ಹಟ್ಟಿ ಚಿನ್ನದ ಗಣಿ: ‘ಪಾಲಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಿ ಸರ್ಕಾರದ ಸೌಲಭ್ಯಗಳನ್ನು ಪಡೆದು ಮಕ್ಕಳು ಅಭಿವೃದ್ದಿ ಹೊಂದುವಂತೆ ಮಾಡಬೇಕು’ ಎಂದು ಗೆಜ್ಜಲಗಟ್ಟಾ ಗ್ರಾಮ ಪಂಚಾಯಿತಿ ಪಿಡಿಒ ಗೀತಾ ಹೇಳಿದರು.

ಹಟ್ಟಿ ಸಮೀಪದ ಗೆಜ್ಜಲಗಟ್ಟಾ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ಮಕ್ಕಳಿಗೆ ಪಠ್ಯಪುಸ್ತಕ ವಿತರಣೆ ಮಾಡಿ ಅವರು ಮಾತನಾಡಿದರು.

‘ಸರ್ಕಾರಿ ಶಾಲೆ ಎಂಬ ಕೀಳರಿಮೆ ಬೇಡ. ಮಕ್ಕಳ ಶಿಕ್ಷಣ ಅಭಿವೃದ್ದಿ ಪಡಿಸಲು ವಿದ್ಯಾರ್ಥಿಗಳಿಗೆ ಉಚಿತವಾಗಿ, ಪಠ್ಯಪುಸ್ತಕ, ಸೈಕಲ್, ಬಿಸಿಯೂಟ, ಮೊಟ್ಟೆ, ಹಣ್ಣು ನೀಡಲಾಗುತ್ತಿದೆ. ಇದನ್ನು ವಿದ್ಯಾರ್ಥಿಗಳು ಸದುಪಯೋಗ ಪಡಿಸಿಕೊಂಡು ಜ್ಞಾನ ಸಂಪಾದಿಸಿ, ಕಲಿತ ಶಾಲೆಗೆ ಕೀರ್ತಿ ತರಬೇಕು’ ಎಂದು ಅವರು ಕಿವಿ ಮಾತು ಹೇಳಿದರು.

‘ಸರ್ಕಾರಿ ಶಾಲೆಯಲ್ಲಿ ಕಲಿತ ಬಹಳಷ್ಟು ವಿದ್ಯಾರ್ಥಿಗಳು ಸರ್ಕಾರಿ ನೌಕರಿ ಪಡೆದು ಸಮಾಜ ಸೇವೆ ಮಾಡುತ್ತಿದ್ದಾರೆ. ಅದರಂತೆ ವಿದ್ಯಾರ್ಥಿಗಳು ಶಿಕ್ಷಕರು ನೀಡುವ ಪಾಠಗಳನ್ನು ಆಲಿಸಿ ಉತ್ತಮ ಅಂಕ ಪಡೆಯಿರಿ’ ಎಂದರು.

ಈ ಸಂದರ್ಭದಲ್ಲಿ ಗೆಜ್ಜಲಗಟ್ಟಾ ಸರ್ಕಾರಿ ಪ್ರಾಥಮಿಕ ಶಾಲೆಯ ಎಸ್ಡಿಎಂಸಿ ಅಧ್ಯಕ್ಷ, ಗ್ರಾಮ ಪಂಚಾಯಿತಿ ಸದಸ್ಯರು, ಮಕ್ಕಳು ಪಾಲಕರು, ಗ್ರಾಮಸ್ಥರು ಉಪಸ್ಧಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260602-32-701576210

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.