ಹಾಸನ: ನಗರದ ಬಿ.ಕಾಟಿಹಳ್ಳಿಯಲ್ಲಿರುವ ಸಂತ ಜೋಸೆಫರ ಕಾಲೇಜಿನಲ್ಲಿ 2026 ನೇ ಸಾಲಿನ ರಾಜ್ಯಮಟ್ಟದ ಸಾಂಸ್ಕೃತಿಕ, ಕ್ರೀಡಾ ಮತ್ತು ಆಟೋ ಎಕ್ಸ್ಪೋ (ಎಕ್ಸ್ ಪ್ಲೋರಿಕಾ)ಅನ್ನು ಈಚೆಗೆ ಆಯೋಜಿಸಲಾಗಿತ್ತು.

ಉದ್ಘಾಟಿಸಿ ಮಾತನಾಡಿದ ಫಾ.ಫಿಲಿಕ್ಸ್, ವಿದ್ಯಾರ್ಥಿಗಳು ತಮ್ಮಲ್ಲಿರುವ ಪ್ರತಿಭೆ ಬೆಳಗಿಸಲು ಇಂತಹ ಕಾರ್ಯಕ್ರಮಗಳು ಉತ್ತಮ ವೇದಿಕೆಯಾಗಿವೆ ಎಂದು ಅಭಿಪ್ರಾಯಪಟ್ಟರು. ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಫಾ.ಮ್ಯಾಕ್ಸಿಮ್ ಡಯಾಸ್ ಮಾತನಾಡಿ, ‘ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಾಸ ಮತ್ತು ಸಮಗ್ರ ಬೆಳವಣಿಗೆಗೆ ಇಂತಹ ಚಟುವಟಿಕೆಗಳು ಸಹಾಯಕವಾಗುತ್ತವೆ’ ಎಂದು ಹೇಳಿದರು.

ಕಾಲೇಜಿನ ಸ್ಟುಡೆಂಟ್ ಗವರ್ನರ್ ಅನಿಲ್ ಎಂ.ಎಸ್. ಮಾತನಾಡಿ, ಕಾರ್ಯಕ್ರಮದ ರೂಪುರೇಷೆ ಬಗ್ಗೆ ತಿಳಿಸಿದರು.

ರಾಯಲ್ ಎನ್ಫೀಲ್ಡ್ ಬೈಕ್ ಸ್ಟಂಟ್, ಬಾಕ್ಸ್ ಕ್ರಿಕೆಟ್, ಇ-ಸ್ಪೋರ್ಟ್ಸ್, ಬಿಸಿನೆಸ್ ಕ್ವಿಜ್, ಚರ್ಚಾ ಸ್ಪರ್ಧೆ, ಟೀಮ್ ಬಿಲ್ಡಿಂಗ್, ಮೇಹಂದಿ, ಗುಂಪು ನೃತ್ಯ, ರೀಲ್ಸ್ ಮೇಕಿಂಗ್, ಗ್ರೂಪ್ ಸಾಂಗ್, ಫ್ಯಾಷನ್ ವಾಕ್ ಹಾಗೂ ವಿವಿಧ ಸಾಂಸ್ಕೃತಿಕ ಚಟುವಟಿಕೆಗಳು ಪ್ರೇಕ್ಷಕರ ಗಮನ ಸೆಳೆದವು. ಸುಮಾರು 600 ಮಂದಿ ವಿವಿಧ ಪದವಿ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260424-36-684672675

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.