ಹಾಸನ: ಗ್ರಾಮೀಣ ಪ್ರದೇಶಗಳಲ್ಲಿ ಅಂಬೇಡ್ಕರ್ ಅವರ ವಿಚಾರಗಳನ್ನು ತಲುಪಿಸುವ ಕಾರ್ಯಕ್ಕೆ ಸಂಘಟನೆಗಳು ಮುಂದಾಗಬೇಕು ಎಂದು ದ.ಸಂ.ಸ. ರಾಜ್ಯ ಸಂಘಟನಾ ಸಂಚಾಲಕ ಈರೇಶ್ ಹಿರೇಹಳ್ಳಿ ಸಲಹೆ ನೀಡಿದರು.

ದ.ಸಂ.ಸ. (ಅಂಬೇಡ್ಕರ್ ವಾದ) ಜಿಲ್ಲಾ ಸಮಿತಿಯಿಂದ ನಗರದ ಸ್ವಾಭಿಮಾನ ಭವನದಲ್ಲಿ ಆಯೋಜಿಸಿದ್ದ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ 135ನೇ ಜಯಂತಿ ಹಾಗೂ ದ.ಸಂ.ಸ. ಸಂಸ್ಥಾಪಕ ಸದಸ್ಯರಲ್ಲಿ ಒಬ್ಬರಾದ ದಿವಂಗತ ಬಿ.ವಿ. ಚಂದ್ರಪ್ರಸಾದ್ ತ್ಯಾಗಿ ಅವರ 75ನೇ ಜಯಂತಿ ನೆನಪಿನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಅಂಬೇಡ್ಕರ್ ಜಯಂತಿ ಆಡಂಬರದ ಆಚರಣೆಗಳಾಗುತ್ತಿರುವುದು ವಿಷಾದನೀಯ. ಅಂಬೇಡ್ಕರ್ ಅವರ ಚಿಂತನೆಗಳಿಗೆ ಭಾವನಾತ್ಮಕ ನಂಟು ಬೆಳೆಸಿಕೊಳ್ಳುವುದು ಅಗತ್ಯವಿದೆ ಎಂದು ಹೇಳಿದರು.

ಮುಖ್ಯ ಭಾಷಣಕಾರರಾದ ನಗರದ ಸರ್ಕಾರಿ ಕಲಾ, ವಾಣಿಜ್ಯ ಮತ್ತು ಸ್ನಾತಕೋತ್ತರ ಸ್ವಾಯತ್ತ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ. ಮಹೇಶ್ ಎಂ., ಅಂಬೇಡ್ಕರ್ ಅವರ ಚಿಂತನೆಗಳು ಇಂದಿನ ಸಂದರ್ಭದಲ್ಲಿಯೂ ಪ್ರಸ್ತುತವಾಗಿವೆ. ಶಿಕ್ಷಣ ಹಾಗೂ ಆರ್ಥಿಕ ಸಬಲೀಕರಣಕ್ಕೆ ಅವರು ಮಹತ್ವ ನಿಡಿದ್ದು, ವಿದ್ಯಾರ್ಥಿಗಳು ಅಂಬೇಡ್ಕರ್ ಅವರ ಮಾರ್ಗದಲ್ಲಿ ನಡೆದು ಉನ್ನತ ಸ್ಥಾನಗಳನ್ನು ಪಡೆಯಬೇಕು ಎಂದು ಸಲಹೆ ನೀಡಿದರು.

ನಿವೃತ್ತ ಉಪ ತಹಸೀಲ್ದಾರ್ ಕಾಡಯ್ಯ, ಬೋಧಿ ವೃಕ್ಷಕ್ಕೆ ನೀರೆರೆಯುವ ಮೂಲಕ ಉದ್ಘಾಟಿಸಿದರು.

ಮಲ್ನಾಡ್ ಎಂಜಿನಿಯರಿಂಗ್ ಕಾಲೇಜಿನ ನಿವೃತ್ತ ಪ್ರಾಚಾರ್ಯ ಡಾ.ಅತ್ನಿಕೃಷ್ಣ, ಡಾ. ಅಂಬೇಡ್ಕರ್ ಹಾಗೂ ಬಿ.ವಿ. ಚಂದ್ರಪ್ರಸಾದ್ ತ್ಯಾಗಿ ಅವರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಸಲ್ಲಿಸಿದರು.

ಜಿಲ್ಲಾ ಸಂಚಾಲಕ ದುಮ್ಮಿ ಕೃಷ್ಣ ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ಮಹಿಳಾ ಸಂಘಟನಾ ಸಂಚಾಲಕಿ ಸುಮಾ ದುದ್ದ, ಸಿಐಟಿಯು ರಾಜ್ಯ ಘಟಕದ ಉಪಾಧ್ಯಕ್ಷ ಧರ್ಮೇಶ್, ವಿಭಾಗೀಯ ಸಂಘಟನಾ ಸಂಚಾಲಕ ಧರ್ಮೇಶ್ ಕುಪ್ಪೆ, ಲಕ್ಷ್ಮಣ್ ಬೇಲೂರು ಸೇರಿದಂತೆ ಜಿಲ್ಲಾ ಮತ್ತು ತಾಲ್ಲೂಕು ಸಮಿತಿಯ ಪದಾಧಿಕಾರಿಗಳು, ಮಹಿಳಾ ಸಂಘಟನಾ ಪ್ರತಿನಿಧಿಗಳು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260428-36-2093336916

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.