ಹಾಸನ: ‘ನಮ್ಮೂರ ಶಾಲೆಯನ್ನು ಮುಚ್ಚಲು ಬಿಡುವುದಿಲ್ಲ. ನಮ್ಮೂರ ಶಾಲೆ ನಮ್ಮಯ ಕಣ್ಮಣಿ’ ಎಂದು ಘೋಷಣೆ ಕೂಗಿದ ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿ ಸದಸ್ಯರು ಹಾಗೂ ಗ್ರಾಮಸ್ಥರು, ಎಐಡಿಎಸ್ಒ ನೇತೃತ್ವದಲ್ಲಿ ಸಿಂಗಟಗೆರೆ ಮತ್ತು ಗೊರೂರು ಸರ್ಕಾರಿ ಶಾಲೆಗಳ ಮುಂದೆ ಬ್ಯಾನರ್ ಕಟ್ಟಿ ಸೋಮವಾರ ಪ್ರತಿರೋಧ ವ್ಯಕ್ತಪಡಿಸಿದರು.

ಎಐಡಿಎಸ್ಒ ಜಿಲ್ಲಾ ಘಟಕದ ಕಾರ್ಯದರ್ಶಿ ಸುಷ್ಮಾ ಮಾತನಾಡಿ, ‘ನಮ್ಮೂರ ಶಾಲೆ ಉಳಿಯಬೇಕು ಮತ್ತು ಕೆಪಿಎಸ್ ಯೋಜನೆ ರದ್ದಾಗಬೇಕು ಎಂದು ಆಗ್ರಹಿಸಿ ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿ ರಚಿಸಿಕೊಂಡು 5 ತಿಂಗಳಿಂದ ಗ್ರಾಮಸ್ಥರು ಹಾಗೂ ಪೋಷಕರು ಹೋರಾಟ ನಡೆಸುತ್ತಿದ್ದೇವೆ’ ಎಂದರು.

‘ಹಾಸನ ಜಿಲ್ಲೆಯ ನಿಟ್ಟೂರು, ಅರಸೀಕೆರೆ ತಾಲ್ಲೂಕಿನ ಅನೇಕ ಹಳ್ಳಿಗಳ ಶಾಲೆಗಳನ್ನು ವಿಲೀನಗೊಳಿಸುವ ಅಧಿಕೃತ ಪಟ್ಟಿ ಈಗಾಗಲೇ ಹೊರಬಿದ್ದಿದ್ದು, ಗ್ರಾಮಸ್ಥರಿಂದ ಇದಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ. ಬಡವರು, ರೈತರು, ಕಾರ್ಮಿಕರ ಮಕ್ಕಳು ಶಿಕ್ಷಣದಿಂದ ವಂಚಿತರಾದರೂ ಪರವಾಗಿಲ್ಲ ಎಂಬಂತೆ ಕೆಪಿಎಸ್ ಯೋಜನೆಯನ್ನು ಜಾರಿಗೊಳಿಸಲು ಸರ್ಕಾರ ಮುಂದಾಗಿದೆ’ ಎಂದು ಆರೋಪಿಸಿದರು.

‘ಪೋಷಕರ ಒಪ್ಪಿಗೆ ಪಡೆದು ಕೆಪಿಎಸ್ ಶಾಲೆಗೆ ದಾಖಲಾತಿ ಮಾಡುತ್ತೇವೆ ಎಂದು ಹೇಳಿದ್ದ ಸರ್ಕಾರ, ಈಗ ಹಾಸನ ಜಿಲ್ಲೆಯ ಹಲವಾರು ಶಾಲೆಗಳಲ್ಲಿ ಪೋಷಕರ ಒಪ್ಪಿಗೆ ಪಡೆಯದೇ ಮಕ್ಕಳನ್ನು ಕೆಪಿಎಸ್ ಶಾಲೆಗೆ ಸೇರಿಸಿ ಎಂದು ಒತ್ತಾಯಿಸುತ್ತಿದೆ. ಇದು ಸರ್ಕಾರದ ಅಪ್ರಜಾತಾಂತ್ರಿಕ ಧೋರಣೆಯನ್ನು ಎತ್ತಿ ತೋರಿಸುತ್ತದೆ. ಜನರು ಒಗ್ಗಟ್ಟಾಗಿ ತಮ್ಮೂರ ಸರ್ಕಾರಿ ಶಾಲೆಗಳನ್ನು ಉಳಿಸಿಕೊಳ್ಳಲು ಪ್ರತಿರೋಧ ಒಡ್ಡಬೇಕು’ ಎಂದರು.

‘ನಮ್ಮೂರ ಶಾಲೆಗೆ ಸಮರ್ಪಕ ಸೌಲಭ್ಯ ಹಾಗೂ ಶಿಕ್ಷಕರನ್ನು ನೀಡಿ ಅಭಿವೃದ್ಧಿಪಡಿಸಬೇಕು ಎಂಬುದು ನಮ್ಮೆಲ್ಲರ ಒಕ್ಕೊರಲ ಆಗ್ರಹ. ಯಾವುದೇ ಕಾರಣಕ್ಕೂ ನಮ್ಮೂರ ಶಾಲೆ ಮುಚ್ಚಬಾರದು’ ಎಂದು ಆಗ್ರಹಿಸಿದರು.

ಗ್ರಾಮಸ್ಥರಾದ ನಾರಾಯಣಸ್ವಾಮಿ, ಗಣೇಶ್, ಶಿವಣ್ಣ, ರಜನಿ, ಶೀಲಾ, ಲೋಕೇಶ್, ಪ್ರೀತಾ ಹಾಗೂ ಜಿಲ್ಲಾ ಉಪಾಧ್ಯಕ್ಷ ಅಭಿಷೇಕ್ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260512-36-195578138

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.