ಹಾಸನ: ಐಸಿಎಸ್ಇ ಹತ್ತನೇ ತರಗತಿ ಪರೀಕ್ಷೆಯಲ್ಲಿ ನಗರದ ಎಸ್.ಆರ್.ಎಸ್ ಪ್ರಜ್ಞಾ ವಿದ್ಯಾ ಶಾಲೆಯ ವಿದ್ಯಾರ್ಥಿಗಳು ಶೇ 100 ಫಲಿತಾಂಶ ಪಡೆದಿದ್ದಾರೆ.

ತನ್ವಿಕಾ ಶೇ 98 ಅಂಕ ಪಡೆದು, ಶಾಲಾ ಟಾಪರ್ ಆಗಿ ಹೊರಹೊಮ್ಮಿದ್ದಾರೆ. ಅಕ್ಷಯ್ ಎಸ್. ಗೌಡ ಶೇ 97.6 ಹಾಗೂ ಶಿಂಸನ ಎಂ. ಶೇ 97 ಅಂಕ ಗಳಿಸಿದ್ದು, ಕ್ರಮವಾಗಿ ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದಿದ್ದಾರೆ.

ಪರೀಕ್ಷೆಗೆ ಹಾಜರಾಗಿದ್ದ 96 ವಿದ್ಯಾರ್ಥಿಗಳಲ್ಲಿ 78 ವಿದ್ಯಾರ್ಥಿಗಳು ಅತ್ಯುತ್ತಮ ಶ್ರೇಣಿ, 18 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಭಾಷಾ ಹಾಗೂ ಕೋರ್ ವಿಷಯಗಳಲ್ಲಿ ಹಲವು ವಿದ್ಯಾರ್ಥಿಗಳು 100ಕ್ಕೆ 100, 99, 98, 97, 96, 95 ಅಂಕ ಗಳಿಸಿದ್ದಾರೆ.

ಈ ವಿದ್ಯಾರ್ಥಿಗಳು ಐಸಿಎಸ್ಇ ಮುಂದುವರಿದ ಭಾಗವಾದ ಐಎಸ್ಸಿ 11ನೇ ತರಗತಿಯನ್ನು ಇದೇ ಶಾಲೆಯಲ್ಲಿ ಮುಂದುವರಿಸಿ 12ನೇ ತರಗತಿಯಲ್ಲಿಯೂ ಉತ್ತಮ ಫಲಿತಾಂಶ ಗಳಿಸಿ ಜಿಲ್ಲೆಗೆ ಕೀರ್ತಿ ತರಲಿ ಎಂದು ಆಶಿಸಿರುವ ಶಾಲಾ ಆಡಳಿತ ಮಂಡಳಿ, ವಿದ್ಯಾರ್ಥಿಗಳನ್ನು ಅಭಿನಂದಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260501-36-1676420885

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.