ಹಾಸನ: ತಾಯಂದಿರ ನಿಸ್ವಾರ್ಥ ಸೇವೆ, ಪ್ರೀತಿ, ತ್ಯಾಗವನ್ನು ಪ್ರತಿಯೊಬ್ಬರೂ ಗೌರವಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರಾದ ದಾಕ್ಷಾಯಿಣಿ ಜಿ.ಕೆ. ಹೇಳಿದರು.

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ ಹಮ್ಮಿಕೊಂಡಿದ್ದ ವಿಶ್ವ ಅಮ್ಮಂದಿರ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.

ತಾಯಂದಿರ ದಿನದಂದು ತಾಯಂದಿರು ಮತ್ತು ತಾಯ್ತನವನ್ನು ಅವರ ಪ್ರೀತಿ, ತ್ಯಾಗ ಮತ್ತು ಕುಟುಂಬ, ಸಮಾಜಕ್ಕೆ ನೀಡಿದ ಕೊಡುಗೆಗಳಿಗಾಗಿ ಗೌರವಿಸುವ ಮಹತ್ತರ ಕಾರ್ಯ ನಡೆಯುತ್ತದೆ. ಜಗತ್ತಿನಲ್ಲಿ ‘ಅಮ್ಮ’ ಎನ್ನುವ ಪದಕ್ಕೆ ಇರುವ ಶಕ್ತಿ ಅಪ್ರತಿಮ. ನಿಸ್ವಾರ್ಥವಾಗಿ ಮಕ್ಕಳಿಗೆ ಎಲ್ಲವನ್ನೂ ನೀಡುವ ತಾಯಂದಿರನ್ನು ಗೌರವಿಸುವ ಸಲುವಾಗಿ ಮೇ ತಿಂಗಳ ಎರಡನೇ ಭಾನುವಾರವನ್ನು ವಿಶ್ವ ಅಮ್ಮಂದಿರ ದಿನವನ್ನಾಗಿ ಆಚರಿಸಲಾಗುತ್ತದೆ ಎಂದು ಹೇಳಿದರು.

ಮಲ್ನಾಡ್ ಆಸ್ಪತ್ರೆಯ ಸ್ತ್ರೀರೋಗ ತಜ್ಞೆ ಡಾ.ಎ.ಸಾವಿತ್ರಿ ಮಾತನಾಡಿ, ಇತ್ತೀಚೆಗೆ ತಾಯಂದಿರಿಗೆ ಬಹುವಾಗಿ ಕಾಡುವ ಕಾಯಿಲೆಗಳೆಂದರೆ ಗರ್ಭಕೋಶದ ಕ್ಯಾನ್ಸರ್ ಹಾಗೂ ಸ್ತನ ಕ್ಯಾನ್ಸರ್. ಎಷ್ಟೋ ತಾಯಂದಿರು ಮಕ್ಕಳಿಗಾಗಿ, ಮನೆಯ ಕಾರ್ಯಗಳಿಗಾಗಿ, ಕೌಟುಂಬಿಕ ಕಾರಣಕ್ಕಾಗಿ ಹಲವು ನೋವು ಅನುಭವಿಸಿದರೂ ಹೇಳಿಕೊಳ್ಳದೆ ಮುಚ್ಚಿಟ್ಟುಕೊಂಡು ಮೂರನೇ ಹಂತಕ್ಕೆ, ಅಂತಿಮ ಹಂತಕ್ಕೆ ಬಂದಾಗ ಆಸ್ಪತ್ರೆಗೆ ಬರುತ್ತಾರೆ. ಅಷ್ಟೊತ್ತಿಗಾಗಲೇ ಪರಿಸ್ಥಿತಿ ಕೈಮೀರಿ ಹೋಗಿರುತ್ತದೆ ಎಂದು ಕಳವಳ ವ್ಯಕ್ತಪಡಿಸಿದರು.

ಅಮ್ಮಂದಿರ ದಿನಾಚರಣೆ ಕೇವಲ ಅಮ್ಮಂದಿರಿಗಲ್ಲ. ಎಲ್ಲ ಪುರುಷರು ತಮ್ಮ ತಾಯಿ, ಅಕ್ಕ, ತಂಗಿ, ಹೆಂಡತಿ, ಮಕ್ಕಳ ಆರೋಗ್ಯದ ಬಗ್ಗೆಯೂ ಗಮನಹರಿಸಿ. ಆಗಾಗ್ಗೆ ಆಸ್ಪತ್ರೆಗೆ ತೋರಿಸುವ ಕಾಳಜಿ ವಹಿಸಬೇಕು. ಗರ್ಭಕೋಶದ ಕ್ಯಾನ್ಸರ್ ಗರ್ಭಾಶಯದ ಒಳಪದರದಲ್ಲಿ ಉಂಟಾಗುವ ಅಸಹಜ ಬೆಳವಣಿಗೆ. ಇದು ಮುಖ್ಯವಾಗಿ ಋತುಬಂಧದ ನಂತರದ ಮಹಿಳೆಯರಲ್ಲಿ ಕಂಡುಬರುತ್ತದೆ. ಆರಂಭಿಕ ಹಂತದಲ್ಲಿ ಪತ್ತೆ ಹಚ್ಚಿದರೆ ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತದೆ ಎಂದರು.

ಸ್ತನ ಕ್ಯಾನ್ಸರ್ ಎಂದರೆ ಸ್ತನದ ಜೀವಕೋಶಗಳಲ್ಲಿ, ವಿಶೇಷವಾಗಿ ಹಾಲು ಉತ್ಪಾದಿಸುವ ನಾಳಗಳಲ್ಲಿ ಕ್ಯಾನ್ಸರ್ ಕೋಶಗಳು ಅನಿಯಂತ್ರಿತವಾಗಿ ಬೆಳೆದು ಗಡ್ಡೆಯಾಗುವ ಸ್ಥಿತಿ. ಆರಂಭಿಕ ಹಂತದಲ್ಲಿ ಪತ್ತೆ ಹಚ್ಚಿ, ಚಿಕಿತ್ಸೆ ನೀಡಿದರರೆ ಗುಣಪಡಿಸಬಹುದು ಎಂದರು.

ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಮಾಜಿ ಗೌರವಾಧ್ಯಕ್ಷ ರವಿ ನಾಕಲಗೂಡು ಮಾತನಾಡಿ, ಭಾರತದಲ್ಲಿ ತಾಯಂದಿರ ದಿನವು ಅಪಾರ ಸಾಂಸ್ಕೃತಿಕ ಮತ್ತು ಭಾವನಾತ್ಮಕ ಮಹತ್ವವನ್ನು ಹೊಂದಿದ್ದು, ತಾಯಂದಿರ ನಿಸ್ವಾರ್ಥ ಪ್ರೀತಿ ಮತ್ತು ತ್ಯಾಗಗಳನ್ನು ಗೌರವಿಸುತ್ತದೆ. ಬಾಂಧವ್ಯವನ್ನು ಬಲಪಡಿಸುತ್ತದೆ ಎಂದರು.

ಭಾರತ್ ಸ್ಕೌಟ್ಸ್ ಗೈಡ್ಸ್ ಜಿಲ್ಲಾ ಸಮಿತಿ ಉಪಾಧ್ಯಕ್ಷೆ ಎಂ.ಬಿ. ಗಿರಿಜಾಂಬಿಕಾ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಕಾರ್ಯದರ್ಶಿ ಸುರೇಶ್ ಗುರೂಜಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾ ಗೈಡ್ ಆಯುಕ್ತೆ ಜಯಾ ರಮೇಶ್, ಆಲೂರು ತಾಲ್ಲೂಕು ಕಾರ್ಯದರ್ಶಿ ಕೊಟ್ರೇಶ್ ಎಸ್. ಉಪ್ಪಾರ್, ಜಿಲ್ಲಾ ತರಬೇತಿ ಆಯುಕ್ತ ಎಂ.ಎಸ್. ಪ್ರಕಾಶ್, ಹಿರಿಯ ಗೈಡ್ ಕ್ಯಾಪ್ಟನ್ ಎಚ್.ಜಿ. ಕಾಂಚನಮಾಲ, ಜಿಲ್ಲಾ ಖಜಾಂಚಿ ಆರ್.ಎಸ್. ರಮೇಶ್, ರಾಜ್ಯ ಸಹಾಯಕ ಸಂಘಟನಾ ಆಯುಕ್ತೆ ಎಚ್.ಎಂ. ಪ್ರಿಯಾಂಕಾ, ಶಿಬಿರ ನಾಯಕಿ ಬಿ.ಎಲ್. ಮಮತಾ, ಸಂಪನ್ಮೂಲ ವ್ಯಕ್ತಿ ಸೋಫಿಯಾ ಫನಾಂಡಿಸ್, ಗೈಡ್ ಕ್ಯಾಪ್ಟನ್ ಲತಾಮಣಿ ಎಂ.ಕೆ. ತುರುವೇಕೆರೆ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260514-36-999129291

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.