ಹಾಸನ: ವಲಯ 9ರ ವ್ಯಾಪ್ತಿಯಲ್ಲಿರುವ ರೋಟರಿ ಕ್ಲಬ್ ಆಫ್ ಹಾಸನ ರಾಯಲ್ 2025-26ನೇ ಸಾಲಿನಲ್ಲಿ ಗುಣಮಟ್ಟದ ಸಾಮಾಜಿಕ ಕಾರ್ಯಗಳನ್ನು ಮಾಡುವಲ್ಲಿ ಯಶಸ್ವಿಯಾಗಿದ್ದು, ಸಕ್ರಿಯವಾಗಿ ಸಂಸ್ಥೆ ಕಾರ್ಯನಿರ್ವಹಿಸಿದೆ ಎಂದು ರೋಟರಿ 3182 ಜಿಲ್ಲಾ ಗವರ್ನರ್ ಕೆ. ಪಾಲಾಕ್ಷ ಹೇಳಿದರು.

ನಗರದ ಖಾಸಗಿ ಹೋಟೆಲ್ನಲ್ಲಿ ಈಚೆಗೆ ನಡೆದ ಜಿಲ್ಲಾ ಗವರ್ನರ್ ಅಧಿಕೃತ ಭೇಟಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರೋಟರಿ ರಾಯಲ್ ಈ ವರ್ಷ ವಿಶೇಷವಾಗಿ ತನ್ನ ವರ್ಷವನ್ನು ಆರಂಭಿಸಿತು. ವರ್ಷದ ಆರಂಭದಲ್ಲೇ ಸುಮಾರು 10 ಸಾವಿರ ಸಸಿಗಳನ್ನು ವಿತರಣೆ ಮಾಡುವ ಮೂಲಕ ಒಳ್ಳೆಯ ಸಂದೇಶವನ್ನು ಸಮಾಜಕ್ಕೆ ನೀಡಿದೆ ಎಂದರು.

ಎಲ್ಲ ಕಾರ್ಯಕ್ರಮಗಳು ಗುಣಮಟ್ಟದಿಂದ ಕೂಡಿದ್ದು, ಈ ವರ್ಷ ರಾಯಲ್ ಕ್ಲಬ್ಗೆ ಪಬ್ಲಿಕ್ ಇಮೇಜ್ ಪ್ರಶಸ್ತಿ ಕೂಡ ಲಭಿಸಿದೆ. ನಮ್ಮ 3182ರ ವಲಯದಲ್ಲಿರುವ 90 ಕ್ಲಬ್ಗಳ ಪೈಕಿ ರಾಯಲ್ ಕ್ಲಬ್ಗೆ ಈ ಪ್ರಶಸ್ತಿ ದೊರೆತ್ತಿರುವುದು ಗುಣಮಟ್ಟವನ್ನು ಪ್ರದರ್ಶಿಸುತ್ತದೆ ಎಂದರು.

ರೋಟರಿ ಸಂಸ್ಥೆಗಳು ಶಿಕ್ಷಣ, ಆರೋಗ್ಯ, ಕೃಷಿ ಸೇರಿದಂತೆ ಇನ್ನಿತರ ಪ್ರಮುಖ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿಕೊಂಡು ಬರುತ್ತಿದೆ. ಪ್ರತಿಯೊಂದು ಕ್ಲಬ್ಗಳು ತಮ್ಮ ಜವಾಬ್ದಾರಿಯನ್ನು ಅರಿತು ಕೆಲಸ ಮಾಡಿದರೆ ಸ್ವಸ್ಥ ಸಮಾಜವನ್ನು ನಿರ್ಮಾಣ ಮಾಡಲು ಸಹಕಾರಿಯಾಗುತ್ತದೆ. ಸಮಾಜದಿಂದ ಗಳಿಸಿಕೊಂಡಿದ್ದನ್ನು ಪುನಃ ಸಮಾಜಕ್ಕೆ ಹಿಂದಿರುಗಿಸಿ ಕೊಡಬೇಕಾದಲ್ಲಿ ಪ್ರತಿಯೊಬ್ಬರು ರೋಟರಿಯೊಂದಿಗೆ ಕೈಜೋಡಿಸಿ ಕೆಲಸ ಮಾಡಬೇಕು ಎಂದರು.

ವಲಯ 9ರ ಸಹಾಯಕ ಗವರ್ನರ್ ಜಿ.ಎನ್. ಮಂಜುನಾಥ್ ಮಾತನಾಡಿ, ರಾಯಲ್ ಕ್ಲಬ್ನಲ್ಲಿ ಬಹುತೇಕ ಯುವ ಸದಸ್ಯರೇ ಹೆಚ್ಚಾಗಿರುವುದರಿಂದ ಹೊಸ ಆಲೋಚನೆ, ಹೊಸ ಪರಿಕಲ್ಪನೆಯೊಂದಿಗೆ ಗುಣಮಟ್ಟದ ಕಾರ್ಯಕ್ರಮಗಳನ್ನು ಈ ವರ್ಷ ಸಮಾಜಕ್ಕೆ ನೀಡಿದ್ದಾರೆ ಮುಂಬರುವ ದಿನಗಳಲ್ಲಿ ಇದು ಹೀಗೆ ಮುಂದುವರಿಯಲಿ ಎಂದು ಹೇಳಿದರು.

ವಲಯ 9ರ ವಲಯ ಸೇನಾನಿ ಮಮತಾ ಪಾಟೀಲ್ ಮಾತನಾಡಿ, ಈ ವರ್ಷದ ಅಧ್ಯಕ್ಷರಾಗಿದ್ದ ಬಿ.ಕೆ. ಟೈಮ್ಸ್ ಗಂಗಾಧರ್ ನೇತೃತ್ವದಲ್ಲಿ ಹಲವು ವಿಭಿನ್ನ ಕಾರ್ಯಕ್ರಮಗಳು ಮೂಡಿ ಬಂದವು. ಅವರು ರೋಟರಿ ಕ್ಲಬ್ ಅಧ್ಯಕ್ಷರಾಗಿದ್ದ ಅವಧಿಯಲ್ಲಿಯೇ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಕೂಡ ಲಭಿಸಿದ್ದು ವಿಶೇಷವಾಗಿತ್ತು ಎಂದರು.

ಅಧ್ಯಕ್ಷತೆ ವಹಿಸಿದ್ದ ರೋಟರಿ ರಾಯಲ್ ಕ್ಲಬ್ ಅಧ್ಯಕ್ಷ ಬಿ.ಕೆ. ಟೈಮ್ಸ್ ಗಂಗಾಧರ್ ಮಾತನಾಡಿ, ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಲು ರೋಟರಿ ಸಂಸ್ಥೆ ಉತ್ತಮ ವೇದಿಕೆಯಾಗಿದೆ. ನಮ್ಮ ರಾಯಲ್ ಕ್ಲಬ್ನ ಪದಾಧಿಕಾರಿಗಳು ಹಾಗೂ ಸದಸ್ಯರೊಂದಿಗೆ ಸಹಕಾರ ಪಡೆದು ಈ ವರ್ಷ ನಮ್ಮ ಕ್ಲಬ್ ಉತ್ತಮವಾಗಿ ಕಾರ್ಯನಿರ್ವಹಣೆ ಮಾಡಲು ಸಾಧ್ಯವಾಯಿತು ಎಂದರು.

ರೋಟರಿ ಕ್ಲಬ್ ಆಫ್ ಹಾಸನ ರಾಯಲ್ ಕಾರ್ಯದರ್ಶಿ ರವಿ ಕುಮಾರ್ ಪಿ., ಖಜಾಂಚಿ ದಿಲೀಪ್ ಕುಮಾರ್ ಎಚ್.ಕೆ. ಹಾಗೂ ಪದಾಧಿಕಾರಿಗಳು, ಸದಸ್ಯರು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260505-36-1365129734

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.