ಹಾಸನ: ‘ಮಲೆನಾಡು ತಾಂತ್ರಿಕ ಶಿಕ್ಷಣ ಸಂಸ್ಥೆಗೆ ಸಂಬಂಧಿಸಿದ ಪ್ರಕರಣದಲ್ಲಿ ನ್ಯಾಯಾಲಯದಿಂದ ಅಧಿಕೃತ ಆದೇಶ ಪ್ರತಿ ಹೊರಬರುವ ಮುನ್ನವೇ ಬಿ.ಆರ್. ಗುರುದೇವ್ ಹಾಗೂ ಅವರ ತಂಡ ಅಧಿಕಾರ ಸ್ವೀಕರಿಸುತ್ತಿರುವುದು ಕಾನೂನುಬಾಹಿರ’ ಎಂದು ಮಲೆನಾಡು ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಆರ್.ಟಿ. ದೇವೇಗೌಡ ಹಾಗೂ ಕಾರ್ಯದರ್ಶಿ ಸಿ.ಆರ್. ಜಗದೀಶ್ ಅಸಮಾಧಾನ ವ್ಯಕ್ತಪಡಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಅಧಿಕೃತ ಆದೇಶ ಪ್ರಕಟವಾಗುವ ಮುನ್ನವೇ ಬಿ.ಆರ್. ಗುರುದೇವ್, ಜಿ.ಟಿ. ಕುಮಾರ್ ಹಾಗೂ ಎಸ್.ಜಿ. ಶ್ರೀಧರ್ ಅವರು ತಾವು ಅಧ್ಯಕ್ಷ, ಕಾರ್ಯದರ್ಶಿ, ಖಜಾಂಚಿ ಎಂದು ಹೇಳಿಕೊಂಡು ತಕ್ಷಣ ಜಾರಿಗೆ ಬರುವಂತೆ ನ್ಯಾಯಾಲಯ ಆದೇಶ ನೀಡಿದೆ ಎಂಬ ಸುಳ್ಳು ವದಂತಿ ಹಬ್ಬಿಸಿ ತರಾತುರಿಯಲ್ಲಿ ಅಧಿಕಾರ ಸ್ವೀಕರಿಸಿದ್ದಾರೆ’ ಎಂದು ಆರೋಪಿಸಿದರು.

ನ್ಯಾಯಾಲಯದಲ್ಲಿ ನಮ್ಮ ಪರ ವಕೀಲರು ಆಡಳಿತ ಮಂಡಳಿ ಬಗ್ಗೆ ಪ್ರಶ್ನಿಸಿದಾಗ, ‘ನನ್ನ ಆದೇಶ ಹೊರಬರುವವರೆಗೂ ಆಡಳಿತ ಮಂಡಳಿಯಲ್ಲಿ ಯಾವುದೇ ಬದಲಾವಣೆ ಇಲ್ಲ’ ಎಂದು ನ್ಯಾಯಮೂರ್ತಿಗಳು ಸ್ಪಷ್ಟವಾಗಿ ಹೇಳಿದ್ದಾರೆ. ಆದರೂ ನ್ಯಾಯಮೂರ್ತಿಗಳ ಆದೇಶ ಉಲ್ಲಂಘಿಸಲಾಗಿದೆ ಎಂದರು.

ಸಂಸ್ಥೆಯ ವ್ಯಾಪ್ತಿಯ ಕಾಲೇಜುಗಳಿಗೆ ಭೇಟಿ ನೀಡಿ, ತಾವೇ ಅಧಿಕಾರ ವಹಿಸಿಕೊಂಡಿರುವುದಾಗಿ ಪತ್ರ ನೀಡಿದ್ದಾರೆ. ಸಂಸ್ಥೆಯ ಬ್ಯಾಂಕ್ ಖಾತೆಗಳ ಮುಂದಿನ ಹಣಕಾಸು ವ್ಯವಹಾರಗಳಿಗೆ ತಮ್ಮ ಸಹಿಯನ್ನೇ ಬಳಸುವಂತೆ ನೋಟಿಸ್ ನೀಡಿದ್ದಾರೆ ಎಂದು ದೂರಿದರು.

ನ್ಯಾಯಾಲಯದ ಮುಂದೆ ಎಲ್ಲರೂ ಸಮಾನರು. ನಮ್ಮ ವಿರುದ್ಧ ತೀರ್ಪು ಬಂದಿದ್ದರೆ ಅದನ್ನು ಗೌರವಿಸಿ ಅಧಿಕಾರ ಹಸ್ತಾಂತರಿಸಲು ಸಿದ್ಧ. ಆದರೆ ಅಧಿಕೃತ ಆದೇಶ ಹೊರಬರುವ ಮುನ್ನವೇ ಆತುರದ ಕ್ರಮ ಸರಿಯಲ್ಲ ಎಂದು ಸ್ಪಷ್ಟಪಡಿಸಿದರು.

ಗುರುವಾರ ಬೆಳಿಗ್ಗೆ ಆಡಳಿತ ಮಂಡಳಿ ಕಚೇರಿಗೆ ಬಂದ ಗುರುದೇವ್ ಹಾಗೂ ಬೂವನಹಳ್ಳಿ ಶ್ರೀನಿವಾಸ್ ಅವರು ಕಚೇರಿಯ ಬೀಗದ ಕೀಲಿಗಳನ್ನು ಬಲವಂತವಾಗಿ ತೆಗೆದುಕೊಂಡು ಹೋಗಿದ್ದಾರೆ. ಈ ಸಂಬಂಧ ಪೊಲೀಸರಿಗೆ ದೂರು ನೀಡಲಾಗಿದ್ದು, ಪ್ರಕರಣ ದಾಖಲಾಗಿದೆ ಎಂದು ತಿಳಿಸಿದರು.

ಸಂಸ್ಥೆಯ ವಿವಿಧ ಘಟಕಗಳಲ್ಲಿ ಅನಗತ್ಯ ಗೊಂದಲ ಸೃಷ್ಟಿಸಲಾಗುತ್ತಿದೆ. ಎರಡು ತಿಂಗಳಿಗೂ ಹೆಚ್ಚು ಕಾಲ ತೀರ್ಪಿಗಾಗಿ ಕಾಯಲಾಗಿದ್ದು, ಅಧಿಕೃತ ಆದೇಶ ಪ್ರತಿ 2–3 ದಿನಗಳಲ್ಲಿ ವೆಬ್ಸೈಟ್ನಲ್ಲಿ ಲಭ್ಯವಾಗುವ ಸಾಧ್ಯತೆ ಇದೆ. ಆದೇಶ ಬಂದ ಕೂಡಲೇ ಕಾನೂನಿನ ಪ್ರಕಾರ ಅಧಿಕಾರ ಹಸ್ತಾಂತರಿಸುತ್ತೇವೆ ಎಂದು ಹೇಳಿದರು.

ಈ ಕುರಿತು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ನೀಡಲಾಗುವುದು ಎಂದು ತಿಳಿಸಿದರು.

ಸಂಸ್ಥೆಯ ನಿರ್ದೇಶಕರಾದ ಜಿ.ಎಲ್.ಮುದ್ದೇಗೌಡ, ನಾಗರಾಜ್, ಸುರೇಶ್, ಪಾರ್ಶ್ವನಾಥ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260505-36-1244782279

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.