕಳ ನೋಂದಣಿ ಮಾಡಿಸಿ. ಮಕ್ಕಳ ಬಳಕೆಗೆ ಅನುವು ಆಗುವಂತೆ ಕಲಾಭವನದ ಮೂರನೇ ಮಹಡಿಯಲ್ಲಿರುವ ಗ್ರಂಥಾಲಯವನ್ನು ಕೆಳಭಾಗಕ್ಕೆ ಸ್ಥಳಾಂತರ ಮಾಡಿ. ಗ್ರಂಥಾಲಯ ಮತ್ತು ಕಲಾಭವನಕ್ಕೆ ಸಂಪರ್ಕ ಕಲ್ಪಿಸಲು ಒಂದು ಗೇಟ್ ಅಳವಡಿಸಲು ಕ್ರಮ ಕೈಗೊಳ್ಳಿ. ಕಲಾಭವನದ ಹೊರಭಾಗದಲ್ಲಿ ಮೈಕ್ ಬಳಕೆಯನ್ನು ನಿಷೇಧಿಸುವಂತೆ ಸೂಚನೆ ನೀಡಿದರು.

ಓದುವ ಮಕ್ಕಳಿಗೆ ಅನುಕೂಲವಾಗುವಂತೆ ಗ್ರಂಥಾಲಯದ ಬಳಿ ಇಂದಿರಾ ಕ್ಯಾಂಟೀನ್ಗೆ ಕ್ರಮ ಕೈಗೊಳ್ಳಬೇಕು. ಓದುಗರಿಗೆ ತೊಂದರೆ ಆಗದಂತೆ ನಿಶ್ಶಬ್ದತೆ ಕಾಪಾಡಬೇಕು. ಈ ನಿಟ್ಟಿನಲ್ಲಿ ಬೇರೆಯವರು ಅನವಶ್ಯಕವಾಗಿ ಬಂದು ಕುಳಿತು ನಿದ್ದೆ ಮಾಡುವುದನ್ನು ತಡೆಯಬೇಕು ಎಂದು ಹೇಳಿದರು.

ಗ್ರಂಥಾಲಯದಲ್ಲಿ ಓದುವ ಮಕ್ಕಳಿಗೆ ಉಚಿತ ವೈಫೈ ಮತ್ತು ಇಂಟರ್ನೆಟ್ ವ್ಯವಸ್ಥೆ ಕಲ್ಪಿಸಬೇಕು. ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಪರಾಮರ್ಶನ ವಿಭಾಗದಲ್ಲಿ ಓದುಗರು ಕುಳಿತುಕೊಳ್ಳಲು ಅಗತ್ಯ ಪಿಠೋಪಕರಣಗಳಿಗೆ ಕ್ರಿಯಾ ಯೋಜನೆ ತಯಾರಿಸಿ. ಜೊತೆಗೆ ನಗರ ಗ್ರಂಥಾಲಯದ ಹಳೆಯ ಕಟ್ಟಡದಲ್ಲಿರುವ ದಿನಪತ್ರಿಕೆ ವಿಭಾಗದ ಪರಿವರ್ತನೆಗಾಗಿ ಯೋಜನೆ ತಯಾರಿಸಿ ಎಂದು ತಿಳಿಸಿದರು.

ಗ್ರಂಥಾಲಯದ ಆವರಣದಲ್ಲಿ ಗಿಡಗಳನ್ನು ನೆಡುವುದರ ಜೊತೆಗೆ ಸ್ವಚ್ಛತೆ ಕಾಪಾಡಲು ಕಸದ ಬುಟ್ಟಿಗಳನ್ನು ಇಡಬೇಕು. ಗ್ರಂಥಾಲಯದ ಆವರಣದಲ್ಲಿ ವಾಹನಗಳ ನಿಲುಗಡೆಗೆ ವ್ಯವಸ್ಥೆಯನ್ನು ನಿರ್ವಹಣೆ ಮಾಡಲು ಕಾವಲುಗಾರನ ವ್ಯವಸ್ಥೆ ಮಾಡಬೇಕು ಎಂದು ಹೇಳಿದರು.

ವಾಹನಗಳ ಪಾರ್ಕಿಂಗ್ ಶೆಡ್ನಲ್ಲಿ ಇರುವ ಹಳೆಯ ವಾಹನಗಳನ್ನು ನಿಯಮಾನುಸಾರ ವಿಲೇವಾರಿ ಮಾಡಿ, ಈ ಸ್ಥಳವನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಸರ್ಕಾರಿ ರಜೆ ದಿನಗಳಲ್ಲಿಯೂ ಮಕ್ಕಳು ಓದಲು ಬರುವುದರಿಂದ ಗ್ರಂಥಾಲಯ ಚಾಲ್ತಿಯಲ್ಲಿ ಇರುವಂತೆ ನೋಡಿಕೊಳ್ಳಿ ಎಂದು ತಿಳಿಸಿದರು.

ಗ್ರಂಥಾಲಯದ ಮುಂಭಾಗದಲ್ಲಿರುವ ಹೂವಿನ ಹಾಗೂ ಹಣ್ಣಿನ ಅಂಗಡಿಗಳನ್ನು ತೆರವುಗೊಳಿಸಲು ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಬೇಕು. ಗ್ರಂಥಾಲಯಕ್ಕೆ ಬರುವ ಓದುಗರಿಗೆ ತೊಂದರೆ ಆಗದಂತೆ, ದುರ್ವಾಸನೆ ಬರದಂತೆ ಯು.ಜಿ.ಡಿ.ವ್ಯವಸ್ಥೆಯನ್ನು ಸರಿಯಾಗಿ ನಿರ್ವಹಣೆ ಮಾಡಬೇಕು ಎಂದರು.

ಹೊಸ ಕಟ್ಟಡ ನಿರ್ಮಾಣ ಕಾಮಗಾರಿಯನ್ನು ಪೂರ್ಣಗೊಳಿಸಲು ಎಷ್ಟು ಹಣಬೇಕು ಎಂಬುದರ ಬಗ್ಗೆ ಕೂಡಲೇ ವರದಿ ನೀಡಲು ನಿರ್ಮಿತಿ ಕೇಂದ್ರದ ಅಧಿಕಾರಿಗಳಿಗೆ ಸೂಚಿಸಿದ ಅವರು, ಹೆಣ್ಣು ಮತ್ತು ಗಂಡು ಮಕ್ಕಳಿಗೆ ಪ್ರತ್ಯೇಕ ಶೌಚಾಲಯ ನಿರ್ಮಾಣಕ್ಕೆ ಗ್ರಂಥಾಲಯ ಆವರಣದ ಕಾಂಪೌಂಡ್ ಅನ್ನು ಕಡಿಮೆ ವೆಚ್ಚದಲ್ಲಿ ಎತ್ತರಿಸಲು ಕ್ರಿಯಾ ಯೋಜನೆ ತಯಾರಿಸಿ ಎಂದು ಸೂಚನೆ ತಿಳಿಸಿದರು.

ಜಿಲ್ಲಾ ಕೇಂದ್ರ ಗ್ರಂಥಾಲಯದ ಉಪ ನಿರ್ದೇಶಕಿ ಹಸೀನಾ ತಾಜ್, ನಗರ ಕೇಂದ್ರ ಗ್ರಂಥಾಲಯದ ಉಪ ನಿರ್ದೇಶಕಿ ನಳಿನಿ, ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ರಾಮಕೃಷ್ಣ, ತಹಶೀಲ್ದಾರ್ ಗೀತಾ, ಮತ್ತಿತರ ಅಧಿಕಾರಿಗಳು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260519-36-428215477

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.